ಬಿಜೆಪಿ ಶಾಸಕರ ಸಭೆ; ಶಾಸಕ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ!
ಬೆಂಗಳೂರು, ಫೆ. 02: ನಿನ್ನೆ ವಿಧಾನಸೌಧದಲ್ಲಿ ನಡೆದಿರುವ ಬಿಜೆಪಿಯ 14 ಶಾಸಕರ ಸಭೆ ಪಕ್ಷದಲ್ಲಿ ಸಂಚಲನವನ್ನುಂಟು ಮಾಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಸರ್ಕಾರದ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರ ಕಚೇರಿಯಲ್ಲಿ ನಿನ್ನೆ ಭೋಜನಕೂಟಕ್ಕೆ ಬಿಜೆಪಿಯ 14 ಹಿರಿಯ ಶಾಸಕರು ಸೇರಿದ್ದರು.
Recommended Video
ಭೋಜನಕೂಟದ ನೆಪದಲ್ಲಿ ಸೇರಿದ್ದ ಹಿರಿಯ ಶಾಸಕರು ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ಚರ್ಚೆ ನಡೆಸಿದ್ದಾರೆ. ಈ ಎಲ್ಲ ಶಾಸಕರು ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದವರು ಎಂಬುದು ಗಮನಿಸಬೇಕಾದ ಅಂಶ. ಸಭೆಯಲ್ಲಿ ಒಟ್ಟು ಆರು ವಿಷಯಗಳ ಬಗ್ಗೆ ಅವರು ಚರ್ಚೆ ಮಾಡಿದ್ದು ಅವುಗಳ ಕುರಿತು ಪಕ್ಷದ ವರಿಷ್ಠರ ಗಮನ ಸೆಳೆಯಲು ಮುಂದಾಗಿದ್ದಾರೆ. ಇದೇ ವಿಚಾರದ ಕುರಿತು ವಿಧಾನಸೌಧದಲ್ಲಿ ರೇಣುಕಾಚಾರ್ಯ ಅವರು ಮಹತ್ವದ ಮಾತುಗಳನ್ನು ಆಡಿದ್ದಾರೆ.

ನಿನ್ನೆ ಹಿರಿಯ ಶಾಸಕರು ಸಭೆ ಸೇರಿದ್ದರಲ್ಲಿ ಏನೂ ತಪ್ಪಿಲ್ಲ. ಅವರೆಲ್ಲರೂ ಸಂಘ ಪರಿವಾರದವರು ಹಾಗೂ ಹಿರಿಯರು. ಸರ್ಕಾರದ ಕಾರ್ಯವೈಖರಿ ಕುರಿತು ಹಾದಿ ಬೀದಿಯಲ್ಲಿ ಮಾತಾಡುವ ಬದಲು ಒಂದು ಕಡೆ ಕುಳಿತು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಪರವಾಗಿ ರೇಣುಕಾಚಾರ್ಯ ಮಾತನಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್. ಸಿಎಂ ಬದಲಾವಣೆ ಆಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಿಯಲ್ಲ. ಅವರೊಂದಿಗೆ ನಾವೆಲ್ಲ ಮಾತನಾಡುತ್ತೇವೆ. ಅವರು ಹಾಗೆಲ್ಲ ಮಾತಾಡಬಾರದು ಎಂದಿದ್ದಾರೆ. ನಿನ್ನೆ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದೇವು. ನಮ್ಮ ನಮ್ಮ ಕ್ಷೇತ್ರಗಳ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಜತೆ ಚರ್ಚೆ ಮಾಡಿದ್ದೆವೆ. ಅದು ಬಿಟ್ಟು ಬೇರೆ ಏನೂ ಮಾತಾಡಿಲ್ಲ. ಇವತ್ತು ಯಡಿಯೂರಪ್ಪ ಅವರು ಮತ್ತೆ ಎಲ್ಲರನ್ನೂ ಊಟಕ್ಕೆ ಕರೆದಿದ್ದಾರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳು ಅಲ್ಲ. ಹೀಗಾಗಿ ಎಲ್ಲರೂ ಅಧಿಕಾರ ಬಯಸುವುದರಲ್ಲಿ ತಪ್ಪಿಲ್ಲ ಎಂದು ತಮ್ಮ ಹೇಳಿಕೆಯಲ್ಲಿ ರೇಣುಕಾಚಾರ್ಯ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications