ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 2,856 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು

|
Google Oneindia Kannada News

ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ ಇದುವರೆಗೆ 2,856 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದೆ.

ಕೊವಿಡ್ ಇಲ್ಲಿದಿರುವಾಗ ಶೇ. 50 ರಷ್ಟು ಮರಣ ಪ್ರಮಾಣ ಇತ್ತು. ಕೊವಿಡ್ ಜೊತೆಗೆ ಬ್ಲ್ಯಾಕ್ ಫಂಗಸ್ ತಗುಲಿದರೆ ಶೇ. 80 ರಷ್ಟು ಮರಣ ಪ್ರಮಾಣವಿದೆ.

ಕೊವಿಡ್ ನಿಂದ ಬ್ಲ್ಯಾಕ್ ಫಂಗಸ್ ಬಂದ್ರೆ ಸಾವು ಜಾಸ್ತಿಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ನೀಡುವ ಔಷಧ ದೊರೆಯುತ್ತಿದೆ. ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಲ್ಲಿ ಜೂನ್ 21ರ ನಂತರವೂ ವಾರಾಂತ್ಯ ಕರ್ಫ್ಯೂ ಮುಂದುವರಿಕೆಬೆಂಗಳೂರಲ್ಲಿ ಜೂನ್ 21ರ ನಂತರವೂ ವಾರಾಂತ್ಯ ಕರ್ಫ್ಯೂ ಮುಂದುವರಿಕೆ

ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

Karnataka Reported 2,856 Black Fungus Cases So Far: Officials

ಕೊರೊನಾದಿಂದ ಗುಣಮುಖರಾಗಿದ್ದವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿತ್ತು. ಕೊರೊನಾದಿಂದ ಗುಣಮುಖರಾಗಿ ಮತ್ತೆ ಜೀವನ ಶುರು ಮಾಡುವಷ್ಟರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ತಲೆದೋರುತ್ತಿತ್ತು. ಆದರೆ ಈಗ ಕೊರೊನಾ ಸೋಂಕಿತರಲ್ಲಿ ಕಪ್ಪು ಶಿಲೀಂಧ್ರ ಸೋಂಕು ಕಡಿಮೆಯಾಗಿದೆ. ಹಾಗೂ ಕೊವಿಡ್‌ನಿಂದ ಗುಣಮುಖರಾದವರಲ್ಲಿ ಹೆಚ್ಚಳವಾಗುತ್ತಿದೆ.

ಟೋಸಿಲಿಜುಮಾಬ್, ಅಂಫೋಟೆರಿಸಿನ್ ಬಿ ಲಸಿಕೆ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ರೆಮಿಡಿಸಿವರ್ ಇಂಜೆಕ್ಷನ್ ಮೇಲಿನ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ದರ ಕೂಡ ಇಳಿಕೆಯಾಗಿದೆ.

ಕೊರೊನಾ ವಿರುದ್ಧ ಹೋರಾಡಲು ಬಳಕೆಯಾಗುವ ಕೆಲವು ಔಷಧಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಲಾಗಿದೆ.

Recommended Video

51 ಶಾಸಕರಿಂದ ಅಭಿಪ್ರಾಯ ಪಡೆದ ಅರುಣ್ ಸಿಂಗ್! | Oneindia Kannada

ಸರಕು ಮತ್ತು ಸೇವಾ ತೆರಿಗೆ ಮಂಡಳಿ ಜೂನ್ 12 ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ತೆರಿಗೆ ವಿನಾಯಿತಿಯನ್ನು ಕೆಲವು ಮಂತ್ರಿಗಳ ಸಲಹೆ, ಶಿಫಾರಸಿನಂತೆ ಕೈಗೊಳ್ಳಲಾಗಿದೆ ಎಮದು ಜಿಎಸ್​ಟಿ ಮಂಡಳಿ ತಿಳಿಸಿದೆ.

English summary
Karnataka has so far reported 2,856 cases of mucormycosis or black fungus of which 225 lost their lives, the Health Department said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X