ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ: ವಿವಿಧ ಸಮುದಾಯಗಳಿಂದ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ
ಬೆಂಗಳೂರು, ಅ.11: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದ ನಂತರ ವಿವಿಧ ಸಮುದಾಯಗಳಿಂದ ಮೀಸಲಾತಿ ಸಂಬಂಧಿತ ಬೇಡಿಕೆಗಳು ತೀವ್ರಗೊಂಡಿವೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಎಲ್ಲಾ ಸಮುದಾಯಗಳು ಇ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿದ್ದು, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ವಿವಿಧ ಸಮುದಾಯಗಳಿಂದ ಮೀಸಲಾತಿ ಸಂಬಂಧಿತ ಬೇಡಿಕೆಗಳಿವೆ. ಪಂಚಮಸಾಲಿ ಲಿಂಗಾಯತರು ಹಿಂದುಳಿದ ವರ್ಗಗಳ ಪ್ರವರ್ಗ 2A ಅಡಿಯಲ್ಲಿ ಬರಲು ಬಯಸುತ್ತಾರೆ ಅವರು ಈಗ ಪ್ರವರ್ಗ 3B ಅಡಿಯಲ್ಲಿದ್ದಾರೆ. ಪ್ರಸ್ತುತ OBC ಗಳಾಗಿರುವ ಕುರುಬರು, ಪರಿಶಿಷ್ಟ ಪಂಗಡದ ಅಡಿಯಲ್ಲಿ ಸೇರಿಸಲು ಒತ್ತಾಯಿಸುತ್ತಿದ್ದಾರೆ. ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರನ್ನು ಒಬಿಸಿ ಪಟ್ಟಿಗೆ ಸೇರಿಸಲು ಉತ್ಸುಕರಾಗಿದ್ದಾರೆ.

ಮೊದಲು ಎಸ್‌ಸಿ/ಎಸ್‌ಟಿ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ. "ಸ್ವಾಭಾವಿಕವಾಗಿ ಎಲ್ಲರಿಗೂ ಆಕಾಂಕ್ಷೆಗಳಿರುತ್ತವೆ. ನಾವು ಮೊದಲು ಎಸ್‌ಸಿ/ಎಸ್‌ಟಿ ಸಮುದಾಯಗಳ ಕುರಿತು ನಿರ್ಧಾರ ಕೈಗೆತ್ತಿಕೊಂಡಿದ್ದೇವೆ. ಅದಕ್ಕೆ ಸಂಬಂಧಿಸಿದಂತೆ ಕಾನೂನು ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದೇವೆ (ಎಸ್‌ಸಿ/ಎಸ್‌ಟಿ ಕೋಟಾದಲ್ಲಿ ಹೆಚ್ಚಳ) "ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳ ಕೋಟಾವನ್ನು ಹೆಚ್ಚಿಸಲು ಕರ್ನಾಟಕ ಕ್ಯಾಬಿನೆಟ್ ಅಕ್ಟೋಬರ್ 8 ರಂದು ತನ್ನ ಔಪಚಾರಿಕ ಅನುಮೋದನೆಯನ್ನು ನೀಡಿದೆ.

ಆಯೋಗದ ನಿರ್ಧಾರಗಳನ್ನು ಪರಿಶೀಲಿಸಿ ಸರ್ಕಾರದ ಕ್ರಮ
''ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಮೀಸಲಾತಿ ವಿಷಯಗಳ ಬಗ್ಗೆ, ಕಾಯಂ ಹಿಂದುಳಿದ ವರ್ಗಗಳ ಆಯೋಗವು ಅದನ್ನು ಪರಿಶೀಲಿಸುತ್ತಿದೆ. ಆಯೋಗದಲ್ಲಿ ತಜ್ಞರೂ ಇದ್ದಾರೆ. ಆಯೋಗವು ಮಾಡಿದ ಶಿಫಾರಸುಗಳನ್ನು ಆಧರಿಸಿ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತದೆ. ಇದನ್ನು ಗಣನೆಗೆ ತೆಗೆದುಕೊಂಡು ಸರ್ಕಾರವು ಕಾಲಕಾಲಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ" ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳ ಕೋಟಾವನ್ನು ಹೆಚ್ಚಿಸಲು ಕರ್ನಾಟಕ ಕ್ಯಾಬಿನೆಟ್ ಅಕ್ಟೋಬರ್ 8 ರಂದು ತನ್ನ ಔಪಚಾರಿಕ ಅನುಮೋದನೆಯನ್ನು ನೀಡಿತು. ಇದರೊಂದಿಗೆ, ಎಸ್‌ಸಿಗಳ ಕೋಟಾವು ಶೇಕಡಾ 15 ರಿಂದ ಶೇಕಡಾ 17 ಕ್ಕೆ ಮತ್ತು ಎಸ್‌ಟಿಗಳಿಗೆ ಶೇಕಡಾ 3 ರಿಂದ ಶೇಕಡಾ 7 ಕ್ಕೆ ಏರುತ್ತದೆ. ಇದನ್ನು ಅನುಸರಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸಂವಿಧಾನದ ಒಂಬತ್ತನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸುತ್ತದೆ.

ಮೂರು ವರ್ಷ ಕಷ್ಟ ಮಪಟ್ಟು ಮೀಸಲಾತಿ ಹೆಚ್ಚಿಸಿದ್ದೇವೆ!
ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿಯ ಶಿಫಾರಸ್ಸಿನಂತೆ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರದ ತೀರ್ಮಾನಕ್ಕೆ ಸಮುದಾಯದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಎಸ್‌ಸಿ, ಎಸ್ಟಿ ಸಮುದಾಯದ ಮುಖಂಡರು ಮತ್ತು ಯುವಕರು ಪಟಾಕಿ ಸಿಡಿಸಿ ಜಯಘೋಷ ಕೂಗಿ ಸಂತಸ ಹೊರಹಾಕಿದ್ದಾರೆ.
ಇತ್ತ, 'ನಾನು 151 ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ'' ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಎಸ್‌ಟಿ ಕೋಟಾ ಹೆಚ್ಚಳಕ್ಕೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮಿ ಉಪವಾಸ!
ಇನ್ನು, ರಾಜ್ಯದಲ್ಲಿ ಆರು ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹೀಗಾಗಿ ಎಸ್‌ಸಿ/ಎಸ್‌ಟಿ ಕೋಟಾವನ್ನು ಹೆಚ್ಚಿಸುವ ನಿರ್ಧಾರವನ್ನು ಕೆಲವರು ರಾಜಕೀಯ ತಂತ್ರ ಎಂದು ಆರೋಪಿಸುತ್ತಿದ್ದಾರೆ. ಸರ್ಕಾರಿ ಸಂಸ್ಥೆಗಳನ್ನೆಲ್ಲಾ ಖಾಸಗಿಯವರಿಗೆ ಬಿಟ್ಟುಕೊಟ್ಟು, ಈಗ ಮೀಸಲಾತಿ ಹೆಚ್ಚಿಸುತ್ತಿರುವುದು ಯಾವ ಕಾರಣಕ್ಕೆ ಎಂದು ಪ್ರಶ್ನಿಸುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ಸರ್ಕಾರವು ಮೀಸಲಾತಿ ಹೆಚ್ಚಿಸಲು ಮತ್ತು ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೆ ತರಲು ಎಸ್‌ಸಿ/ಎಸ್‌ಟಿ ಸಮುದಾಯಗಳು ಮತ್ತು ಶಾಸಕರಿಂದ ಭಾರೀ ಒತ್ತಡಕ್ಕೆ ಒಳಗಾಗಿತ್ತು. ಎಸ್‌ಟಿ ಕೋಟಾ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಧರ್ಮಾಧ್ಯಕ್ಷ ಪ್ರಸನ್ನಾನಂದ ಸ್ವಾಮಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.












Click it and Unblock the Notifications