ರಾಜ್ಯದಲ್ಲಿ ಮಳೆ ಆರ್ಭಟ: ಜಲಾಶಯದಲ್ಲಿ ಎಷ್ಟು ನೀರಿದೆ?

ಬೆಂಗಳೂರು,ಜು.24: ರಾಜ್ಯದಲ್ಲಿ ಮಳೆ ಆರ್ಭಟ ಮತ್ತೆ ಹೆಚ್ಚಾಗಿದೆ. ಕೊಡಗು, ಕರಾವಳಿ, ಮಲೆನಾಡಿನಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಈ ಭಾಗದ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಾದ್ಯಂತ ಬಿರುಗಾಳಿ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.

ಕಾವೇರಿ ಮತ್ತು ಲಕ್ಷ್ಮಣ ತೀರ್ಥ‌ ನದಿಗಳು ಉಕ್ಕಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಅಣೆಕಟ್ಟೆಗೆ ಬುಧವಾರ 3 ಅಡಿಗಳಷ್ಟು ನೀರು ಬಂದಿದೆ.

jog falls

ಕರಾವಳಿಯಲ್ಲಿ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆ ಬುಧವಾರದಿಂದ ಬಿರುಸುಗೊಂಡಿದೆ. ಮಳೆ ಸಂಬಂಧಿ ಅನಾಹುತಕ್ಕೆ ಉಡುಪಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹಾರಾಡಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಅಣ್ಣ- ತಮ್ಮಂದಿರಿಬ್ಬರು ದೋಣಿ ಮಗುಚಿ ಮುಳುಗಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಕೃಷ್ಣಾ ನದಿ ಜಲಾನಯನ ಹಾಗೂ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿಯಾಗುತ್ತಿರುವುದರಿಂದ ಕೃಷ್ಣಾ ನದಿಗೆ ಸುಮಾರು ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ 7 ಕೆಳಮಟ್ಟದ ಸೇತುವೆಗಳು ಜಲಾವೃತವಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅಘನಾಶಿನಿ, ವರದಾ, ಶಾಲ್ಮಲಾ, ಕಾಳಿ ನದಿಗಳಲ್ಲಿ ನೀರಿನ ಮಟ್ಟ ತೀವ್ರ ಏರಿಕೆಯಾಗಿದೆ.

ಭಾರೀ ಮಳೆ: ಯಾವ ಜಲಾಶಯದಲ್ಲಿ ಎಷ್ಟು ನೀರಿದೆ?
ಜಲಾಶಯ ಗರಿಷ್ಠ ಮಟ್ಟ ಇಂದಿನ ನೀರಿನ ಮಟ್ಟ ಒಳ ಹರಿವು ಹೊರ ಹರಿವು
ಲಿಂಗನಮಕ್ಕಿ 1819 1778.40 46,341 ----
ತುಂಗಾಭದ್ರಾ 1633 1614.67 68,312 1116
ಹಾರಂಗಿ 2,859 2856.60 11,490 8,670
ಕೆಆರ್‌ಎಸ್‌‌ 124 106.40 35,373 6610
ಹೇಮಾವತಿ 2922 2902.75 26,525 250
ಕಬಿನಿ 2284 2281.50 35,000 35,000

*ನೀರಿನ ಮಟ್ಟ ಅಡಿಗಳಲ್ಲಿ
*ಒಳ ಹರಿವು ,ಹೊರಹರಿವು ಕ್ಯೂಸೆಕ್‌ ಲೆಕ್ಕದಲ್ಲಿ

ಕ್ಯೂಸೆಕ್‌ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+