ಮೊದಲ ಹಂತದ ಕರ್ನಾಟಕ ಕ್ಯಾಬಿನೆಟ್‌ನಲ್ಲಿ ಈ ಸಮುದಾಯಗಳಿಗೆ ಪ್ರಾತಿನಿಧ್ಯ: ಮಾಹಿತಿ ತಿಳಿಯಿರಿ
ಬೆಂಗಳೂರು, ಮೇ 20: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದಾರೆ. ಇವರೊಂದಿಗೆ ಎಂಟು ಶಾಸಕರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೂ ಸೇರಿದಂತೆ ಕರ್ನಾಟಕದ ನೂತನ ಕ್ಯಾಬಿನೆಟ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರ ಜಾತಿವಾರು ಸಮುದಾಯಗಳನ್ನು ಇಲ್ಲಿ ತಿಳಿಯಬಹುದು.

ಒಟ್ಟು ಹತ್ತು ಸಚಿವರಲ್ಲಿ ದಲಿತರಿಗೆ ಈ ಬಾರಿ ಮನ್ನಣೆ ನೀಡಲಾಗಿದೆ. ಹತ್ತರಲ್ಲಿ ಮೂವರು ದಲಿತ ಸಮುದಾಯದಿಂದ ಬಂದವರು. ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಹಾಗೂ ಮಾಜಿ ಸಚಿವ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಕ್ಯಾಬಿನೆಟ್‌ನಲ್ಲಿ ಸ್ಥಾನ ನೀಡಲಾಗಿದೆ.
ಕುರುಬ ಸಮುದಾಯದವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ನೇಮಕವಾದರೆ, ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರೆಡ್ಡಿ ಸಮುದಾಯದಲ್ಲಿ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ ಅವರು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದಿಂದ ಸಚಿವರಾಗಿ ನೇಮಕಗೊಂಡಿದ್ದಾರೆ.
ಕ್ರಿಶ್ಚಿಯನ್ ಸಮುದಾಯದಿಂದ ಸರ್ವಜ್ಞ ನಗರದ ಕೆ ಜೆ ಜಾರ್ಜ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದೆ, ಎಸ್‌ಟಿ ಸಮುದಾಯದಿಂದ ಯಮನಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಸಚಿವರಾಗಿ ನೇಮಕಗೊಂಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭಾರೀ ಕಸರತ್ತು ನಡೆಸಬೇಕಿದೆ. ಇಂದು ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವದೆಹಲಿಗೆ ತೆರಳಲಿದ್ದಾರೆ.
ಕ್ಯಾಬಿನೇಟ್ ಪಟ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ- ಕುರುಬ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ - ಒಕ್ಕಲಿಗ
ಸಚಿವ ಕೆ ಜೆ ಜಾರ್ಜ್- ಕ್ರಿಶ್ಚಿಯನ್
ಸಚಿವ ಎಂ ಬಿ ಪಾಟೀಲ್ - ಲಿಂಗಾಯತ
ಸಚಿವ ಸತೀಶ್ ಜಾರಕಿಹೊಳಿ - ಎಸ್‌ಟಿ
ಸಚಿವ ಡಾ ಜಿ ಪರಮೇಶ್ವರ - ದಲಿತ
ಸಚಿವ ಪ್ರಿಯಾಂಕ್ ಖರ್ಗೆ- ದಲಿತ
ಸಚಿವ ಕೆ ಎಚ್ ಮುನಿಯಪ್ಪ - ದಲಿತ
ಸಚಿವ ಜಮೀರ್ ಅಹ್ಮದ್ ಖಾನ್ - ಮುಸ್ಲಿಂ
ಸಚಿವ ರಾಮಲಿಂಗಾ ರೆಡ್ಡಿ- ರೆಡ್ಡಿ












Click it and Unblock the Notifications