Siddaramaiah: 77ನೇ ಗಣರಾಜ್ಯೋತ್ಸವ; ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸಂದೇಶವೇನು?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರಿಯಾಗಿ 9 ಗಂಟೆಗೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ಧ್ವಜಾರೋಹಣದ ನಂತರ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿದರು. ಇನ್ನೂ ಈ ಧ್ವಜಾರೋಹಣದಲ್ಲಿ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದ ಕುರಿತು ರಾಜ್ಯದ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶವನ್ನ ತಿಳಿಸಿದ್ದಾರೆ.

ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ ಗಣರಾಜ್ಯೋತ್ಸವದ ಶುಭ ದಿನವಾದ ಇಂದು ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ನನ್ನ ನಾಡಿನ ಜನತೆಯಲ್ಲಿ ಹಂಚಿಕೊಳ್ಳಬಯಸುತ್ತೇನೆ.
ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ. ಕರ್ನಾಟಕದಲ್ಲಿ 800 ವರ್ಷಗಳ ಹಿಂದೆಯೇ ಪ್ರಜಾರಾಜ್ಯದ ಬೀಜಾಂಕುರವಾಗಿತ್ತು ಎನ್ನುವುದನ್ನು ಈ ಸಂದರ್ಭದಲ್ಲಿ ನಾವೆಲ್ಲ ಹೆಮ್ಮೆಯಿಂದ ನೆನಪು ಮಾಡಿಕೊಳ್ಳಬೇಕಾಗಿದೆ. ಅದು ಸಾಧ್ಯವಾಗಿರುವುದು ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ನೇತೃತ್ವದಲ್ಲಿ ನಡೆದಿದ್ದ ಶರಣ ಚಳವಳಿಯಿಂದ. ಕೂಡಲ ಸಂಗಮದ ಅನುಭವ ಮಂಟಪ ಪ್ರಪಂಚದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾದರಿ ಸ್ವರೂಪದ್ದು. ಸಮಾಜದ ಅತ್ಯಂತ ಕೆಳಸ್ತರದ ಜನರೂ ಕೂಡಾ ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅಭಿಪ್ರಾಯ, ಅಹವಾಲುಗಳನ್ನು ವ್ಯಕ್ತಪಡಿಸುವ ಸಮಾನವಕಾಶ ಅನುಭವ ಮಂಟಪದಲ್ಲಿತ್ತು. ಇದು ನಾವಿಂದು ಅನುಭವಿಸುತ್ತಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲು.
ಭಾರತದಲ್ಲಿ ನ್ಯಾಯಯುತ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಿಸುವ ಈ ತೀರ್ಮಾನ ಒಂದು ಚಾರಿತ್ರಿಕೆ ಸಂದರ್ಭದಲ್ಲಿ ಮೈದಾಳಿತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಈಗಿನ ಸಂವಿಧಾನ ಅಂಗೀಕಾರವಾಗುವುದಕ್ಕಿಂತ ಮೊದಲು ಭಾರತದಲ್ಲಿ ಒಂದು ಅಲಿಖಿತ ಸಂವಿಧಾನ ಇತ್ತು. ಅದು ಅಸಮಾನತೆಯನ್ನು ಒಪ್ಪಿಕೊಂಡ, ಲಿಂಗ ಮತ್ತು ಜಾತಿ ಆಧಾರದಲ್ಲಿಯೇ ಮನುಷ್ಯನ ಯೋಗ್ಯತೆ, ಅವಕಾಶಗಳನ್ನು ನಿರ್ಧರಿಸುವ ಅಲಿಖಿತ ಸಂವಿಧಾನ.
ಆ ಸಾಂಪ್ರದಾಯಿಕ ಸಾಮಾಜಿಕ ವ್ಯವಸ್ಥೆಯಲ್ಲಿ ಕೆಲವು ವರ್ಗಗಳು ಅಂದರೆ ಶೂದ್ರರು, ಮಹಿಳೆಯರು ಮತ್ತು ಅಸ್ಪೃಶ್ಯರು ಸಂಪತ್ತನ್ನು ಹೊಂದುವ, ಜ್ಞಾನವನ್ನು ಗಳಿಸುವ, ಘನತೆಯಿಂದ ಬದುಕುವ ಹಕ್ಕಿನಿಂದ ವಂಚಿತರಾಗಿದ್ದರು. ಈ ಮನುಷ್ಯವಿರೋಧಿ ಅಲಿಖಿತ ಸಂವಿಧಾನವನ್ನು ತಿರಸ್ಕರಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೊಸದೊಂದು ಸಂವಿಧಾನವನ್ನು ಭಾರತಕ್ಕೆ ನೀಡಿದರು. ಭಾರತದಲ್ಲಿ ಆಧುನಿಕ ಹಾಗೂ ಪ್ರಜಾಪ್ರಭುತ್ವವಾದಿ ರಾಷ್ಟ್ರಪ್ರಭುತ್ವದ ಹುಟ್ಟಿನೊಂದಿಗೆ ಈ ಬಗೆಯ ತಡೆಗೋಡೆಗಳನ್ನು ಮುರಿಯುವ ಪ್ರಯತ್ನ ಪ್ರಾರಂಭವಾಯಿತು. ಯಾರು ಯಾವ ಸಾಮಾಜಿಕ ಮೂಲದಿಂದಲೇ ಬಂದಿರಲಿ, ಅಭಿವೃದ್ಧಿಯ ಹಾಗೂ ಪ್ರಗತಿಯ ಫಲ ಎಲ್ಲರಿಗೂ ಸೇರಬೇಕು ಎಂಬುದು ಸಂವಿಧಾನದಲ್ಲಿ ಸೂಚಿತವಾದ ಸರ್ವರನ್ನೂ ಒಳಗೊಳ್ಳುವ ಸಾಮಾಜಿಕ ಮರುರಚನೆಯ ನಿರ್ಣಯವಾಗಿದೆ.
ಭಾರತ ಒಂದು ರಾಷ್ಟ್ರವಾಗಿ ಬೆಳೆಯಬೇಕಾದರೆ, ಸಾಮಾಜಿಕ ಸಂಘರ್ಷಗಳಿಂದ ಹೊರಬರಬೇಕಾದರೆ ಈ ಸಮಾಜದ ಪುರಾತನ ಕಾಲದ ಶ್ರೇಣಿಕೃತ ವ್ಯವಸ್ಥೆಗಳನ್ನು ಒಡೆದು ಸಮಾಜದ ಪುನರ್ ರಚನೆ ಮಾಡಲೇಬೇಕಾಗುತ್ತದೆ. ನಾಗರಿಕನೊಬ್ಬನ ಸ್ಥಾನಮಾನ ಆತನ ಸತ್ವ-ಸಾಧನೆಗಳಿಂದ ನಿರ್ಣಯವಾಗಬೇಕೇ ಹೊರತು, ಆತನ ಹುಟ್ಟು ಇಲ್ಲವೇ ಪುರಾತನ ಕಾಲದಿಂದ ಬಂದ ಸಾಮಾಜಿಕ ಮೂಲಗಳಿಂದ ಅಲ್ಲ ಎಂಬುದನ್ನು ಪ್ರತಿಪಾದಿಸುವ ನಾಗರಿಕ ಸಮಾಜದ ನಿರ್ಮಾಣ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications