SSLC: ಎಸ್‌ಎಸ್‌ಎಲ್‌ಪಿ ಪರೀಕ್ಷೆ-2, ಪರಿಷ್ಕೃತ ವೇಳಾಪಟ್ಟಿ
ಬೆಂಗಳೂರು, ಮೇ 19: ಪ್ರೌಢಶಾಲಾ ಶಿಕ್ಷಕರ ಒತ್ತಾಯಕ್ಕೆ ಮಣಿದ ಶಿಕ್ಷಣ ಇಲಾಖೆ 'ವಿಶೇಷ ಬೋಧನಾ ಪರಿಹಾರ ತರಗತಿ'ಗಳ ವೇಳಾಪಟ್ಟಿ ಬದಲಿಸಿತ್ತು. ಈಗ ಎಸ್‌ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಹಿಂದೆ 2024ರ ಎಸ್‌ಎಸ್ಎಲ್‌ಸಿ ಪರೀಕ್ಷೆ-2 ಅನ್ನು ದಿನಾಂಕ 07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2 ಅನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ.

ಈ ಪರಿಷ್ಕೃತ ವೇಳಾಪಟ್ಟಿಯನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಜಾಲತಾಣ www.kseab.karnataka.gov.inದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಕ್ರಮವಹಿಸಲು ತಿಳಿಸಿದೆ.
ವಿಶೇಷ ಸೂಚನೆಗಳು; ವಿದ್ಯಾರ್ಥಿಗಳಿಗೆ ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುವುದು. 24/06/2024 (ಸೋಮವಾರ)ರಂದು ಜೆ.ಟಿ.ಎಸ್. (56, 57, 58, 59 & 75, 76, 77 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
ವಿಶೇಷ ಚೇತನರ ಹಕ್ಕುಗಳ ಅಧಿನಿಯಮ 2016ರನ್ವಯ ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಸದರಿ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು ನೀಡಲಾಗುವುದು.
ಪ್ರಥಮ ಭಾಷಾ ವಿಷಯಗಳು ಮತ್ತು ಕೋರ್ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ ಅವಧಿ ನಿಗದಿಪಡಿಸಿದೆ.
ಪ್ರಥಮ ಭಾಷಾ ವಿಷಯಗಳು ಮತ್ತು ಕೋರ್ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
ಎಸ್‌ಎಸ್ಎಲ್‌ಸಿ ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ
* 14/6/2024, ಶುಕ್ರವಾರ. ಪ್ರಥಮ ಭಾಷೆ ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30. ಒಟ್ಟು ಅವಧಿ 3 ಗಂಟೆ 15 ನಿಮಿಷ. ಒಟ್ಟು ಅಂಕಗಳು 100.
* 15/6/2024, ಶನಿವಾರ. ತೃತೀಯ ಭಾಷೆ ಹಿಂದಿ (ಎನ್‌ಸಿಇಆರ್‌ಟಿ). ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15. 2.45 ಗಂಟೆ, 15 ನಿಮಿಷ.
* 15/6/2024. ಶನಿವಾರ. ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್& ಹೋಮ್ ಫರ್ನಿಷಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್‌ವೇರ್. ಬೆಳಗ್ಗೆ 10.15 ರಿಂದ ಮಧ್ಯಾಹ್ನ 12.30. 2 ಗಂಟೆ 15 ನಿಮಿಷಗಳು.
* 18/6/2024. ಮಂಗಳವಾರ. ಕೋರ್ ಸಬ್ಜೆಕ್ಟ್ ಗಣಿತ, ಸಮಾಜ ಶಾಸ್ತ್ರ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30. 3 ಗಂಟೆ 15 ನಿಮಿಷಗಳು.
* 19/6/2024. ಬುಧವಾರ. ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30.
* ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್. ಇಂಜಿನಿಯರಿಂಗ್ ಗ್ರಾಫಿಕ್ಸ್-2. ಬೆಳಗ್ಗೆ 10.15, ಮಧ್ಯಾಹ್ನ 1.30. ಮಧ್ಯಾಹ್ನ 2.30 ರಿಂದ ಸಂಜೆ 5.45.
* ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್. ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30.
* ಪ್ರೋಗ್ರಾಮಿಂಗ್ ಇನ್ ಎಎನ್‌ಎಸ್‌ಐ 'ಸಿ'. ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30.. ಅರ್ಥಶಾಸ್ತ್ರ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ತನಕ.
* 20/6/2024, ಗುರುವಾರ. ವಿಜ್ಞಾನ, ರಾಜ್ಯಶಾಸ್ತ್ರ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30. ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ ಮಧ್ಯಾಹ್ನ 2 ರಿಂದ ಸಾಯಂಕಾಲ 5.15ರ ತನಕ.
* 21/6/2024. ಶುಕ್ರವಾರ. ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15.
* 22/6/2024. ಶನಿವಾರ ಸಮಾಜ ವಿಜ್ಞಾನ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರ ತನಕ.












Click it and Unblock the Notifications