ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಅಧ್ಯಕ್ಷರ ನೇಮಕ
ಬೆಂಗಳೂರು, ಜನವರಿ 2: ಐದು ವರ್ಷಗಳಿಂದ ಕಾಯಂ ಅಧ್ಯಕ್ಷರಿಲ್ಲದೆ, ಹಂಗಾಮಿ ಅಧ್ಯಕ್ಷರ ಮೇಲೆ ಕಾರ್ಯ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಹೊಸ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲಾಗಿದೆ.
ರಾಜ್ಯ ಮಾನವ ಹಕ್ಕುಗಳ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಹೆಚ್ ವಘೇಲಾ ಅವರನ್ನು ನೇಮಿಸಲು ಇಂದು (ಮಂಗಳವಾರ) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನೇಮಕ ವಿಚಾರವಾಗಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಗೃಹ ಸಚಿವ ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರರು ಇದ್ದರು.
ಮೀರಾ ಸಿ ಸಕ್ಸೇನ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿದ್ದರು.












Click it and Unblock the Notifications