ದರ್ಶನ್‌ ಗ್ಯಾಂಗ್‌ಗೆ ಬಿಗ್‌ ಶಾಕ್; ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್: ಕಾರಣವೇನು ಗೊತ್ತಾ?

ಬೆಂಗಳೂರು, ಜೂನ್‌ 24: ಚಿತ್ರದುರ್ಗದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಮತ್ತು ಗ್ಯಾಂಗ್​ ಇದೀಗ ಅಕ್ಷರಶಃ ವಿಲವಿಲ ಎನ್ನುತ್ತಿದ್ದಾರೆ. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಹೊರ ರಾಜ್ಯದಲ್ಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಾಲ್ವರು ಆರೋಪಿಗಳನ್ನ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿಗಳನ್ನ ಬೇರೆ ಜೈಲಿಗೆ ವರ್ಗಾವಣೆ ಮಾಡಬೇಕು ಎಂಬ ಬಗ್ಗೆ ಒತ್ತಡಗಳು ಕೇಳಿ ಬಂದಿದ್ದು, ಇದೀಗ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆರೋಪಿಗಳನ್ನ ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದು,ಈ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಬಳಿಕ ನಾಲ್ವರು ಆರೋಪಿಗಳನ್ನ ವರ್ಗಾವಣೆ ಮಾಡಲಾಗಿದೆ.

Renukaswamy murder case Four accused shifted to Tumkur Jail

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರ ಗೌಡ ಹಾಗೂ ದರ್ಶನ್ ಸೇರಿದಂತೆ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ದರ್ಶನ್ ಅವರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು. ಇದೇ ವೇಳೆ ದರ್ಶನ್‌ ಜೊತೆಗೆ ಕೆಲವರು ಆರೋಪಿಗಳನ್ನ ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಲಾಗಿತ್ತು.ಇಂದು ದರ್ಶನ್ ಗ್ಯಾಂಗ್‌ ಬಗ್ಗೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಒಪ್ಪಿಗೆ ಸೂಚಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ಮುಂದೆ ಶರಣಾಗಿದ್ದು ಆರೋಪಿಗಳಾದ ಕಾರ್ತಿಕ್‌, ಕೇಶವ್ & ನಿಖಿಲ್. ಈ ಮೂವರು ಕೊಲೆ ಬಗ್ಗೆ ಪೊಲೀಸರ ಮುಂದೆ ಸಂಪೂರ್ಣ ಮಾಹಿತಿಯನ್ನು ಬಾಯ್ಬಿಟ್ಟಿದ್ದರು. ಈ ಮೂವರು ನೀಡಿದ ಮಾಹಿತಿಯಿಂದಲೇ ಕೊಲೆ ಕೇಸ್‌ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್ ಆಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ರವಿಶಂಕರ್, ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.

ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವುದು ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ನ್ಯಾಯಾಲಯಕ್ಕೆ ಮನವರಿಕೆ ಮಾಡುವಲ್ಲಿ ಇದೀಗ ಯಶಸ್ವಿಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆದ ಆರೋಪಿಗಳು ಬರೀ ಕುತಂತ್ರವಷ್ಟೇ ಅಲ್ಲ ಒಳಸಂಚಿನಲ್ಲಿ ಭಾಗಿಯಾಗಿದ್ದಾರೆ. ಒಂದೇ ಜೈಲಿನಲ್ಲಿದ್ರೆ ಕೊಲೆ ಆರೋಪಿಗಳು ಅವರವರೇ ಹೊಡೆದಾಡಿಕೊಳ್ಳಬಹುದು ಅಂತಲೂ ಪೊಲೀಸರಿಗೆ ಡೌಟ್ ಇತ್ತು. ಹೀಗಾಗಿ ಕೆಲ ಆರೋಪಿಗಳನ್ನ ತುಮಕೂರು ಜೈಲಿಗೆ ವರ್ಗಾವಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+