Ambareesh Road : ರೇಸ್‌ ಕೋರ್ಸ್‌ ರಸ್ತೆ ಅಲ್ಲ; ಇನ್ನು ಮುಂದೆ ರೆಬೆಲ್‌ ಸ್ಟಾರ್‌ ಡಾ.ಎಂ.ಎಚ್‌ ಅಂಬರೀಶ್‌ ರಸ್ತೆ: ಸಿಎಂ ನಾಮಕರಣ

ಬೆಂಗಳೂರು, ಮಾರ್ಚ್‌27: ಬೆಂಗಳೂರಿನ ಅತ್ಯಂತ ಪ್ರಮುಖ ಸ್ಥಳವಾದ ರೇಸ್‌ಕೋರ್ಸ್‌ ಮುಂಭಾಗ ರಸ್ತೆಯ ಹೆಸರು ಬದಲಾಗಿದೆ. ಇನ್ನು ಮುಂದೆ ರೇಸ್‌ಕೋರ್ಸ್‌ ರಸ್ತೆ ಅಲ್ಲ. ರೆಬೆಲ್‌ ಸ್ಟಾರ್‌ ಡಾ.ಎಂ.ಎಚ್‌ ಅಂಬರೀಶ್‌ ರಸ್ತೆ ಎಂದು ಮರು ನಾಮಕರಣ ಮಾಡಲಾಗಿದೆ.

ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ನಟ ಅಂಬರೀಷ್​ ಅವರ ಹೆಸರು ಇಡಬೇಕು ಎಂಬುದು ಅಭಿಮಾನಿಗಳ ಬೇಡಿಕೆ ಆಗಿತ್ತು. ಆ ಬೇಡಿಕೆಯನ್ನ ಸೋಮವಾರ ನೆರವೇರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 'ರೆಬೆಲ್​ ಸ್ಟಾರ್​ ಡಾ. ಎಂ.ಎಚ್​. ಅಂಬರೀಷ್​ ರಸ್ತೆ' ಉದ್ಘಾಟನೆ ಮಾಡಿದ್ದಾರೆ.

Renaming Race Course Road As Rebel Star Dr MH Ambarish Road

ಮೌರ್ಯ ಸರ್ಕಲ್‌ ನಿಂದ ಬಸವೇಶ್ವರ್‌ ಸರ್ಕಲ್‌ ವರೆಗಿನ ರೇಸ್‌ ಕೋರ್ಸ್‌ ರಸ್ತೆಗೆ ರೆಬೆಲ್‌ ಸ್ಟಾರ್‌ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ ನಿರಂತರ ಶ್ರೀಮಾನ್‌ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಹೇಳಿದರು.

ಅಂಬರೀಶ್ ಅವರ ನೆನಪಿಗಾಗಿ ಇವತ್ತು ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ.ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವತ್ತು ಇವರ ಹೆಸರನ್ನು ಇಟ್ಟಿದ್ದೇವೆ. ಹಲವು ಪ್ರತಿಭೆಯಿರುವ ಮೇರು ವ್ಯಕ್ತಿತ್ವ ಅವರದ್ದು. ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಅವರಿಗಿತ್ತು ಎಂದರು.

Renaming Race Course Road As Rebel Star Dr MH Ambarish Road

ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೆಯಾಗಿದ್ದು, ನೇರ ವ್ಯಕ್ತಿತ್ವ ಅವರದ್ದಾಗಿತ್ತು. ಕ್ರೀಡೆಯಲ್ಲೂ ಪ್ರತಿಭೆಯನ್ನು ಹೊಂದಿದ್ದ ಅವರು, ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಬರುತ್ತಿತ್ತು ಎಂದರು.

ನನಗೆ ಇವತ್ತು ಬಹಳ ಸಂತೋಷವಾಗಿದೆ. ಅಂಬರೀಶ್ ಅವರು ನನ್ನ ಮಿತ್ರರು. ಅವರ ಜೀವನ ತೆರೆದ ಪುಸ್ತಕ. ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ ನಲ್ಲಿ ಇರುತ್ತೇನೆ ಬಾರಯ್ಯ ಎನ್ನುವವರು. ಅವರ ಹೆಸರನ್ನು ಬಿಟ್ಟು ಬೇರೆ ಯಾರ ಹೆಸರು ಕೂಡ ಈ ರಸ್ತೆಗೆ ಸೂಕ್ತವಲ್ಲ. ಅವರ ಕುಟುಂಸ್ಥರು ಒಪ್ಪಿ ಬಂದಿದ್ದಾರೆ. ಅವರಿಗೆ ಧನ್ಯವಾದಗಳು ಸಲ್ಲಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ‌ ಅಂಬರೀಶ್ ಅವರ ಸ್ಮಾರಕ ಕೂಡ ಉದ್ಘಾಟನೆ ಮಾಡುತ್ತೇವೆ ಎಂದರು.

ಇನ್ನೂ ಸಿನಿಮಾಗಳಲ್ಲಿ ನಟ ಅಂಬರೀಷ್​ ಅವರು ಅದ್ಭುತವಾದ ಅಭಿನಯ ತೋರಿದ್ದರು. ಜನರನ್ನು ಸೆಳೆದಿಟ್ಟುಕೊಳ್ಳುವಂತಹ ಶಕ್ತಿ ಅವರಿಗೆ ಇತ್ತು. ಅವರ ನಟನೆ ಸಹಜವಾಗಿತ್ತು. ಅವರ ಅಭಿಮಾನಿ ಬಳಗವೂ ದೊಡ್ಡದಿದೆ. ಪದರೆ ಮೇಲೆ ಇದ್ದಂತೆಯೇ ನಿಜಜೀವನದಲ್ಲೂ ಇದ್ದರು. ನೇರವಾಗಿ ಮಾತನಾಡುತ್ತಿದ್ದರು. ಒಮ್ಮೆ ಮಾತನಾಡಿದರೆ ಹಿಂದೆ ಸರಿಯುವ ಮಾತೇ ಇರಲಿಲ್ಲ. ರಾಜಕೀಯಕ್ಕೆ ಬಂದಾಗ ಜನಪರವಾದ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಕಾವೇರಿ ವಿಚಾರದಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಧಿಕಾರದ ಹಿಂದೆ ಅವರು ಹೋಗಿರಲಿಲ್ಲ. ಅವರ ಹಿಂದೆಯೇ ಅಧಿಕಾರ ಬಂದಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌, ನಟ ರಾಘವೇಂದ್ರ ರಾಜ್‌ ಕುಮಾರ್‌, ಫಿಲಂ ಚೇಂಬರ್‌ ಅಧ್ಯಕ್ಷ ಭಾ.ಮ ಹರೀಶ್‌ , ರಾಕ್‌ ಲೈನ್‌ ವೆಂಕಟೇಶ್‌, ಚಿನ್ನೆಗೌಡರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+