Breaking; ಸಿದ್ದರಾಮಯ್ಯ ಅಹಿಂದ ಹೋರಾಟದ ನಾಟಕ, ಬಿಜೆಪಿ ಸರಣಿ ಟ್ವೀಟ್

ನವದೆಹಲಿ, ಡಿಸೆಂಬರ್ 12; 'ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ. ಎ. ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ‌ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಕರ್ನಾಟಕ ಬಿಜೆಪಿ ಸೋಮವಾರ ಸರಣಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಟ್ವೀಟ್‌ಗೆ ತಿರುಗೇಟು ನೀಡಿದೆ. 'ಮಾನ್ಯ ಸಿದ್ದರಾಮಯ್ಯರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ' ಎಂದು ಹೇಳಿದೆ.

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.

Reservation Issue BJP Tweet Against Siddaramaiah

* ಮಲ್ಲಿಕಾರ್ಜುನ‌ ಖರ್ಗೆ
* ಡಾ. ಜಿ. ಪರಮೇಶ್ವರ್
* ಮೋಟಮ್ಮ
* ಶ್ರೀನಿವಾಸ್ ಪ್ರಸಾದ್ ಎಂದು ಬಿಜೆಪಿ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

'ಸಿದ್ದರಾಮಯ್ಯ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ' ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಸಿದ್ದರಾಮಯ್ಯ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಟ್ವೀಟ್ ಮಾಡಿದ್ದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+