ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೀಸಲಾತಿ ಹೋರಾಟ; ಸಿದ್ದರಾಮಯ್ಯ ಸರಣಿ ಟ್ವೀಟ್, ಬಿಜೆಪಿಗೆ ಪ್ರಶ್ನೆಗಳು!

|
Google Oneindia Kannada News

ಬೆಂಗಳೂರು, ಫೆಬ್ರವರಿ 14; "ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆಗಳು ಜೋರಾಗಿವೆ. ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಬೆಂಗಳೂರಿನಲ್ಲಿ ಕೊನೆಗೊಂಡಿದೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಬೃಹತ್ ಹೋರಾಟ ನಡೆಯುತ್ತಿದೆ.

ಜಾತಿಗಳ ಮೀಸಲಾತಿ ಹೋರಾಟದ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?ಜಾತಿಗಳ ಮೀಸಲಾತಿ ಹೋರಾಟದ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಮೀಸಲಾತಿ ಹೋರಾಟದ ಹಿನ್ನಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಮೀಸಲಾತಿ ಹೋರಾಟ; ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ಏನು? ಮೀಸಲಾತಿ ಹೋರಾಟ; ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ಏನು?

"ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು?. ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು?. ಸ್ಥಳೀಯ ಸಂಸ್ಥೆಗಳ ಇಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ?" ಎಂದು ಟ್ವೀಟ್‌ ಬಾಣ ಬಿಟ್ಟಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್ ಪರಮಶಿವಯ್ಯ ನೇಮಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್ ಪರಮಶಿವಯ್ಯ ನೇಮಕ

ಸಿದ್ದರಾಮಯ್ಯ ಸರಣಿ ಟ್ವೀಟ್

ಸಿದ್ದರಾಮಯ್ಯ ಸರಣಿ ಟ್ವೀಟ್

"ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ ,ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ ಪ್ರಶ್ನೆ

"ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು" ಎಂದು ಟ್ವೀಟ್ ಮಾಡಿದ್ದಾರೆ.

ಯಾರ ವಿರುದ್ಧ ಹೋರಾಟ?

ಯಾರ ವಿರುದ್ಧ ಹೋರಾಟ?

"ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಯಲ್ಲಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಶಿಫಾರಸು ಅನುಷ್ಠಾನ

ಶಿಫಾರಸು ಅನುಷ್ಠಾನ

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು.

English summary
Demand for reservation in Karnataka. Opposition leader and former chief minister Siddaramaiah tweets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X