ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪರಾಧ ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ:ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಮಾ.19. ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾ ಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.

ಬ್ಯಾಂಕ್‌ ವಂಚನೆ ಆರೋಪದ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಬೆಂಗಳೂರಿನ ಆರ್.ಎಚ್.ಕಸ್ತೂರಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಇದರಿಂದಾಗಿ ಇನ್ನು ಪಾಸ್ ಪೋರ್ಟ್ ಅಧಿಕಾರಿಗಳು ಪಾಸ್ ಪೋರ್ಟ್ ನವೀಕರಣಕ್ಕೆ ಆರೋಪ ಎದುರಿಸುತ್ತಿರುವವರು ಅರ್ಜಿ ಸಲ್ಲಿಸಿದರೆ ಆಗ ಪ್ರಕರಣದಲ್ಲಿ ಹೈಕೋರ್ಟ್ ತಡೆ ನೀಡಿದ್ದರೆ, ವಿಚಾರಣಾ ಕೋರ್ಟ್ ಅನುಮತಿ ಕೋರದೆ ಪಾಸ್ ಪೋರ್ಟ್ ನವೀಕರಣವನ್ನು ಮಾಡಿಕೊಡಬೇಕಾಗುತ್ತದೆ. ಸುಮ್ಮನೆ ಕೇಸು ಬಾಕಿ ಇದೆ ಪಾಸ್ ಪೋರ್ಟ್ ನವೀಕರಣ ಮಾಡಲಾಗದು ಎಂದು ಹೇಳಲಾಗುವುದಿಲ್ಲ.

Renewal of passport of Accused: HC clear doubts, Trial court permission is not necessary

ವಿದೇಶಾಂಗ ವ್ಯವಹಾರಗಳ ಸಚಿವಾಲಯ 1993ರಲ್ಲಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಆರೋಪಿಯು ವಿಚಾರಣಾ ನ್ಯಾಯಾಲಯದ ಅನುಮತಿಯನ್ನು ಪಡೆಯುವ ಷರತ್ತು, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದಾಗ ಉದ್ಭವಿಸುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಕ್ರಿಮಿನಲ್ ಮೊಕದ್ದಮೆಯಲ್ಲಿನ ಎಲ್ಲಾ ಮುಂದಿನ ಪ್ರಕ್ರಿಯೆಗಳಿಗೆ ಉನ್ನತ ಕೋರ್ಟ್ ತಡೆಯಾಜ್ಞೆಯನ್ನು ವಿಧಿಸಿದ್ದಾಗ ಕ್ರಿಮಿನಲ್ ಪ್ರಕರಣದ ಬಾಕಿಯಿದೆ ಎಂಬ ಆಧಾರದ ಮೇಲೆ ಪಾಸ್‌ಪೋರ್ಟ್ ನವೀಕರಣ ಅಥವಾ ಮರು-ವಿತರಣೆಗಾಗಿ ಅರ್ಜಿದಾರರ ವಿನಂತಿಯನ್ನು ನಿರಾಕರಿಸಲು ಈ ಅಧಿಸೂಚನೆ ನಿರ್ಲಕ್ಷ್ಯಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಜೊತೆಗೆ ಹೈಕೋರ್ಟ್ ತಡೆ ಇದ್ದಾಗ ಟ್ರಯಲ್ ಕೋರ್ಟ್ ನ ಅನುಮತಿ ಪಡೆಯಬೇಕೆ ಅಥವಾ ಬೇಡವೇ ಎಂಬ ಕುರಿತು ಇದ್ದ ಗೊಂದಲವನ್ನೂ ಸಹ ನಿವಾರಿಸಿದೆ.

ಕೈ ಕಟ್ಟಿಹಾಕಿಲ್ಲ:

"ಪಾಸ್‌ಪೋರ್ಟ್ ಕಾಯಿದೆ 1967ರ ಸೆಕ್ಷನ್ 22ರಡಿಯಲ್ಲಿ 1993ರ ಆಗಸ್ಟ್ 25ರಂದು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಸಾಮಾನ್ಯವಾಗಿ ಈ ರೀತಿಯ ಆದೇಶವನ್ನು ನಿರೀಕ್ಷಿಸುತ್ತದೆ ಮತ್ತು ಈ ನಿಯಮವು ಸಾಮಾನ್ಯ ಸಂದರ್ಭಗಳಲ್ಲಿ ಅನ್ವಯಿಸುತ್ತದೆ, ಅಂದರೆ ಕ್ರಿಮಿನಲ್ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗುವುದಿಲ್ಲ ಮತ್ತು ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರು ತಮ್ಮ ಕಾರ್ಯನಿರ್ವಹಿಸಲು ಸ್ವತಂತ್ರರು ಮತ್ತು ಅವರ ಕೈಗಳನ್ನು ಕಟ್ಟಿಹಾಕುವಂತಹ ಸಂದರ್ಭಗಳಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು.

ಈ ಮಧ್ಯೆ, ನೋಟಿಸ್ ಜಾರಿಯ ನಂತರದ ಹಂತದಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದೂ ಸಹ ಹೇಳಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಉನ್ನತ ನ್ಯಾಯಾಲಯದ ತಡೆಯಾಜ್ಞೆ ಹೊರತಾಗಿಯೂ ಕ್ರಿಮಿನಲ್ ಪ್ರಕ್ರಿಯೆಗಳು ಬಾಕಿ ಉಳಿದಿದ್ದಾಗ ಅವುಗಳನ್ನು ಅಮಾನತ್ತಿನಲ್ಲಿರಿಸಿ ಮುಂದಿನ ಕಾರ್ಯ ಕೈಗೊಳ್ಳಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ನ್ಯಾಯಪೀಠ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಅರ್ಜಿದಾರರ ಅರ್ಜಿಯನ್ನು ಪರಿಗಣಿಸಲು ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಯನ್ನು ಪ್ರಶ್ನಿಸಿದ್ದಾಗ, ಅವರು ಅರ್ಜಿದಾರರು ಸಂಬಂಧಪಟ್ಟ ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶ ಪ್ರವಾಸ ಮಾಡುವಂತಿಲ್ಲ ಎಂಬ ಷರತ್ತು ವಿಧಿಸಿರುವ ಸಂಗತಿಯನ್ನು ತಿಳಿಸಿದರು.

Recommended Video

ಹಿಂದೂ & ಮುಸ್ಲಿಂ ಒಟ್ಟಿಗೆ ಬದುಕೋಕೆ ಆಗಲ್ಲ ಅಂತ ಅಂಬೇಡ್ಕರ್ ಅಂದೇ ಹೇಳಿದ್ರು | Oneindia Kannada

English summary
The State High Court has ruled that the renewal of the accused's passport does not require the trial court's permission to restore the accused's passport while the High Court has restrained the criminal proceedings pending in the trial courts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X