ಕೆಪಿಎಸ್ಸಿ ನೇಮಕಾತಿ ವಿವಾದ: 362 ಅಭ್ಯರ್ಥಿಗಳಿಗೆ ಶುಭ ಸುದ್ದಿ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 19: ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಬುಧವಾರ ಶುಭ ಸುದ್ದಿ ಸಿಕ್ಕಿದೆ. 2011ರ ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ರದ್ದುಗೊಳಿಸಿದೆ.

ಈ ಮೂಲಕ ನೊಂದ ಅಭ್ಯರ್ಥಿಗಳ ಕಾನೂನು ಹೋರಾಟಕ್ಕೆ ಜಯಸಿಕ್ಕಿದೆ. ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳನ್ನು ಎರಡು ತಿಂಗಳೊಳಗೆ ನೇಮಕ ಮಾಡುವಂತೆ ಸರ್ಕಾರಕ್ಕೆ ಕೆಎಟಿ ಸೂಚಿಸಿದೆ. [ನೇಮಕಾತಿ ರದ್ದು, ಸಿಡಿದೆದ್ದ ಅಭ್ಯರ್ಥಿಗಳು]

Relief for KPSC candidates, KAT quashes Karnataka Government 2011 order

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 362 ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡಿದ್ದ ಆಯ್ಕೆ ಪಟ್ಟಿಯನ್ನು ಕರ್ನಾಟಕ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಮುಂದೆ ಪ್ರಶ್ನಿಸಲಾಗಿತ್ತು. [ಹಗರಣದಲ್ಲಿ ಮಂಗಳಾ ಶ್ರೀಧರ್ ಪಾತ್ರವೇನು?]

2011ನೇ ಸಾಲಿನ ಎ ಹಾಗೂ ಬಿ ದರ್ಜೆ ಪತ್ರಾಂಕಿತ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದ ಆಯ್ಕೆ ಪಟ್ಟಿ ರದ್ದುಗೊಳಿಸಿ ಆ.14, 2014ರಂದು ಕೈಗೊಂಡಿರುವ ಸರ್ಕಾರದ ನಿರ್ಧಾರವನ್ನು ಅರ್ಜಿದಾರರು ಪ್ರಶ್ನಿಸಿದ್ದರು.

362 ಹುದ್ದೆಗಳ ನೇಮಕಕ್ಕೆ ಕೆಪಿಎಸ್‌ಸಿ 2014 ಮಾ.21ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಕೂಡಾ ಪಟ್ಟಿ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಪ್ರಕರಣ ಸಿಐಡಿ ತನಿಖೆಗೆ ಒಳಪಟ್ಟು, ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬಯಲಿಗೆ ಬಂದಿತ್ತು.

ಸರ್ಕಾರದ ನಿರ್ಧಾರ ವಿರೋಧಿಸಿ ಒಂದು ತಿಂಗಳಿನಿಂದ ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಸಂಧಾನದ ಮೂಲಕ ಸತ್ಯಾಗ್ರಹ ವಾಪಸ್ ಪಡೆದ ಅಭ್ಯರ್ಥಿಗಳು ಕಾನೂನು ಹೋರಾಟ ಮುಂದುವರೆಸಿ, ಜಯ ಗಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Relief for KPSC candidates, Karnataka Administrative Tribunal (KAT) today(October 19) quashed Karnataka Government's 2011 order of rejecting the recruitment of 362 candidates.
Please Wait while comments are loading...