ಲೋಕಾಯುಕ್ತ ಪದಚ್ಯುತಿ ನಿರ್ಣಯ ಸೋಮವಾರ ಮಂಡನೆ

ಬೆಂಗಳೂರು, ನವೆಂಬರ್ 20 : ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್‌ ಅವರ ಪದಚ್ಯುತಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಸೋಮವಾರ ನಿರ್ಣಯ ಮಂಡನೆ ಮಾಡಲಾಗುತ್ತದೆ. ಶುಕ್ರವಾರ ನಿರ್ಣಯವನ್ನು ಮಂಡಿಸದೇ ವಿಧಾನಸಭೆ ಮತ್ತು ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಲೋಕಾಯುಕ್ತರನ್ನು ಪದಚ್ಯುತಿಗೊಳಿಸಲು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸಹಿ ಹಾಕಿದ ಮನವಿ ಪತ್ರವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಮತ್ತು ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಸಲ್ಲಿಸಿದ್ದಾರೆ. [ಲೋಕಾಯುಕ್ತ ಪದಚ್ಯುತಿ ಹೇಗೆ ನಡೆಯುತ್ತದೆ?]

assembly session

ಶುಕ್ರವಾರ ಕಲಾಪದ ವೇಳೆ ನಿರ್ಣಯವನ್ನು ಮಂಡನೆ ಮಾಡಲು ಸಭಾಪತಿಗಳು ಒಪ್ಪಿಗೆ ನೀಡಬೇಕಾಗಿತ್ತು. ಆದರೆ, ಸೋಮವಾರ ಅವಕಾಶ ನೀಡುತ್ತೇನೆ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹೇಳಿದ್ದು, ಇಂದು ನಿರ್ಣಯವನ್ನು ಮಂಡನೆ ಮಾಡಿಲ್ಲ. [ಲೋಕಾಯುಕ್ತ ಪದಚ್ಯುತಿಗೆ ಒಂದಾದ ಬಿಜೆಪಿ, ಜೆಡಿಎಸ್]

ಗುರುವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಕಮಲ್‌ ಪಂತ್‌ ಮತ್ತು ರಾಜ್ಯದ ಅಡ್ವೊಕೇಟ್‌ ಜನರಲ್‌ ಜೊತೆ ಮಾತುಕತೆ ನಡೆಸಿ, ಕಾನೂನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಲೋಕಾಯುಕ್ತ ಪದಚ್ಯುತಿ ನಿರ್ಣಯವನ್ನು ಉಭಯ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆದ ಬಳಿಕ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲಾಗುತ್ತದೆ. ನಂತರ ಪದಚ್ಯುತಿ ಪ್ರಕ್ರಿಯೆಗಳು ಆರಂಭವಾಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+