ಕುಮ್ಕಿ ಜಮೀನಿನಲ್ಲಿರುವ ಬಡವರ ಮನೆಗಳ ತೆರವು ಮಾಡುವುದಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು, ಜುಲೈ 22: ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು. "ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು" ಎಂದು ಮನವಿ ಮಾಡಿದರು.

Revenue Minister Krishna Byre Gowda reacts on Kumki land

ಬಿಜೆಪಿ ನಾಯಕ ಸುನೀಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, "ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಜಮೀನು ನಿಮಗೆ ಆಗುತ್ತೆ, ಆಗುತ್ತಾ ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ" ಎಂದು ಮಾಹಿತಿ ನೀಡಿದ್ದಾರೆ.

"ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ" ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, "ಕೆಎಲ್‌ಆರ್‌ ಆಕ್ಟ್‌ ರೂಲ್‌ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು" ಎಂದು ಭರವಸೆ ನೀಡಿದ್ದಾರೆ.

ಬಡವರ ಮನೆ ತೆರವು ಮಾಡುವುದಿವಿಲ್ಲ: ಸಚಿವ ಕೃಷ್ಣ ಬೈರೇಗೌಡ

ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಸದನಕ್ಕೆ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. "ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಗ್ರ್ಯಾಂಟ್‌ ಮಾಡಬಹುದು. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು" ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+