karnataka weather: ಎಚ್ಚರ, ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮೈ ಸುಡುವ ಬಿಸಿಲು

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅವಧಿಗೂ ಮುನ್ನ ಬೇಸಿಗೆ ಶುರುವಾಗಿರುವ ವಾತಾವರಣವಿದೆ. ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರುತ್ತಿದ್ದು, ಸುಡುಬಿಸಿಲಿನಿಂದ ಜನ ಕಂಗಾಲಾಗಿದ್ದಾರೆ. ಸದ್ಯ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸರಾಸರಿ 30 ಡಿಗ್ರಿ ಸೆಲ್ಸಿಯಸ್‌ಗೂ ಮೀರಿದೆ. ಮುಂದಿನ ವಾರದ ವೇಳೆಗೆ 40ರಿಂದ 42 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಕೆಳ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ, ಪೂರ್ವ ಹವಾಮಾನವಿರಲಿದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಮಂಜು ಬೀಳುವ ಸಾಧ್ಯತೆ ಇದೆ. ಫೆಬ್ರವರಿ 14ರವರೆಗೆ ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿರಲಿದೆ.

Rising Temperatures In Karnataka Weather Heatwave Expected Next Week

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿಯೂ ಹೆಚ್ಚು ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ. ಮುಂದಿನ ಎರಡು ದಿನಗಳ ಕಾಲ ಮುಖ್ಯವಾಗಿ ಬೆಂಗಳೂರು ನಗರ ಭಾಗದಲ್ಲಿ ಮೋಡವಿಲ್ಲದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಸಾಮಾನ್ಯವಾಗಿ ಬೇಸಿಗೆ ಮಾರ್ಚ್‌ನಲ್ಲಿ ಶುರುವಾಗಿ ಮೇ ತಿಂಗಳವರೆಗೆ ಮುಂದುವರಿಯುತ್ತದೆ. ಆದರೆ ಈ ಬಾರಿ ತಾಪಮಾನ ಅವಧಿಗೂ ಮುನ್ನವೇ ಏರಿಕೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ 30 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಇದು 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಯೂ ಇದೆ. ಅಲ್ಲದೆ ಈ ಬಾರಿ ಬಿಸಿಲು ಕೂಡ ಅಧಿಕವಾಗಿರಲಿದ್ದು, ಜನರಿಗೆ ಸಂಕಷ್ಟ ಗ್ಯಾರಂಟಿ ಎಂದು ಹೇಳಲಾಗುತ್ತಿದೆ.

ಸದ್ಯ ಶುಭ್ರ ಆಕಾಶ, ಶೀತಗಾಳಿ ಸೇರಿದಂತೆ ಹಲವು ಕಾರಣಗಳಿಂದ ತಾಪಮಾನ ಏರಿಕೆ ಕಾಣುತ್ತಿದೆ. ಅವಧಿಗೂ ಮುನ್ನವೇ ಬಿಸಿಲು ಹೆಚ್ಚಾಗಿರುವುದು ಬೇಸಿಗೆ ವಾಡಿಕೆಗಿಂತಲೂ ಏರಿಕೆ ಕಾಣುವ ಸಾಧ್ಯತೆ ಇದೆ. ಇದರಿಂದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಈ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ.

Rising Temperatures In Karnataka Weather Heatwave Expected Next Week

ಎಲ್ಲೆಲ್ಲಿ ಗರಿಷ್ಠ ತಾಪಮಾನ?: ಕೋಲಾರ 30, ತುಮಕೂರು 32, ಉಡುಪಿ 33, ಕಾರವಾರ 34, ಚಿಕ್ಕಮಗಳೂರು 30, ದಾವಣಗೆರೆ 34, ಹುಬ್ಬಳ್ಳಿ 34, ಚಿತ್ರದುರ್ಗ 33, ಹಾವೇರಿ 35, ಬಳ್ಳಾರಿ 36, ಗದಗ 34, ಕೊಪ್ಪಳ 34, ರಾಯಚೂರಿನಲ್ಲಿ 36, ಯಾದಗಿರಿ 35, ವಿಜಯಪುರ 34, ಬೀದರ್ 33, ಕಲಬುರಗಿ 35, ಬಾಗಲಕೋಟೆ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+