ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ "ಡಿ" ಗ್ಯಾಂಗ್‌ನ ಮೂವರು ಆರೋಪಿಗಳಿಗೆ ಒಂದೇ ದಿನ ಜಾಮೀನು ಮಂಜೂರು
Renukaswamy Murder Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಸೇರಿದೆ. ಈ ಪೈಕಿ ಇಂದು (ಸೆಪ್ಟೆಂಬರ್ 23) ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ದರ್ಶನ್ & ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಮುಂದೂಡಿದೆ. ಹಾಗಾದರೆ ಯಾರಿಗೆ ಯಾವ ಕೋರ್ಟ್‌ನಲ್ಲಿ ಜಾಮಿನೂ ಮಂಜೂರಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ15 ಆರೋಪಿ ಕಾರ್ತಿಕ್, ಎ17 ಆರೋಪಿ ನಿಖಿಲ್‌ಗೆ 57ನೇ ಸಿಸಿಎಚ್ ಕೋರ್ಟ್ ಜಾಮೀನು ನೀಡಿದ್ದು, ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂ ಮಾಡಿ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಹಾಗೂ ಎ1 ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆಯನ್ನು 57ನೇ ಸಿಸಿಎಚ್ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುದೂಡಿಕೆ ಮಾಡಿದೆ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಂದ ಹಣದ ಆಮಿಷಕ್ಕೋಳಗಾಗಿ ಶವ ಸಾಗಿಸುವಾಗ, ಪೊಲೀಸರಿಗೆ ಶರಣಾಗುವಲ್ಲಿ ಮಾತ್ರ ಇವರ ಪಾತ್ರ ಇತ್ತು. ಹತ್ಯೆಗೂ ಇವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಲಾವಗಿದೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಶವ ಸಿಕ್ಕ ಮರುದಿನ ಅಂದರೆ ಜೂನ್ 10ಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಶರಣಾಗಿದ್ದರು. ನಾವೇ ಕೊಲೆ ಮಾಡಿದ್ದಾಗಿಯೂ ಆರಂಭದಲ್ಲಿ ಹೇಳಿದ್ದರು. ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಸತ್ಯವನ್ನು ಹೊರಹಾಕಿದ್ದರು ಎನ್ನಲಾಗುತ್ತಿದೆ.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ದರ್ಶನ್ & ಗ್ಯಾಂಗ್ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ.
ಬಳಿಕ ಪೊಲೀಸರಿಗೆ ಈ ಆರೋಪಿಗಳು ತಾವೇ ಕೊಲೆ ಮಾಡಿರುವುದಾಗಿ ಬಂದು ಶರಣಾಗಿದ್ದರು. ಆದರೂ ತನಿಖೆ ವೇಳೆ ಇವರಿಂದ ಬೇರೆ ಬೇರೆ ಉತ್ತರವೇ ಬಂದಿದೆ. ಇದರಿಂದ ಶಂಕಿಂತಗೊಂಡ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿ ಅಸಲಿ ಸತ್ಯವನ್ನು ಬಾಯಿಸಿಬಿಡಿಸಿದ್ದಾರೆ.
ಸತ್ಯ ತಿಳಿದ ಬಳಿಕ ಪೊಲೀಸರು ಪವಿತ್ರಾ ಗೌಡ & ನಟ ದರ್ಶನ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯನ್ನು ಚುರುಕುಗೊಳಿಸಿ ಪ್ರಮುಖ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ಇದೇ ಪ್ರಮುಖ ಸಾಕ್ಷ್ಯಗಳನ್ನು ಇಟ್ಟುಕೊಂಡು ಪೊಲೀಸರು ಚಾರ್ಜ್‌ಶೀಟ್ ರೆಡಿ ಮಾಡಿ ಕೋರ್ಟ್‌ಗೆ ಸಲ್ಲಿಸಿದ್ದರು.












Click it and Unblock the Notifications