Republic Exit Poll Survey 2023 LIVE: ಕರ್ನಾಟಕದಲ್ಲಿ ಮತ್ತೆ ಅತಂತ್ರ ಸರ್ಕಾರ?

ಬೆಂಗಳೂರು: ಇಡೀ ದೇಶ ಕಾಯುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಮುಗಿದಿದ್ದು ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಈಗ ತಾನೆ ರಿಲೀಸ್ ಆಗಿರುವ ಎಕ್ಸಿಟ್ ಪೋಲ್ ಪ್ರಕಾರ ಕರ್ನಾಟಕ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಗೆ ಮಾಹಿತಿ ಸಿಗುತ್ತಿದೆ. ಹಾಗಾದರೆ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಪಕ್ಷ ಯಾವುದು? ನೋಡೋಣ ಬನ್ನಿ.

ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯವಾಗಿದೆ. ಇನ್ನೇನು 3 ದಿನದಲ್ಲಿ ಅಧಿಕೃತ ಫಲಿತಾಂಶ ಬರಲಿದೆ. ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಮಬಲದ ಹೋರಾಟ ನಡೆಸಿದ್ದವು. ಇದೀಗ ಬಹುನಿರೀಕ್ಷಿತ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಎಕ್ಸಿಟ್ ಪೋಲ್ ಬಿಡುಗಡೆ ಆಗಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಸಂಸ್ಥೆಗಳು ನೀಡಿರುವ ಎಕ್ಸಿಟ್ ಪೋಲ್ ಪ್ರಕಾರ ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ.

Republic P-Marq Exit Poll Results 2023 For Karnataka Assembly Election in Kannada

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಸಂಸ್ಥೆಗಳು ನೀಡಿರುವ ಎಕ್ಸಿಟ್ ಪೋಲ್ ಪ್ರಕಾರ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ 85ರಿಂದ 100 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಹಾಗೇ ಕಾಂಗ್ರೆಸ್ ಪಕ್ಷ 94ರಿಂದ 108 ಸ್ಥಾನದಲ್ಲಿ ಗೆಲ್ಲಲಿದೆ ಮತ್ತು ಜೆಡಿಎಸ್ ಪಕ್ಷ 24ರಿಂದ 32 ಸ್ಥಾನದಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಇನ್ನೊಂದು ಕಡೆ ಇತರರು 2ರಿಂದ 6 ಸ್ಥಾನದಲ್ಲಿ ಗೆಲ್ಲಬಹುದು ಎನ್ನಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಈ ಬಾರಿ ಅತಂತ್ರ ಪರಿಸ್ಥಿತಿ ಸೃಷ್ಟಿಯಾಗುವ ಮುನ್ಸೂಚನೆ ಸಿಕ್ಕಂತಾಗಿದೆ.

ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಹವಾ?

ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಸಂಸ್ಥೆ ಎಕ್ಸಿಟ್ ಪೋಲ್ ಪ್ರಕಾರ, ಕರ್ನಾಟಕ ಚುನಾವಣೆ 2023ರಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಬ್ಬರಿಸಲಿದೆ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಮಧ್ಯ ಕರ್ನಾಟಕದಲ್ಲಿ 14ರಿಂದ 18 ಸ್ಥಾನ ಗೆಲ್ಲಬಹುದು ಎಂದು ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಎಕ್ಸಿಟ್ ಪೋಲ್ ತಿಳಿಸಿದೆ. ಹಾಗೇ ಕಾಂಗ್ರೆಸ್ 17ರಿಂದ 21 ಸ್ಥಾನ ಮತ್ತು ಜೆಡಿಎಸ್ 1ರಿಂದ 3 ಸ್ಥಾನದಲ್ಲಿ ಗೆಲುವು ಸಾಧಿಸಬಹುದು ಮತ್ತು ಇತರರು 0ರಿಂದ 2 ಸ್ಥಾನ ಪಡೆಯಬಹುದು.

ಕಿತ್ತೂರು ಕರ್ನಾಟಕದಲ್ಲಿ ಅರಳುತ್ತಾ ಕಮಲ?

ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಅಬ್ಬರಿಸಲಿದೆ ಎಂದು ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಎಕ್ಸಿಟ್ ಪೋಲ್ ಹೇಳಿದ್ದರೆ, ಇನ್ನೊಂದ್ಕಡೆ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಅಬ್ಬರ ತೋರಲಿದೆ ಎನ್ನಲಾಗಿದೆ. ಈ ಮಾಹಿತಿ ಪ್ರಕಾರ ಬಿಜೆಪಿ 25ರಿಂದ 29 ಸ್ಥಾನದಲ್ಲಿ ಗೆಲ್ಲಲಿದೆ ಮತ್ತು ಕಾಂಗ್ರೆಸ್ ಪಕ್ಷ 21ರಿಂದ 25 ಸ್ಥಾನದಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಜೆಡಿಎಸ್ 0-2 ಸ್ಥಾನ ಪಡೆಯಬಹುದು ಎನ್ನಲಾಗಿದ್ದು, ಇತರರು ಕೂಡ ಇದೇ ಹಾದಿಯಲ್ಲಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಯಾರ ದರ್ಬಾರ್?

ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕದ ನಂತರ ಕಲ್ಯಾಣ ಕರ್ನಾಟಕದಲ್ಲೂ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಆ ಪ್ರಕಾರ ಕಿತ್ತೂರು ಕರ್ನಾಟಕ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವಿನ ನಗೆ ಬೀರಲಿದೆ. ಈ ಭಾಗದಲ್ಲಿ ಬಿಜೆಪಿ 11-15 ಸ್ಥಾನ ಪಡೆದರೆ, ಕಾಂಗ್ರೆಸ್ ಬರೋಬ್ಬರಿ 22-26 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ 1-5 ಸ್ಥಾನದಲ್ಲಿ ಗೆಲ್ಲಬಹುದು ಎನ್ನಲಾಗಿದೆ. ಇತರರು 0-2 ಸ್ಥಾನ ಪಡೆಯುವ ಸಾಧ್ಯತೆಯ ಬಗ್ಗೆ ರಿಪಬ್ಲಿಕ್ ಮತ್ತು ಪಿ-ಮಾರ್ಕ್ ಎಕ್ಸಿಟ್ ಪೋಲ್ ಮಾಹಿತಿ ನೀಡಿದೆ.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಹವಾ?

ಇನ್ನುಳಿದಂತೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಲ್ಲಿ ಜೆಡಿಎಸ್ ಸುಮಾರು 20ರಿಂದ 25 ಸ್ಥಾನ ಗೆದ್ದರೆ ಕಾಂಗ್ರೆಸ್‌ಗೆ 14ರಿಂದ 18 ಸೀಟ್‌ಗಳು ಸಿಗುವ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಬಿಜೆಪಿ ಹಳೇ ಮೈಸೂರು ಭಾಗದಲ್ಲಿ 5ರಿಂದ 9 ಸ್ಥಾನ ಪಡೆಯುವ ಸಾಧ್ಯತೆ ಇದೆ. ಇತರರು 0-2 ಸ್ಥಾನ ಪಡೆದರೆ ಹೆಚ್ಚು ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+