Get Updates
Get notified of breaking news, exclusive insights, and must-see stories!

Salary hike: ಗ್ರಾಮ ಸಹಾಯಕರ ವೇತನ ಹೆಚ್ಚಳ

ಬೆಂಗಳೂರು, ಮಾರ್ಚ್ 05: ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಗ್ರಾಮ ಸಹಾಯಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆ ಸಚಿವ ಕೃಷ್ಣ ಬೈರೇಗೌಡ ವೇತನ ಹೆಚ್ಚಳದ ಭರವಸೆ ನೀಡಿದ್ದರು.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಪ್ರದೀಪ್‌ ಕುಮಾರ್‌ ಬಿ. ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಸೇವೆಗಳು-2) ಆದೇಶ ಹೊರಡಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

Revenue Department Grama Sahayaka Salary Hike

ವೇತನ ಎಷ್ಟು ಹೆಚ್ಚಳ: ಆದೇಶದಲ್ಲಿ ಕರ್ನಾಟಕ ಗ್ರಾಮ ಕಛೇರಿಗಳ ರದ್ದತಿ ಕಾಯ್ದೆ, 1961ರ ಜಾರಿಯಿಂದಾಗಿ ದಿನಾಂಕ 01/02/1963ರಿಂದ ಅನ್ವಯವಾಗುವಂತೆ ವಂಶಪಾರಂಪರ್ಯದ ಎಲ್ಲಾ ಗ್ರಾಮೀಣ ಹಂತದ ವಿಲೇಜ್ ಆಫೀಸರ್ಸ್ ಹುದ್ದೆಗಳು ರದ್ದಾದುದರಿಂದ, ಕೆಳಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ತಾತ್ಕಾಲಿಕ ಆಧಾರದ ಮೇಲೆ, ಯಾವುದೇ ವಂಶಪಾರಂಪರ್ಯ ಹಕ್ಕುಗಳು ಅನ್ವಯವಾಗದಂತೆ, ಆಡಳಿತಾತ್ಮಕ ಅನುಕೂಲಕ್ಕಾಗಿ ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮಲೆಕ್ಕಿಗರಿಗೆ ಸಹಾಯ ಮಾಡುವ ಸಲುವಾಗಿ ಗ್ರಾಮ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದೆ.

ಸರ್ಕಾರಿ ಆದೇಶಗಳಲ್ಲಿ ಕ್ರಮವಾಗಿ 8,941 ಮತ್ತು 1,509 ಹೀಗೆ ಒಟ್ಟು 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತ ವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದೆ. ನಂತರದ ಸರ್ಕಾರಿ ಆದೇಶದಲ್ಲಿ ಸದರಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತ ವೇತನದ ಆಧಾರದ ಮೇಲೆ ಖಾಯಂ ಆಗಿ ಮುಂದುವರಿಸಲಾಗಿದೆ ಎಂದು ಹೇಳಿದೆ.

ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ಕಾಲಕಾಲಕ್ಕೆ ಹೆಚ್ಚಳ ಮಾಡಲಾಗಿದ್ದು, ಸರ್ಕಾರಿ ಆದೇಶ ದಿನಾಂಕ 01/04/2022ರಿಂದ ಅನ್ವಯಿಸುವಂತೆ ರೂ.12,000 ಗಳಿಂದ ರೂ.13,000ಗಳಿಗೆ ಹಚ್ಚಿ ಸಲಾಗಿದೆ.

ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ದಿನಾಂಕ: 01/04/2024 ರಿಂದ ಅನ್ವಯವಾಗುವಂತೆ ಮಾಸಿಕ ರೂ. 13,000 ಗಳಿಂದ ರೂ.15,000ಗಳಿಗೆ ಹೆಚ್ಚಿಸಲು ಸರ್ಕಾರವು ನಿರ್ಣಯಿಸಿ, ಈ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ದಿನಾಂಕ 01/04/2024ರಿಂದ ಅನ್ವಯವಾಗುವಂತೆ ಮಾಸಿಕ ರೂ. 13,000 ಗಳಿಂದ ರೂ.15,000ಗಳಿಗೆ ಹಚ್ಚಿಸಿ ಆದೇಶಿಸಲಾಗಿದೆ.

ಕೆಲವು ದಿನಗಳ ಹಿಂದೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಗ್ರಾಮ ಸಹಾಯಕರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು.

ತಮ್ಮನ್ನು 'ಡಿ-ಗ್ರೂಪ್' ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಈ ಬೇಡಿಕೆಯನ್ನು ತಳ್ಳಿ ಹಾಕಿತ್ತು. ಈಗ ವೇತನವನ್ನು 13 ರಿಂದ 15 ಸಾವಿರ ರೂ.ಗಳಿಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ್ದ ಗ್ರಾಮ ಸಹಾಯಕರು, ರಾಜ್ಯವ್ಯಾಪಿ ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಗ್ರಾಮ ಸಹಾಯಕರು, ಕಳೆದ 50 ವರ್ಷಗಳಿಂದ ಪೀಳಿಗೆಯಿಂದ ಪೀಳಿಗೆಗೆ ಗ್ರಾಮ ಸಹಾಯಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಆದರೆ, ಗ್ರಾಮ ಸಹಾಯಕರು ಮರಣ ಹೊಂದಿದಾಗ ಸರ್ಕಾರ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಆದ್ದರಿಂದ ಅವರ ಕುಟುಂಬಗಳು ಬೀದಿ ಪಾಲಾಗಿವೆ ಎಂದು ಹೇಳಿದ್ದರು. ಗ್ರಾಮ ಪಂಚಾಯಿತಿ ನೌಕರರಿಗೆ ಇರುವಂತೆ ಕನಿಷ್ಠ ವೇತನ, ಸೇವಾ ಭದ್ರತೆ ಸೇರಿ ವಿವಿಧ ಸೌಲಭ್ಯವನ್ನು ಒದಗಿಸಬೇಕು ಎಂದು ಮನವಿ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+