ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಸ್ಸೆಲ್ಸಿ ಫೇಲಾದ್ರೂ ಮತ್ತೆ ಶಾಲೆಗೆ ಹೋಗ್ಬಹುದು

|
Google Oneindia Kannada News

ಬೆಂಗಳೂರು, ಜುಲೈ 22: ಎಸ್ ಎಸ್ ಎಸ್ ಸಿ ಮತ್ತು ದ್ವಿತೀಯ ಪಿಯುಸಿ ಫೇಲ್ ಆಗಿದ್ದೇನೆ. ಇಲ್ಲಿಗೆ ಭವಿಷ್ಯ ಮುಗಿಯಿತು ಎಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳಬೇಕಾಗಿಲ್ಲ. ಸರ್ಕಾರದ ನಿರ್ಧಾರ ಅನುತ್ತೀರ್ಣ ವಿದ್ಯಾರ್ಥಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪ್ರಸ್ತುತ ಸಾಲಿನಿಂದ ಮತ್ತೆ ತರಗತಿಗೆ ಸೇರಲು ಅವಕಾಶ ಕಲ್ಪಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.[2016ರ ಎಸ್‌ಎಸ್ಎಲ್‌ಸಿ ಫಲಿತಾಂಶದ ಮುಖ್ಯಾಂಶಗಳು]

Repeat SSLC, PUC students can attend regular classes

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ 47 ಸಾವಿರ ಶಾಲೆಗಳಲ್ಲಿದ್ದು, ಬೆಂಗಳೂರು, ಕಲಬುರಗಿ, ಬೆಳಗಾವಿ ವಿಭಾಗದ ಎಲ್ಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಗಿದ್ದು ಮೈಸೂರು ಭಾಗದ ಕೆಲವು ಜಿಲ್ಲೆಗಳಲ್ಲಿ ವಿತರಣೆ ಬಾಕಿ ಇದ್ದು ಆದಷ್ಟು ಬೇಗ ಸಮವಸ್ತ್ರ ವಿತರಿಸಲಾಗುವುದು. ಮುಂದಿನ ವರ್ಷದಿಂದ ರಾಜ್ಯದ ಕೈಮಗ್ಗ ನಿಗಮದಿಂದ ಸಮವಸ್ತ್ರ ಖರೀದಿಸಲು ಚಿಂತಿಸಲಾಗಿದೆ ಎಂದರು.

ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸಲಾಗುವುದು. ಅಲ್ಲದೆ, ವಿಷಯವಾರು ಶಿಕ್ಷಕರ ನೇಮಕಕ್ಕಾಗಿ ಕ್ರಮಕೈಗೊಳ್ಳಲಾಗುವುದು. ಶಿಕ್ಷಕರ ವರ್ಗಾವಣೆ ನೀತಿಯಲ್ಲಿ ಸ್ವಲ್ಪ ಗೊಂದಲಗಳಿದ್ದು ಅದನ್ನು ಸರಿಪಡಿವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಈ ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ, ಸೈಕಲ್ ವಿತರಣೆ, ಪುಸ್ತಕ ವಿತರಣೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.[ಪಿಯು ಪ್ರವೇಶ ಜುಲೈ 23ರವರೆಗೆ ವಿಸ್ತರಣೆ]

ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 22 ಸಾವಿರ ಶಿಕ್ಷಕರ ಕೊರತೆ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ನಿವೃತ್ತರಾಗುವ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಈ ವರ್ಷ 13 ಸಾವಿರ ಅತಿಥಿ ಶಿಕ್ಷಕರ ನೇಮಕಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು

English summary
Students who have failed their 10th or II PU examinations in this year can now go back and attend classes in their institutions. This amended rule is applicable only in schools and colleges affiliated to the Karnataka Secondary Education Examination Board and the Pre-University Certificate Board in the State. Minister for Primary and Secondary Education Tanvir Sait informed media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X