ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಜ.25, 26ರಂದು ದೀಪಾಲಂಕಾರ

ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಸರ್ಕಾರ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿದೆ.

75ನೇ ಗಣರಾಜ್ಯೋತ್ಸವದ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.

Republic day 2024 Lighting For Muzrai Dept Temple On January 25 And 26

ಜನವರಿ 26ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸುತ್ತೋಲೆಯಲ್ಲಿ ಸೂಚನೆ ನೀಡಿದೆ. ರಾಜ್ಯದಲ್ಲಿ ಎಲ್ಲಾ ದೇವಾಲಯಗಳಲ್ಲಿ ಈ ದೀಪಾಲಂಕಾರದ ವ್ಯವಸ್ಥೆ ಮಾಡಲಾಗುತ್ತದೆ.

ಸರ್ಕಾರದಿಂದ ಅನುದಾನ ಬಿಡುಗಡೆ; ಕರ್ನಾಟಕ ಸರ್ಕಾರ ಪ್ರತಿ ವರ್ಷ ಗಣರಾಜ್ಯೋತ್ಸವ ದಿನಾಚರಣೆಗೆ ಅನುದಾನ ಬಿಡುಗಡೆ ಮಾಡುತ್ತದೆ. ರಾಜ್ಯ/ ಜಿಲ್ಲಾ/ ತಾಲ್ಲೂಕು ಮಟ್ಟದಲ್ಲಿ ಸಂಭ್ರಮದಿಂದ ಸರ್ಕಾರದ ಕಾರ್ಯಕ್ರಮವಾಗಿ ಆಚರಿಸುತ್ತಿದ್ದು, ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ರೂ 50 ಲಕ್ಷಗಳು, ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗೆ ರೂ.1 ಲಕ್ಷ ಮತ್ತು ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಪ್ರತಿ ತಾಲ್ಲೂಕಿಗೆ ರೂ. 20,000ಗಳ ಅನುದಾನ ಬಿಡುಗಡೆ ಮಾಡಲು ಆದೇಶಿಸಲಾಗಿದೆ.

ಜನವರಿ 26ರಂದು ಜಿಲ್ಲಾ ಮಟ್ಟದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.

ಖಾಸಗಿ ದೇವಾಲಯಗಳು ಇಲಾಖೆ ವ್ಯಾಪ್ತಿಗೆ ಇಲ್ಲ; ಕರ್ನಾಟಕದಲ್ಲಿ ಮುಜರಾಯಿ ಇಲಾಖೆಯ 34 ಸಾವಿರ ದೇವಾಲಯಗಳಿವೆ. ದೇವಾಲಯದ ವಾರ್ಷಿಕ ಆದಾಯವನ್ನು ಪರಿಗಣಿಸಿ ಅವುಗಳನ್ನು ಎ, ಬಿ ಮತ್ತು ಸಿ ಎಂದು ವಿಭಾಗ ಮಾಡಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆಗೆ ವಹಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಈ ಕುರಿತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆಯನ್ನು ನೀಡಿದ್ದರು.

ಸಚಿವರು ಮಾತನಾಡಿ, "ಕೆಲವು ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿದೆ, ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೆಗೆದುಕೊಂಡಿಲ್ಲ" ಎಂದು ಸ್ಪಷ್ಟಪಡಿಸಿದರು.

"ದೇವಾಲಯಗಳಲ್ಲಿ ಕೆಲವು ಸಂದರ್ಭದಲ್ಲಿ ಹಣ ದುರಪಯೋಗ ಆಗುತ್ತಿದೆ. ಟ್ರಸ್ಟಿಗಳಲ್ಲಿ ಜಗಳಗಳು ಆದಾಗ ಅವರು ಕೋರ್ಟ್‌ಗೆ ಹೋಗುತ್ತಾರೆ. ಈ ರೀತಿಯ ಸಂದರ್ಭಗಳಲ್ಲಿ ಹಿಂದೆ ಕೆಲವು ದೇವಾಲಯಗಳನ್ನು ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರ ಬಂದ ಮೇಲೆ ಯಾವ ದೇವಾಲಯವನ್ನೂ ತೆಗೆದುಕೊಂಡಿಲ್ಲ,
ತೆಗೆದುಕೊಳ್ಳುವ ಉದ್ದೇಶವೂ ಇಲ್ಲ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+