ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದ ಪತ್ನಿ ರೇವತಿ. ಹೇಗಿದೆ ನೋಡಿ ಅಬ್ಬರ
ರಾಮನಗರ, ನವೆಂಬರ್ 04: ಚನ್ನಪಟ್ಟಣ ಅಖಾಡ ರಂಗೇರಿದೆ. ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ಪತ್ನಿಯಲ್ಲಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ರೇವತಿ ಪ್ರಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳು, ಮಹಿಳೆಯರು ಕೂಡ ಸಾಥ್ ನೀಡಿದರು.
ಇಂದು ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಎಚ್‌ಡಿ ದೇವೇಗೌಡರು ಕೂಡ ಪ್ರಚಾರ ಮಾಡಲಿದ್ದು ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. ಅಲ್ಲದೇ ಇಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಕೂಡ ಪ್ರಚಾರ ಮಾಡಲಿದ್ದಾರೆ.

ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ಶ್ರೀಮತಿ ರೇವತಿ ಕುಮಾರಸ್ವಾಮಿ ಅವರು ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ ಹಾಗೂ ಪದವಿ ಕಾಲೇಜಿನ ಸಮೀಪ ಅವರು ನಿಖಿಲ್ ಅವರ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್ ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕುಶಲೋಪರಿ ವಿಚಾರಿಸಿದರು. ವಿದ್ಯಾರ್ಥಿಗಳು ರೇವತಿಯವರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು. ಎಲ್ಲರನ್ನೂ ಅತ್ಯಂತ ಆತ್ಮೀಯತೆಯಿಂದ ಮಾತನಾಡಿಸಿದ ಅವರು, ಅವರ ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದುಕೊಂಡು ಅವರ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ರೇವತಿ ಅವರ ಸರಳತೆ ಕಂಡು ವಿದ್ಯಾರ್ಥಿಗಳು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ನಿಖಿಲ್ ಅವರು ಗೆದ್ದೆ ಗೆಲ್ಲುತ್ತಾರೆ
ಈ ವೇಳೆ ಪದವಿ ವಿದ್ಯಾರ್ಥಿನಿಯೊಬ್ಬರು, ಈ ಚುನಾವಣೆಯಲ್ಲಿ ನಿಖಿಲ್ ಅಣ್ಣನ ಗೆಲುವು ಶತಸಿದ್ಧ. ಅಣ್ಣ ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿ ವಿಧಾನಸಭೆಗೆ ಹೋಗುತ್ತಾರೆ. ಯಾವುದೇ ಭಯಬೇಡ, ಇಡೀ ಯುವ ಸಮುದಾಯ ನಿಖಿಲ್ ಅಣ್ಣನ ಬೆನ್ನಿಗೆ ಇದೆ ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪ್ರೀತಿ ಹಾಗೂ ವಿಶ್ವಾಸಕ್ಕೆ ರೇವತಿ ಅವರು ಸಂತಸ ವ್ಯಕ್ತಪಡಿಸಿದರು. ರೇವತಿ ಅವರೊಂದಿಗೆ ರಾಜ್ಯ ಮಹಿಳಾ ಜನತಾದಳ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಹಾಗೂ ಜೆಡಿಎಸ್ ಮಹಿಳಾ ಘಟಕದ ಅನೇಕ ನಾಯಕರು ಜತೆಯಲ್ಲಿ ಇದ್ದರು.
ಚನ್ನಪಟ್ಟಣ ಜನತೆ ನನ್ನ ಕೈ ಬಿಡುವುದಿಲ್ಲ: ನಿಖಿಲ್
ನಿಖಿಲ್ ಸೋಲಿಸಲು ಇಡೀ ಸರ್ಕಾರವೇ ಕ್ಷೇತ್ರಕ್ಕೆ ಬರುತ್ತಿರುವುದು ಕಾಂಗ್ರೆಸ್ ಪಕ್ಷದ ಚುನಾವಣೆ ತಂತ್ರ. ಅವರ ಕೆಲಸ ಅವರು ಮಾಡಿಕೊಳ್ಳಲಿ, ನಮ್ಮ ಕೆಲಸ ನಾವು ಮಾಡೋಣ. ನನ್ನ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಿ ಚುನಾವಣೆ ಮಾಡ್ತಿದ್ದಾರೆ ಮಾಡಲಿ. ಅವರು ಏನೇ ಕುತಂತ್ರ ರಾಜಕಾರಣ ಮಾಡಿದ್ರೂ ಚನ್ನಪಟ್ಟಣ ಜನತೆ ನನ್ನ ಕೈ ಬಿಡುವುದಿಲ್ಲ.ಕ್ಷೇತ್ರದ ಜನ ಕೈ ಹಿಡಿಯುವ ವಿಶ್ವಾಸವಿದೆ ಎಂದು ತಿಳಿಸಿದರು.
ಹೆಚ್ ಡಿ ಕುಮಾರಸ್ವಾಮಿ ಕುಟುಂಬ ರಾಜಕಾರಣ ಬಗ್ಗೆ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮಾತುಗಳನ್ನು ರಾಜ್ಯದ ಜನತೆಗೆ ಗಮನಿಸುತ್ತಿದ್ದಾರೆ. ನ.13ಕ್ಕೆ ಎಲ್ಲದಕ್ಕೂ ಉತ್ತರವನ್ನ ಅವರೇ ಕೊಡ್ತಾರೆ. ತೀರ್ಪು, ತೀರ್ಮಾನ ಕೊಡೊದು ಕ್ಷೇತ್ರದ ಮತದಾರರು. ಎಲ್ಲವನ್ನೂ ಅವರಿಗೆ ಬಿಟ್ಟಿದ್ದೇನೆ. ಮತದಾರರ ಆಶೀರ್ವಾದ ನನ್ನ ಮೇಲೆ ಇದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಬೇವೂರು ಜಿ.ಪಂ ವ್ಯಾಪ್ತಿಯಲ್ಲಿ ಪ್ರಚಾರ ಮಾಡ್ತಿದ್ದೇನೆ ಇನ್ನೂ ಪ್ರಚಾರಕ್ಕೆ ಒಂದುವಾರಗಳ ಕಾಲ ಮಾತ್ರ ಬಾಕಿ ಇದೆ. ಜನರ ಉತ್ಸಾಹ ನೋಡಿದ್ರೆ ಅಧಿಕ ಅಂತರದಿಂದ ಗೆಲ್ಲುವ ವಿಶ್ವಾಸ ಇದೆ. ಜನ ಕುಮಾರಸ್ವಾಮಿ ಹಾಗೂ ದೇವೇಗೌಡರ ಕೆಲಸಗಳ ಬಗ್ಗೆ ಮಾತನಾಡ್ತಿದ್ದಾರೆ ಎಂದರು.
ಇಂದು ನನ್ನ ಶ್ರೀಮತಿ ಕೂಡ ನನ್ನ ಪರ ಪ್ರಚಾರ ಮಾಡಿದ್ದಾರೆ. ವಿದ್ಯಾರ್ಥಿಗಳ ಬಳಿ ಮತಯಾಚನೆ ಮಾಡಿದ್ದಾರೆ. ಮಹಿಳಾ ಕಾರ್ಯಕರ್ತರು ಒತ್ತಾಯ ಮಾಡಿ ಪ್ರಚಾರಕ್ಕೆ ಕರೆತಂದಿದ್ದಾರೆ.ರೇವತಿ ಅವರ ತಾಯಿ ಕೂಡಾ ಸಾಮಂದಿಪುರು ಗ್ರಾಮದವರು. ಹಾಗಾಗಿ ಅಲ್ಲಿಗೆ ಹೋಗಿದ್ದಾಗ ಅದರ ಬಗ್ಗೆ ಮಾತನಾಡಿದೆ ಅಷ್ಟೇ.ಅದನ್ನೇ ಪ್ರಚಾರಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications