Republic Day 2023 : ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ನಾರಿಶಕ್ತಿ ಪ್ರದರ್ಶನ
ಬೆಂಗಳೂರು, ಜನವರಿ.23: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೊನೆಗೂ ಅವಕಾಶ ಸಿಕ್ಕಿದ್ದು, ಈ ಬಾರಿ ನಾಡಿನ ಹಿತಕ್ಕೆ ನಿಸ್ವಾರ್ಥ ಸೇವೆಗೈದ ಆದರ್ಶ ಮಹಿಳೆಯರಿಗೆ ಈ ಸ್ತಬ್ಧಚಿತ್ರವನ್ನು ಸಮರ್ಪಿಸಲಾಗುತ್ತಿದೆ.
ಈ ಬಾರಿಯ ರಾಜ್ಯದ ಸ್ತಬ್ಧಚಿತ್ರ " ನಾರಿ ಶಕ್ತಿ" ಎಂದು ವಿಷಯದಲ್ಲಿದ್ದು, ಇದರಲ್ಲಿ ಪದ್ಮ ಪ್ರಶಸ್ತಿ ಪಡೆದಿರುವ ಮೂವರು ಹೆಮ್ಮೆಯ ಮಹಿಳೆಯರಿದ್ದಾರೆ. ಸ್ತಬ್ಧಚಿತ್ರದಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಪ್ರದರ್ಶಿಸಲಾಗುತ್ತಿದೆ.
ಈ ಹಿಂದೆ ಕರ್ನಾಟಕವು ರಾಗಿ, ಪುಷ್ಪ ಕೃಷಿ, ರೇಷ್ಮೆ ಕೃಷಿ ಮತ್ತು ನಾರಿ ಶಕ್ತಿ ಎಂಬ ನಾಲ್ಕು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಕಳುಹಿಸಿತ್ತು. ಆದರೆ ಸ್ತಬದ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಬಳಿಕ ಒತ್ತಡದ ಕಾರಣದಿಂದ ಜನವರಿ 12 ರಂದು ಅವಕಾಶ ನೀಡಲಾಗಿದ್ದು, ಈ ಬಾರಿ ಮಹಿಳಾ ಶಕ್ತಿಯನ್ನು ಬಿಂಬಿಸುವ ನಾರಿ ಶಕ್ತಿ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಗಣರಾಜ್ಯೋತ್ಸವದ ಪರೇಡ್‌ಗಾಗಿ ಕರ್ನಾಟಕದ ಟ್ಯಾಬ್ಲೋವು ಎಂಟರಿಂದ 10 ದಿನಗಳಲ್ಲಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ನಾಡಿನ ಹಿತಕ್ಕೆ ನಿಸ್ವಾರ್ಥ ಸೇವೆಗೈದ ಆದರ್ಶ ಮಹಿಳೆಯರಿಗೆ ಸಮರ್ಪಿತ ಈ ಬಾರಿಯ ಗಣರಾಜ್ಯೋತ್ಸವದ ಕರುನಾಡ ಟ್ಯಾಬ್ಲೋ.
— Aravind Limbavali (@ArvindLBJP) January 23, 2023
ಈ ಬಾರಿಯ ನಮ್ಮ ಸ್ತಬ್ಧಚಿತ್ರದಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಪ್ರದರ್ಶಿಸಲಾಗುತ್ತಿದೆ. pic.twitter.com/x8NmZQM2fl
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸ್ತಬ್ಧಚಿತ್ರದ ಹೇಳಿಕೆಗಳ ವಿರುದ್ಧ ಕಿಡಿಕಾರಿದ್ದಾರೆ.
"2009 ರಲ್ಲಿ ಕರ್ನಾಟಕವು ಸ್ತಬ್ಧಚಿತ್ರಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಯನ್ನು ಯುಪಿಎ ಸರ್ಕಾರ ತಿರಸ್ಕರಿಸಿತು. ಆದರೆ, ಕಾಂಗ್ರೆಸ್ ನಾಯಕರು ಟ್ಯಾಬ್ಲೋವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿಲ್ಲ. ಅಷ್ಟು ಅಭಿಮಾನ ಇರುವವರು ಒತ್ತಡ ಹೇಳಿ ಸ್ತಬ್ಧಚಿತ್ರಕ್ಕೆ ಸ್ಥಾನ ಪಡೆಯಬಹುದಿತ್ತು. ಆದಾದ ನಂತರ 13 ವರ್ಷಗಳೀಂದ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಗಣರಾಜ್ಯೋತ್ಸವದ ಟ್ಯಾಬ್ಲೋ ಸ್ಪರ್ಧೆಯಲ್ಲಿ ರಾಜ್ಯವು ಬಹುಮಾನಗಳನ್ನು ಪಡೆದಿದೆ. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡಬೇಕು ಎಂದು ನಮ್ಮ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿರಲಿಲ್ಲ. ಆದರೂ, ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಮಾತನಾಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೂ ಮಾತನಾಡಿದ್ದಾರೆ. ಈ ನಾರಿ ಶಕ್ತಿ ವಿಷಯವನ್ನಿಟ್ಟುಕೊಂಡು ಎಂಟರಿಂದ 10 ದಿನಗಳಲ್ಲಿ ಸ್ತಬ್ಧಚಿತ್ರ ಸಿದ್ಧಪಡಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ರಕ್ಷಣಾ ಸಚಿವಾಲಯವು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಟ್ಯಾಬ್ಲೋವನ್ನು ಕೈಬಿಟ್ಟಿದೆ ಎಂಬ ವರದಿಗಳು ಬಹಿರಂಗವಾದ ನಂತರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಕನ್ನಡ ಪರ ಸಂಘಟನೆಗಳು, ವಿವಿಧ ವಲಯಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಕಳೆದ ಎಂಟು ವರ್ಷಗಳಲ್ಲಿ ಕಡಿಮೆ ಬಾರಿ ಪರೇಡ್‌ನಲ್ಲಿ ಪ್ರದರ್ಶನ ನೀಡಿದ ರಾಜ್ಯಗಳಿಗೆ ಅವಕಾಶಗಳನ್ನು ಒದಗಿಸಲು ಸಚಿವಾಲಯವು ನಿರ್ಧರಿಸಿದ್ದು, ಕರ್ನಾಟಕಕ್ಕೆ ಅವಕಾಶ ನೀಡಿರಲಿಲ್ಲ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು. 2022 ರಲ್ಲಿ ಬಹುಮಾನಗಳನ್ನು ಗೆದ್ದ ಎಲ್ಲಾ ಮೂರು ರಾಜ್ಯಗಳನ್ನು ಆಯ್ಕೆ ಮಾಡಲಾಗಿಲ್ಲ ಎಂದು ಸರ್ಕಾರ ತಿಳಿಸಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications