Darshan Arrest: ರೇಣುಕಾಸ್ವಾಮಿ ಕೊಲೆ; ನಟ ದರ್ಶನ್‌ಗೆ ಶಿಕ್ಷೆ ಏನು? ಡಾ. ಜಿ ಪರಮೇಶ್ವರ್ ಏನಂದ್ರು?

ಬೆಂಗಳೂರು, ಜೂನ್‌ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರ ವಿಚಾರಣೆಯನ್ನ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರ ನಟ ದರ್ಶನ್ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಕೊಲೆ ಕೇಸ್ ನಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.ಆರೋಪಿಗಳನ್ನು ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳಲು ಆಗುವುದಿಲ್ಲ ಎಂದು ಹೇಳಿದರು.

Renukaswamy Murder Case Police Investigation Into Actor Darshan s Role Says Parameshwar

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣಕ್ಕೂ ಮರ್ಡರ್ ಆಗಿದೆ? ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತದೆ ಈ ಸಂದರ್ಭದಲ್ಲಿ ಬೇರೆ ಏನು ಹೇಳಲು ಸಾಧ್ಯವಿಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗುತ್ತೆ. ಅದಕ್ಕೂ ಮೊದಲು ಏನು ಹೇಳಲು ಸಾಧ್ಯವಿಲ್ಲ . ಕೊಲೆಯಾದ ವ್ಯಕ್ತಿಯ ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ. ಆದರೆ ಸದ್ಯ ದರ್ಶನ್ ಅವರನ್ನು ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಕುರಿತಂತೆ ನಟ ದರ್ಶನ್ ಅವರನ್ನು ನಮ್ಮ ಇಲಾಖೆಯ ಸುಪರ್ದಿಯಲ್ಲಿ ಇಟ್ಕೊಂಡಿದ್ದಾರೆ, ತನಿಖೆ ಮಾಡುತ್ತಿದ್ದಾರೆ. ಮೊದಲು ಅರೆಸ್ಟ್ ಮಾಡಿದ ವ್ಯಕ್ತಿಗಳು ದರ್ಶನ್ ಅವರ ಹೆಸರು ಹೇಳಿದ್ದಾರೆ . ಇದು ಮರ್ಡರ್ ಕೇಸ್ ಆಗಿರೋದ್ರಿಂದ ಗಂಭೀರವಾಗಿ ತನಿಖೆ ಮಾಡಬೇಕಾಗತ್ತೆ. ಹಾಗಾಗಿ ಅರೆಸ್ಟ್ ಮಾಡಿಕೊಂಡು ಬಂದಿದ್ದಾರೆ ಎಂದು ಪರಮೇಶ್ವರ್‌ ಅವರು ಹೇಳಿದರು.

ರಾಮೇಶ್ವರ ಕೆಫೆ ಸ್ಪೋಟದ ಸ್ಥಳ ಪರಿಶೀಲನೆಗೆ ಹೋಗಿದ್ದೆ. ಕೋರಮಂಗಲದ ಪಬ್‌ನಲ್ಲಿ 16 ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಭಯದಿಂದ ಕಟ್ಟಡದ ಮೇಲಿಂದ ಹಾರಿದ್ದ ವ್ಯಕ್ತಿಯನ್ನು ರಕ್ಷಿಸಿ ಪ್ರಾಣ ಉಳಿಸಿದರು. ಮಡಿಕೇರಿಯಲ್ಲಿ ಭೂಕುಸಿತ ಸಂಭವಿಸಿ ಹತ್ತಾರು ಜನ ಪ್ರಾಣ ಕಳೆದುಕೊಂಡರು. ಎಸ್‌ಡಿಆರ್‌ಎಫ್‌ನವರು ಯಾವುದೇ ಭಯವಿಲ್ಲದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ್ದಾರೆ. ಸಿಬ್ಬಂದಿಗಳು ಕಠಿಣ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸಿರುವುದನ್ನು ಗೃಹ ಸಚಿವನಾಗಿ ಹತ್ತಿರದಿಂದ ನೋಡಿದ್ದೆನೆ‌ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+