ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು: ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಜೂನ್ 18: ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿತ್ತು. ಈ ಸಂದರ್ಭದಲ್ಲಿ ರೇಣುಕಾಸ್ವಾಮಿ ಸಾವಾಗಿದೆ. ಈ ಪ್ರಕರಣ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ದರ್ಶನ್ ಸೇರಿದಂತೆ 19 ಜನರು ಬಂಧನದಲ್ಲಿದ್ದಾರೆ.
ಇತ್ತ ಕೊಲೆಯಾದ ರೇಣುಕಾಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದು, ಈ ಬಗ್ಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ದರ್ಶನ್ ಹಾಗೂ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಇನ್ನು ಹತ್ಯೆಗೊಳಗಾದ ರೇಣುಕಾಸ್ವಾಮಿ ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ, ತನಿಖೆ ನಡೆದ ಬಳಿಕ ಆರ್ಥಿಕ ನೆರವು ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರದಿಂದ ನೆರವು ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ವಿಚಾರವಾಗಿ ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಸಿನಿಮಾ ನಟರು ಆಗಿರೋದ್ರಿಂದ ಎಲ್ಲಾರು ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರ್ತಾರೆ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತೆ. ಯಾರಾದ್ರೂ ಇದರಲ್ಲಿ ಭಾಗಿಯಾಗಿದ್ದರೆ ಅವ್ರನ್ನೂ ತನಿಖೆ ಮಾಡಲಾಗುತ್ತದೆ
ಮೃತ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಮ್ಮ ಪೊಲೀಸರು ಯಾರ ಒತ್ತಡಕ್ಕೂ ಮಣಿಯದೆ, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಇದರಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಬಹು ಬೆಗನೇ ಕ್ರಮ ಕೈಗೊಳ್ಳಲಾಗಿದೆ ಹಾಗಾಗಿ ಈ ಕೇಸ್ ಅನ್ನು ಸಿಬಿಐಗೆ ವಹಿಸುವುದಿಲ್ಲ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ ಕುಟುಂಬದವರಿಗೆ ಅಲ್ಲದೆ ನಮಗೂ ಸಹ ನೋವು ತಂದಿದೆ ಎಂದರು. ಸರ್ಕಾರ ಯಾವುದೇ ಮುಲಾಜಿಲ್ಲದೇ, ಯಾರ ಒತ್ತಡಕ್ಕೂ ಮಣಿಯದೆ ತನಿಖೆ ಮಾಡುತ್ತಿದೆ. ಈಗಾಗಲೇ 19 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಕುಟುಂಬದಲ್ಲಿ ಗಂಡನನ್ನು ಕಳೆದುಕೊಂಡ ಅವರ ಪತ್ನಿ ಮದುವೆಯಾಗಿ ಒಂದು ವರ್ಷ ಆಗಿದೆ. ಅವರು ನಮಗೆ ಮನವಿ ಮಾಡಿದ್ದಾರೆ. ಅವರ ಮನವಿ ನ್ಯಾಯ ಒದಗಿಸಬೇಕು. ಜೀವನ ಸಾಗಿಸಲು ಸರ್ಕಾರಿ ನೌಕರಿ ಕೊಡಬೇಕು ಎಂಬುದು ಅವರ ಆಗ್ರಹವಾಗಿದೆ. ಇದರ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಕೊಲೆ ಕೇಸ್‌ನಲ್ಲಿ ಯಾವುದೇ ರಾಜಕೀಯ ಮಾಡಬಾರದು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಮಾಧ್ಯಮಗಳ ಮೂಲಕ ಕೇಳಿದ್ದೇನೆ. ಇದರಲ್ಲಿ ರಾಜಕೀಯ ಸಲ್ಲದು. ಎಲ್ಲದಕ್ಕೂ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು. ಕಾನೂನು ಇದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.












Click it and Unblock the Notifications