Get Updates
Get notified of breaking news, exclusive insights, and must-see stories!

ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನವೆಂಬರ್‌ 29: ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಎನ್ ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಹೆಚ್‌ ಡಿ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದು ಅಭಿಪ್ರಾಯಪಟ್ಟರು.

Religious Institutions Not To Interfere In Politics HD Kumaraswamy

ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕಲಹದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ. ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಎಂದು ಹೇಳಿದರು

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಈ ಸರ್ಕಾರಕ್ಕೆ ರಾಜ್ಯದ ಜನ 140 ಸ್ಥಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಟ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಅವರು ಕಿಡಿಕಾರಿದರು.

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿವೆ ಎಂದು ಸಿಎಂ ಹೇಳಿರುವ ಬಗ್ಗೆ ಕೆಂಡ ಕಾರಿದ ಸಚಿವ ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರು ಒಬ್ಬರೇ ಸತ್ಯ ಹರಿಶ್ಚಂದ್ರ. ಪಾಪ.. ಸತ್ಯ ಹರಿಶ್ಚಂದ್ರ ಕಾಡಿಗೆ ಹೋಗಬೇಕಾದರೆ ಸಿದ್ದರಾಮಯ್ಯನ ಹುಂಡಿ ಮೇಲೆ ಹೋಗಿರಬೇಕು. ಅದಕ್ಕೆ ಸಿದ್ದರಾಮಯ್ಯ ಹೀಗೆ ಹೇಳುತ್ತಿರಬಹುದು ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

2028ರ ಚುನಾವಣೆ ತುಂಬಾ ದೂರಾ ಇದೆ. ತೇಜಸ್ವಿ ಯಾದವ್ ಬಿಹಾರದಲ್ಲಿ ಪ್ರಮಾಣ ವಚನ ದಿನಾಂಕವನ್ನೇ ನಿಗದಿ ಮಾಡಿದ್ದರು. ಆದರೆ ಅಲ್ಲಿ ಏನು ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಅನಗತ್ಯ ಜಾತಿ ಧರ್ಮವನ್ನು ಎಳೆದುತಂದು ಜನರನ್ನು ಪರಸ್ವರ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ. ಇದು ಆಗಬಾರದು. ಒಕ್ಕಲಿಗ, ಕುರುಬರ ಮತ್ತು ಇತರ ಸಮಾಜದ ಸ್ವಾಮೀಜಿಗಳ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ. ಧರ್ಮ ಸಂಘರ್ಷ ಮಾಡಬಾರದು ಎಂದು ಸಚಿವರು ಹೇಳಿದರು.

ಎಲ್ಲಾ ರೀತಿಯಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ವಿಫಲವಾಗಿದೆ. ಜನರ ಪರವಾಗಿ ದನಿಯೆತ್ತಲಿಕ್ಕಾಗಿಯೇ ನಾವು ಇಲ್ಲಿ ಸಭೆ ಸೇರಿದ್ದೇವೆ. ಡಿಸೆಂಬರ್ 8ರಿಂದ ಬೆಳಗಾವಿ ಅಧಿವೇಶನ ನಡೆಯುತ್ತದೆ. ಎರಡು ಪಕ್ಷಗಳು ಪರಿಣಾಮಕಾರಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿವೆ. ಬೆಂಗಳೂರಿನಿಂದ ಶಾಸಕರು ಕಾಟಾಚಾರಕ್ಕೆ ಬರುತ್ತಾರೆ ಎನ್ನುವ ಅಭಿಪ್ರಾಯ ಬೇಡ. ಉತ್ತರ ಕರ್ನಾಟಕದ ಜನ ಕಷ್ಟದಲ್ಲಿದ್ದಾರೆ. ನೆರೆ ಬಂದು ಅನೇಕ ಜಿಲ್ಲೆಗಳ ಜನರು ಕಷ್ಟಕ್ಕೆ ಸಿಲುಕಿದ್ದರು. ಆಸ್ತಿ, ಮನೆಮಠ ಕಳೆದುಕೊಂಡ ಜನರ ನೆರವಿಗೆ ರಾಜ್ಯ ಸರ್ಕಾರ ಬಂದಿಲ್ಲ. ಕೇವಲ ಕೇಂದ್ರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದೆ. ತುಂಗಭದ್ರಾ ನೀರು ಬಳಕೆ ಮಾಡುವ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ ಎಂದು ಹೇಳುತ್ತಿದೆ ಸರ್ಕಾರ. ಈ ವಿಷಯವನ್ನು ಎರಡು ಪಕ್ಷಗಳ ಶಾಸಕರು ಸದನದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+