ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮಾಜಿ ಪತಿ ನಿಧನ

ಬೆಂಗಳೂರು, ಆಗಸ್ಟ್‌ 19: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಈ ಕೇಸ್‌ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಅವರು ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಸುಮಾರು 7-8 ತಿಂಗಳ ಹಿಂದೆಯೇ ಅವರು ಮೃತಪಟ್ಟಿದ್ದರೂ, ಈ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

Renukaswamy Murder Case Pavithra Gowda s Ex-Husband Sanjay Singh Passes Away Report Surfaces

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಜಯ್ ಸಿಂಗ್

ಕಳೆದ ಹಲವು ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಜಯ್ ಸಿಂಗ್ ಅವರು ರಾಜಸ್ಥಾನದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪವಿತ್ರಾ ಅವರೊಂದಿಗೆ ವಿಚ್ಛೇದನ ಪಡೆದ ಬಳಿಕ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಕುಡಿತದ ಚಟಕ್ಕೆ ಬಿದ್ದಿದ್ದು, ಇದೇ ಅವರ ಅಕಾಲಿಕ ಸಾವಿಗೆ ಕಾರಣವಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿಗೆ ಬಂದಿದ್ದ ಸಂಜಯ್ ಸಿಂಗ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಜೈಲು ಸೇರಿದ ಸಮಯದಲ್ಲಿ ಸಂಜಯ್ ಸಿಂಗ್ ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದರು. ಆಗ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪವಿತ್ರಾ ಗೌಡ ಜೊತೆಗಿನ ಹಿಂದಿನ ದಿನಗಳು ಹಾಗೂ ತಮ್ಮ ಸಂಬಂಧದ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ಅವರು ಮತ್ತೆ ತಮ್ಮ ಊರಿಗೆ ಮರಳಿದ ಕೆಲವೇ ತಿಂಗಳುಗಳಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇದೀಗ ತಿಳಿದುಬಂದಿದೆ.

2007-2008ರ ವೇಳೆ ಪ್ರೀತಿಸಿ ವಿವಾಹವಾಗಿದ್ದ ಸಂಜಯ್ ಸಿಂಗ್ ಹಾಗೂ ಪವಿತ್ರಾ ಗೌಡ ದಂಪತಿಗೆ ಓರ್ವ ಹೆಣ್ಣು ಮಗಳಿದ್ದಾಳೆ. ಆದರೆ ಹೊಂದಾಣಿಕೆಯ ಕೊರತೆ ಹಿನ್ನೆಲೆ 2011ರಲ್ಲೇ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದು ಇವರು ಪರಸ್ಪರ ಬೇರೆಯಾಗಿದ್ದರು. ಡಿವೋರ್ಸ್ ಬಳಿಕ ಸಂಜಯ್ ಸಿಂಗ್ ಅವರೊಂದಿಗೆ ಸಂಪೂರ್ಣ ಸಂಪರ್ಕ ಕಡಿದುಕೊಂಡಿದ್ದ ಪವಿತ್ರಾ ಗೌಡ ಪ್ರಸ್ತುತ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+