ಬಜೆಟ್ ಅಧಿವೇಶನದ ಬಳಿಕ ರಾಜ್ಯ ಸಂಪುಟ ಪುನಾರಚನೆ: 8-12 ಮಂತ್ರಿಗಳಿಗೆ ಗೇಟ್ಪಾಸ್? ಯಾರಿಗೆ ಸಿಗಲಿದೆ ಮಂತ್ರಿಗಿರಿ?
ಬೆಂಗಳೂರು: ಡಿ.ದೇವರಾಜ್ ಅರಸು ಅವರ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ನಾಯಕತ್ವ ಬದಲಾವಣೆಯಿಂದ ತಪ್ಪಿಸಿಕೊಳ್ಳಲು ಸಚಿವ ಸಂಪುಟ ಪುನಾರಚನೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಧಿಕಾರ ಹಂಚಿಕೆಯ ಸೂತ್ರದ ಪ್ರಚಾರ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿರುವ ಡಿ ಕೆ ಶಿವಕುಮಾರ್, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ರು ಸಹ ಮುಖ್ಯಮಂತ್ರಿ ಸ್ಥಾನದ ಕುರಿತು ಯಾವುದೇ ಚರ್ಚೆಯನ್ನ ನಡೆಸಿಲ್ಲ, ಅಲ್ಲದೇ ಕಾದು ನೋಡುವ ತಂತ್ರಗಾರಿಕೆಯನ್ನ ಅನುಸರಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ಡಿ ಕೆ ಶಿವಕುಮಾರ್ ಮನವಿಯನ್ನ ತಳ್ಳಿ ಹಾಕಿದೆ. ಹೀಗಾಗಿ ದೆಹಲಿಯಿಂದ ಬಂದ ಡಿ ಕೆ ಶಿವಕುಮಾರ್ ಕಾಲವೇ ಉತ್ತರ ನೀಡಲಿದೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ರು.

ಇತ್ತ ರಾಜ್ಯ ಬಜೆಟ್ಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ ಈಗಾಗಲೇ ಸಿದ್ದರಾಮಯ್ಯ ಅವರು ರಾಹುಲ್ ಅವರ ಆಪ್ತ ಸಹಾಯಕ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಬಜೆಟ್ ಅಧಿವೇಶನದ ಬಳಿಕ ಸಂಪುಟ ಪುನಾರಚನೆ ಮಾಡಿದ್ರೆ ಹಲವು ಅಸಮಾಧಾನಿತ ಶಾಸಕರಿಗೆ ಮಂತ್ರಿ ಪದವಿಯನ್ನ ನೀಡುವ ಮೂಲಕ ತನ್ನ ಸ್ಥಾನವನ್ನ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ಕೈ ಪಾಳಯದಲ್ಲಿನ ಹಿರಿಯ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸರ್ಜರಿಗೆ ಕೈ ಹಾಕಲಿದ್ದಾರೆ ಎನ್ನಲಾಗಿದ್ದು, ಇದು ಹಾಲಿ ಸಚಿವರಿಗೆ ನಡುಕ ಹುಟ್ಟಿಸಿದರೆ, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸಲು, ಕೆಲ ಸಚಿವರ ಕಾರ್ಯವೈಖರಿಯ ಬಗ್ಗೆ ಇದ್ದ ಅಸಮಾಧಾನವನ್ನು ಹೋಗಲಾಡಿಸಲು ಸಂಪುಟ ಪುನಾರಚನೆ ಅನಿವಾರ್ಯ ಎನ್ನುವ ಸಿದ್ದರಾಮಯ್ಯನವರ ವಾದಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸಲಿದೆ.
ಇನ್ನೂ ಬಹುದಿನಗಳಿಂದ ಮಂತ್ರಿಗಿರಿಗಾಗಿ ಕಾದುಕುಳಿತಿದ್ದ ಶಾಸಕರು ಸಚಿವ ಸ್ಥಾನದ ಲಾಬಿ ಗರಿಗೆದರಿದೆ.. ಇತ್ತ ಸಚಿವ ಸಂಪುಟ ಸಣ್ಣಪುಟ್ಟ ಬದಲಾವಣೆಯಲ್ಲ, ಇದೊಂದು ಮೇಜರ್ ಸರ್ಜರಿ. ಹೀಗಾಗಿ ಈ ಬಾರಿ ಕನಿಷ್ಠ 8 ರಿಂದ ಗರಿಷ್ಠ 12 ಹಾಲಿ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ 7-8 ಬಾರಿ ಶಾಸಕರಾಗಿ ಆಯ್ಕೆಯಾದ ಹಿರಿಯರನ್ನು ಗೌರವಯುತವಾಗಿ ಕೆಳಗಿಳಿಸಿ, ಅವರಿಗೆ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಿ, ಹೊಸ ಮುಖಗಳಿಗೆ, ಯುವಕರಿಗೆ ಅವಕಾಶ ಕಲ್ಪಿಸುವುದು ಹೈಕಮಾಂಡ್ನ ಇರಾದೆಯಾಗಿದೆ.
ಯಾರಿಗೆ ಸಿಗಲಿದೆ ಮಂತ್ರಿಗಿರಿ?
* ಬಿ.ಕೆ.ಹರಿಪ್ರಸಾದ್
* ಆರ್.ವಿ.ದೇಶಪಾಂಡೆ
* ಸಲೀಂ ಅಹಮದ್
* ನಾಗೇಂದ್ರ
* ಬಸವರಾಜ ರಾಯರೆಡ್ಡಿ
* ಅಪ್ಪಾಜಿ ನಾಡಗೌಡ
* ಲಕ್ಷ್ಮಣ ಸವದಿ
* ರೂಪ ಶಶಿಧರ್
* ತರೀಕೆರೆ ಶ್ರೀನಿವಾಸ್
* ಲೇಔಟ್ ಕೃಷ್ಣಪ್ಪ
* ಟಿ.ಬಿ. ಜಯಚಂದ್ರ
* ರಿಜ್ವಾನ್ ಅರ್ಷದ್ /ಯು.ಟಿ.ಖಾದರ್
* ಕೆ.ಎನ್. ರಾಜಣ್ಣ/ರಘುಮೂರ್ತಿ
* ಶಿವಲಿಂಗೇಗೌಡ/ಎಚ್.ಸಿ. ಬಾಲಕೃಷ್ಣ
* ಪಿ.ಎಂ.ನರೇಂದ್ರ ಸ್ವಾಮಿ/ಶಿವಣ್ಣ
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications