ಕಾಂಗ್ರೆಸ್ ಕ್ಷುಲ್ಲಕ, ಸೇಡಿನ ರಾಜಕಾರಣ ಮಾಡುತ್ತಿದೆ; ನಟ ಚೇತನ್ ಆಕ್ರೋಶ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯು ಮೂರು ತಿಂಗಳ ಹಿಂದಿನ ಹೇಳಿಕಗೆ ಮಾಜಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರಕ್ಕೆ ನಟ ಚೇತನ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಫೆಬ್ರವರಿಯಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಅವರು, ಟಿಪ್ಪು ಸುಲ್ತಾನ್‌ನಂತೆ ಸಿದ್ದರಾಮಯ್ಯರನ್ನು ಮುಗಿಸಿ ಎಂದು ಬೆಂಕಿ ಹಚ್ಚುವ, ಸ್ವೀಕಾರ್ಹವಲ್ಲದ ಹೇಳಿಕೆ ನೀಡಿದ್ದರು. ಆ ಬಳಿಕ ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದ್ದರು.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) May 25, 2023
ಇದೀಗ ಕಾಂಗ್ರೆಸ್ ಎಫ್ಐಆರ್ ದಾಖಲಿಸಿದೆ. ಇದು ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣದಂತೆ ತೋರುತ್ತಿದೆ. ಕಾಂಗ್ರೆಸ್ ಭಾರೀ ಜನಾದೇಶವನ್ನು ಗೆದ್ದಿದೆ. ಈಗ ಅದು ತನ್ನ ಸ್ವಂತ ಅಹಂಕಾರಗಳನ್ನು ಪೂರೈಸುವ ಬದಲು ಕರ್ನಾಟಕ ಜನರ ಸೇವೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಜಾಬ್ ನಿಷೇಧವನ್ನು ಕಾಂಗ್ರೆಸ್ ಸರ್ಕಾರ ಮರುಪರಿಶೀಲಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಿಜವಾದ ಜಾತ್ಯತೀತತೆಗಾಗಿ, ಹಿಜಾಬ್ ನಿಷೇಧ (ಸಮವಸ್ತ್ರ) ಎಲ್ಲಾ ಧರ್ಮಗಳ/ಸಂಸ್ಕೃತಿಗಳ ಗುರುತುಗಳನ್ನು ನಿಷೇಧಿಸುವವರೆಗೆ ವಿಸ್ತರಿಸಬೇಕು. ಈ ಗುರುತುಗಳಲ್ಲಿ ಕುಂಕುಮ/ಬಿಂದಿ/ಇಷ್ಟಲಿಂಗ/ ಪೇಟ/ಬಳೆ/ಜನಿವಾರ/ವಿಭೂತಿ/ಶಿಲುಬೆ/ಇತ್ಯಾದಿ ಸೇರಿವೆ ಎಂದು ಬರೆದುಕೊಂಡಿದ್ದಾರೆ.
Priyank Kharge says Congress will reconsider ‘hijab ban’
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) May 25, 2023
For true secularism, ‘hijab ban’ (uniforms) must be extended to banning articles of all religions/cultures—ie, kumkuma/bindi/istalinga/turban/bangles/janivara/vibhuti/cross/etc
Reinstatemnt of hijabs is against secularism pic.twitter.com/i64kRknvuW
ಶಾಲಾ ಸಮವಸ್ತ್ರದಲ್ಲಿ ಹಿಜಾಬ್ ಮರುಸ್ಥಾಪಿಸುವುದು ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಬೆದರಿಕೆಯ ನಂತರ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಅನ್ನು ಆ ಪಟ್ಟಿಗೆ ಸೇರಿಸಿದ್ದಾರೆ. ರಾಜಕೀಯದ ಹೊರತಾಗಿಯೂ, ಒಂದು ಗುಂಪು ಅಥವಾ ಸಂಘಟನೆಯನ್ನು ನಿಷೇಧಿಸುವ ಸಾಂವಿಧಾನಿಕ ಹಕ್ಕು ಭಾರತೀಯ ರಾಜ್ಯಗಳಿಗೆ ಇದೆಯೇ? ಎಂದು ಚೇತನ್ ಪ್ರಶ್ನಿಸಿದ್ದಾರೆ.
ಈ ಹಿಂದೆ ಕರ್ನಾಟಕ ಸರ್ಕಾರ ಪಿಎಫ್ಐ ವಿರುದ್ಧ ನಿಷೇಧವನ್ನು ಶಿಫಾರಸು ಮಾಡಿತ್ತು, ಕೇಂದ್ರ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ಹಿಂದುತ್ವದ ವಿರುದ್ಧ ಕಾಂಗ್ರೆಸ್‌ನ ನಿಷೇಧ ಬೆದರಿಕೆಗಳು ಪೊಳ್ಳಾಗಿ ಕಂಡುಬರುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಿರುದ್ಧ ಎಫ್‌ಐಆರ್
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮೇ 24ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಅವರ ವಿರುದ್ಧ ದೂರು ನೀಡಿ, ಎಫ್‌ಐಆರ್ ದಾಖಲಿಸಲಾಗಿದೆ.
ಅಶ್ವಥ್ ನಾರಾಯಣ ಹೇಳಿದ್ದೇನು?
ಫೆಬ್ರವರಿ 15ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವರಾಗಿದ್ದ ಸಿ.ಎನ್. ಅಶ್ವಥ್ ನಾರಾಯಣ, "ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು".
"ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್‌ನಂತೆ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಟಿಪ್ಪು ಬೇಡ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು," ಎಂಬ ಹೇಳಿಕೆ ನೀಡಿದ್ದರು.
ಇದು ರಾಜ್ಯಾದಂತ್ಯ ಭಾರೀ ಕೋಲಾಹಲ ಎಬ್ಬಿಸಿತ್ತು. ಕಾಂಗ್ರೆಸ್ ಸೇರಿದಂತೆ ಇತರರಿಂದ ವಿರೋಧ ವ್ಯಕ್ತವಾದ ಬಳಿಕ ಅಶ್ವಥ್ ನಾರಾಯಣ ವಿಷಾದ ವ್ಯಕ್ತಪಡಿಸಿದ್ದರು.












Click it and Unblock the Notifications