ಅಲ್ಪಸಂಖ್ಯಾತ ನಿರ್ದೇಶನಾಲಯ; ಶಾಲೆಗಳ 6ನೇ ತರಗತಿ ಪ್ರವೇಶ, ಷರತ್ತು

ಬೆಂಗಳೂರು, ಫೆಬ್ರವರಿ 19; ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರ ಕಛೇರಿ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ/ ಸರ್ಕಾರಿ ಮುಸ್ಲಿಂ/ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿ ಅಧಿಸೂಚನೆ ಹೊರಡಿಸುವ ಬಗ್ಗೆ ಎಂಬ ವಿಷಯವನ್ನು ಅಧಿಸೂಚನೆ ಒಳಗೊಂಡಿದೆ.

Residential Schools Admission How To Apply For 6th Standard

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 29 ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, 90 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 123 ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

2024-25ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚನೆ ನೀಡಲಾಗಿದೆ.

ಅಧಿಸೂಚನೆಯ ಪತ್ರಿಕಾ ಪ್ರಕಟಣೆ ಹೊರಡಿಸಿ, ವ್ಯಾಪಕ ಪ್ರಚಾರ ಕೈಗೊಳ್ಳುವುದು. ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.

ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಅಧಿಸೂಚನೆಯೊಂದಿಗೆ ನೀಡಲಾಗಿದೆ. ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚನೆ ನೀಡಿದೆ.

ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು https://sevasindhuservices.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 15/03/2024. ದಾಖಲಾತಿ ಪ್ರಕ್ರಿಯೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಒದಗಿಸಲಾಗಿದ್ದು, ಪ್ರವೇಶ ಪರೀಕ್ಷೆ, ಆಯ್ಕೆಪಟ್ಟಿ ಮತ್ತು ಮುಂತಾದ ಪ್ರಕ್ರಿಯೆಗಳನ್ನು ನಿರ್ವಹಿಸಲು ನಿರ್ದೇಶನಾಲಯದಿಂದ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.

ಸೀಟುಗಳ ಸಂಖ್ಯೆ; ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿನ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 50, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ (ರಾಜ್ಯ ಪಠ್ಯಕ್ರಮ) 50/60., ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‌ಸಿ ಪಠ್ಯಕ್ರಮ) 80/60/50 ಸೀಟುಗಳು ಲಭ್ಯವಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕದ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 11 ರಿಂದ 13 ವರ್ಷಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+