ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಬೇಡ್ಕರ್ ಹೆಸರಿನಲ್ಲಿ 125 ವಸತಿ ಶಾಲೆ : ಸಿದ್ದರಾಮಯ್ಯ

ಮೌಢ್ಯ ನಿಷೇಧ ಕಾಯ್ದೆಯನ್ನು ತಮ್ಮ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರ 125ನೇ ವಾರ್ಷಿಕೋತ್ಸವದಲ್ಲಿ ಹೇಳಿದ್ದಾರೆ.

By Prasad
|
Google Oneindia Kannada News

ಬೆಂಗಳೂರು, ಫೆಬ್ರವರಿ 16 : ಪ್ರತಿ ಹೋಬಳಿಗಳಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವ 125 ವಸತಿ ಶಾಲೆಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ವರ್ಷಾಚರಣೆಯ ಅಂತಾರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಡಾ: ಬಿ.ಆರ್. ಅಂಬೇಡ್ಕರ್ ಜ್ಞಾನದರ್ಶನ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವುದು ಪ್ರಮುಖವಾಗುತ್ತದೆ. ಆದ್ದರಿಂದ ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆಯಲು ಅನುಕೂಲವಾಗುವಂಗತೆ ವಸತಿ ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಪ್ರತಿ ಹೋಬಳಿಗಳಲ್ಲಿ ವಸತಿ ಶಾಲೆಯನ್ನು ತೆರೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

Residential schools in the name of BR Ambedkar : Siddaramaiah

ಶೇ.66ರಷ್ಟು ಮಕ್ಕಳಿಗೆ ಸರ್ಕಾರದ ವತಿಯಿಂದ ಶಿಕ್ಷಣವನ್ನು ನೀಡಲಾಗುತ್ತಿದೆ. ಶಿಕ್ಷಣದ ಜೊತೆಗೆ ಜ್ಞಾನವನ್ನು ನೀಡುವುದು ಮುಖ್ಯವಾಗಿದೆ. ಬಸವಣ್ಣ, ಕನಕದಾಸ, ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಚಿಂತನೆ, ವಿಚಾರಧಾರೆಯನ್ನು ಯುವ ಸಮುದಾಯದವರಿಗೆ ತಿಳಿಸುವ ಮೂಲಕ ಅವರ ಜ್ಞಾನವನ್ನು ಹೆಚ್ಚಿಸಬೇಕು ಎಂದರು.

ಸಾಮಾಜಿಕ ನ್ಯಾಯಕ್ಕೆ ಸಂಬಂಧಪಟ್ಟಂತಹ ಯಾವುದೇ ಕಾರ್ಯಕ್ರಮಗಳಿಗೆ ಅನುದಾನ ನೀಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಅವರು ಮೌಢ್ಯ ನಿಷೇಧ ಕಾಯ್ದೆಯನ್ನು ತಮ್ಮ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಉತ್ತಮ ಸಂವಿಧಾನವನ್ನು ರಚನೆ ಮಾಡಿದ್ದರೂ ಅಂಬೇಡ್ಕರ್ ಅವರಿಗೆ ಸಮಾಧಾನವಿರಲಿಲ್ಲ. ಸಂವಿಧಾನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಹಕ್ಕುಗಳಾಗಿ ಮಾಡಬೇಕಿತ್ತು ಎಂದು ಅವರಿಗೆ ಅನಿಸಿತ್ತು. ಎಲ್ಲಿಯವರೆಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇರುವುದೋ ಅಲ್ಲಿಯವರೆಗೆ ಅವರ ಚಿಂತನೆ ಮತ್ತು ಬರಹಗಳು ಅಪ್ರಸ್ತುತವಾಗಿರುತ್ತವೆ ಎಂದರು.

Residential schools in the name of BR Ambedkar : Siddaramaiah

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಆಂಜನೇಯ ಅವರು, ಅಂಬೇಡ್ಕರ್ ಅವರ 125ನೇ ವರ್ಷಾಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕೆಂಬ ದೃಷ್ಟಿಯಿಂದ ಅಂಬೇಡ್ಕರ್ ಅವರ ಜ್ಞಾನ, ಚಿಂತನೆ ವಿಚಾರವನ್ನು ಆರು ತಿಂಗಳುಗಳ ಕಾಲ ಸುಮಾರು ಎರಡು ಲಕ್ಷ ಯುವ ಸಮುದಾಯಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಅಂಬೇಡ್ಕರ್ ಅವರ ವಿಚಾರಧಾರೆ ಕುರಿತ ಪುಸ್ತಕ ಬಿಡುಗಡೆಗೊಳಿಸಿ, ಅಂತಾರಾಷ್ಟ್ರೀಯ ಸಮ್ಮೇಳನಕ್ಕಾಗಿ ತಯಾರಿಸಿರುವ ವೆಬ್‍ಸೈಟ್‍ನ್ನು ಮುಖ್ಯಮಂತ್ರಿವರು ಉದ್ಘಾಟಿಸಿದರು.

ಲೋಕೋಪಯೋಗಿ ಸಚಿವ ಡಾ: ಎಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಆರ್. ರೋಷನ್‍ಬೇಗ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ: ಚಂದ್ರಶೇಖರ ಕಂಬಾರ, ನಿವೃತ್ತ ಐ.ಎ.ಎಸ್. ಅಧಿಕಾರಿ ರಾಜು, ಚಿಂತಕರಾದ ಡಾ: ಮರುಳಸಿದ್ದಪ್ಪ, ಕವಿ ಡಾ: ಸಿದ್ದಲಿಂಗಯ್ಯ, ಕವಿಯತ್ರಿ ಡಾ: ಕೆ. ಷರೀಫಾ, ಹಂಪಿ ವಿಶ್ವವಿದ್ಯಾನಿಲಯದ ಕುಲಪತಿ ಡಾ: ಮಲ್ಲಿಕಾ ಘಂಟಿ, ಡಾ: ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ ಸಂಯೋಜನಾ ಸಮಿತಿ ವಿಶೇಷಾಧಿಕಾರಿ ಪ್ರೊ. ಎಸ್. ಜಾಫೆಟ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.

English summary
Chief Minister Siddaramaiah told 125 residential schools will be established in the name of Dr BR Ambedkar. He was speaking in Jnanajyoto hall in Bengaluru on the occasion of 125th birth anniversary of Ambedkar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X