ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣರಾಜ್ಯೋತ್ಸವ ರಜೆ : ಕೆಎಸ್ಆರ್‌ಟಿಸಿಯಿಂದ 200 ವಿಶೇಷ ಬಸ್

|
Google Oneindia Kannada News

ಬೆಂಗಳೂರು, ಜನವರಿ 23 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗಣರಾಜ್ಯೋತ್ಸವದ ಪ್ರಯುಕ್ತ 200 ಹೆಚ್ಚವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯವ ವಿವಿಧ ಪ್ರದೇಶಗಳಿಗೆ ಬಸ್‌ಗಳು ಸಂಚಾರ ನಡೆಸಲಿವೆ.

ಕೆಎಸ್ಆರ್‌ಟಿಸಿ ಜನವರಿ 25 ಮತ್ತು 26ರಂದು ಬೆಂಗಳೂರಿನಿಂದ 200 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 27ರಂದು ವಿಶೇಷ ವಾಹನಗಳು ಹೊರಡಲಿವೆ.

ಕೆಎಸ್‌ಆರ್‌ಟಿಸಿಯ ಡಬಲ್ ಡೆಕ್ಕರ್ ಬಸ್ ರಸ್ತೆಗಿಳಿಯುವುದು ಯಾವಾಗ?ಕೆಎಸ್‌ಆರ್‌ಟಿಸಿಯ ಡಬಲ್ ಡೆಕ್ಕರ್ ಬಸ್ ರಸ್ತೆಗಿಳಿಯುವುದು ಯಾವಾಗ?

ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಗಂಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ಪಿಕಪ್ ಪಾಯಿಂಟ್‌ಗಳನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಐರಾವತದಲ್ಲಿ 699 ಬೆಳ್ಳಿದೀಪ ಪತ್ತೆಕೆಎಸ್‌ಆರ್‌ಟಿಸಿ ಐರಾವತದಲ್ಲಿ 699 ಬೆಳ್ಳಿದೀಪ ಪತ್ತೆ

ನಾಲ್ಕು ಅಥವ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ....

ಗಣರಾಜ್ಯೋತ್ಸವಕ್ಕೆ ಕನ್ನಡ ಗೀತೆ, ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸ್ತಬ್ಧಚಿತ್ರಗಣರಾಜ್ಯೋತ್ಸವಕ್ಕೆ ಕನ್ನಡ ಗೀತೆ, ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸ್ತಬ್ಧಚಿತ್ರ

ಎಲ್ಲಿಂದ, ಎಲ್ಲಿಗೆ ಬಸ್‌ಗಳು

ಎಲ್ಲಿಂದ, ಎಲ್ಲಿಗೆ ಬಸ್‌ಗಳು

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ನಿಲ್ದಾಣ

ಮೈಸೂರು ರಸ್ತೆ ನಿಲ್ದಾಣ

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಸಾಗುವ ವಿಶೇಷ ಬಸ್‌ಗಳು ಹೊರಡಲಿವೆ.

ಶಾಂತಿನಗರ ಬಸ್ ನಿಲ್ದಾಣ

ಶಾಂತಿನಗರ ಬಸ್ ನಿಲ್ದಾಣ

ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಐಷಾರಾಮಿ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ -4 ಮತ್ತು ಘಟಕ -2ರ ಮುಂಭಾಗದಿಂದ ಹೊರಡಲಿವೆ.

ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ರಸ್ತೆ, ಬನಶಂಕರಿ, ಜೀವನ್ ಭೀಮಾ ನಗರ್, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

English summary
The Karnataka State Road Transport Corporation (KSRTC) will ply 200 additional buses to cater to Republic day holiday rush. Additional buses win run on January 25 and 26, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X