ಶಿವಮೊಗ್ಗ ರಾಜಕೀಯ : ಜೆಡಿಎಸ್‌ ಸೇರಿದ ಆರ್.ಎಂ.ಮಂಜುನಾಥ ಗೌಡ

ಬೆಂಗಳೂರು, ಜನವರಿ 23 : ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಜೆಡಿಎಸ್ ಸೇರಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದಿಂದ ಅವರು 2018ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಮಂಗಳವಾರ ಬೆಂಗಳೂರಿನ ಪದ್ಮನಾಭನಗರದಲ್ಲಿನ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಆರ್.ಎಂ.ಮಂಜುನಾಥ ಗೌಡ ಅವರು ಬೆಂಬಲಿಗರ ಜೊತೆ ಪಕ್ಷ ಸೇರಿದರು. ಮಧು ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದ ಆರ್.ಎಂ.ಮಂಜುನಾಥ ಗೌಡರು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕೆಲವು ದಿನಗಳ ಹಿಂದೆ ಅವರು ಶೃಂಗೇರಿಯಲ್ಲಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದರು. ಇಂದು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಆರ್.ಎಂ.ಮಂಜುನಾಥ ಗೌಡರು ಪಕ್ಷ ಸೇರಿರುವುದರಿಂದ ತೀರ್ಥಹಳ್ಳಿ ಕ್ಷೇತ್ರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ. ಹಾಲಿ ಶಾಸಕ ಕಿಮ್ಮನೆ ರತ್ನಾಕರ, ಮಾಜಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಆರ್.ಎಂ.ಮಂಜುನಾಥ ಗೌಡ ನಡುವೆ 2018ರ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. ಕಳೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಕೆಜೆಪಿ ಅಭ್ಯರ್ಥಿಯಾಗಿದ್ದರು

ಕೆಜೆಪಿ ಅಭ್ಯರ್ಥಿಯಾಗಿದ್ದರು

2013ರ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡರು ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ ವಿರುದ್ಧ ಸೋಲು ಕಂಡಿದ್ದರು.

ಕಾಂಗ್ರೆಸ್‌ನಿಂದ ದೂರವಾಗಿದ್ದರು

ಕಾಂಗ್ರೆಸ್‌ನಿಂದ ದೂರವಾಗಿದ್ದರು

2013ರ ಚುನಾವಣೆಯಲ್ಲಿ 35,817 ಮತಗಳನ್ನು ಪಡೆದು ಆರ್.ಎಂ.ಮಂಜುನಾಥ ಗೌಡರು ಸೋಲು ಅನುಭವಿಸಿದ್ದರು. ನಂತರ ಕಾಂಗ್ರೆಸ್‌ ಸೇರಿದ್ದರು. ಆದರೆ, ಪಕ್ಷದ ಚಟುವಟಿಕೆಗಳಿಂದ ದೂರವಿದ್ದರು.

ಆರ್.ಮದನ್ ಕ್ಷೇತ್ರದ ನಾಯಕ

ಆರ್.ಮದನ್ ಕ್ಷೇತ್ರದ ನಾಯಕ

2013ರ ಚುನಾವಣೆಯಲ್ಲಿ ಆರ್.ಮದನ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆರ್.ಎಂ.ಮಂಜುನಾಥ ಗೌಡರು ಪಕ್ಷ ಸೇರುವ ವಿಚಾರ ಚರ್ಚೆಗೆ ಬಂದಾಗ, ಮದನ್ ನಿರ್ಧಾರವನ್ನು ಸ್ವಾಗತಿಸಿದ್ದರು. ಆದ್ದರಿಂದ, ಈ ಬಾರಿ ಮಂಜುನಾಥ ಗೌಡರು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಬಲ

ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಬಲ

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಜೆಡಿಎಸ್‌ 2013ರ ಚುನಾವಣೆಯಲ್ಲಿ ಜಯಗಳಿಸಿದೆ. ಸೊರಬ - ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರ - ಶಾರದಾ ಪೂರ‍್ಯನಾಯ್ಕ, ಭದ್ರಾವತಿ - ಅಪ್ಪಾಜಿ ಗೌಡ ಶಾಸಕರು. ಆರ್.ಎಂ.ಮಂಜುನಾಥ ಗೌಡರು ಪಕ್ಷ ಸೇರಿರುವುದರಿಂದ ಪಕ್ಷದ ಬಲ ಹೆಚ್ಚಿದೆ.

ಕುತೂಹಲದ ಕಣವಾದ ಕ್ಷೇತ್ರ

ಕುತೂಹಲದ ಕಣವಾದ ಕ್ಷೇತ್ರ

ಆರ್.ಎಂ.ಮಂಜುನಾಥ ಗೌಡ ಅವರು ಜೆಡಿಎಸ್ ಸೇರಿದ್ದರಿಂದ ತೀರ್ಥಹಳ್ಳಿ ಕ್ಷೇತ್ರದ ಚುನಾವಣಾ ಕಣ ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ ಹಾಲಿ ಶಾಸಕರು. ಬಿಜೆಪಿಯಿಂದ ಆರಗ ಜ್ಞಾನೇಂದ್ರ ಅವರು ಅಭ್ಯರ್ಥಿ. ಜೆಡಿಎಸ್‌ನಿಂದ ಆರ್.ಎಂ.ಮಂಜುನಾಥ ಗೌಡರು ಅಭ್ಯರ್ಥಿ. ಮೂವರು ಕ್ಷೇತ್ರದಲ್ಲಿ ಭಾರೀ ಪ್ರಭಾವ ಹೊಂದಿರುವ ವ್ಯಕ್ತಿಗಳು. ಆದ್ದರಿಂದ, 2018ರ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.

ಶಾಸಕರು ಕಿಮ್ಮನೆ ರತ್ನಾಕರ

ಶಾಸಕರು ಕಿಮ್ಮನೆ ರತ್ನಾಕರ

ತೀರ್ಥಹಳ್ಳಿ ಕ್ಷೇತ್ರದಲ್ಲಿ 2013ರದಲ್ಲಿಕಿಮ್ಮನೆ ರತ್ನಾಕರ ಅವರು 37,160 ಮತಗಳನ್ನು ಪಡೆದಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ಆರ್.ಎಂ.ಮಂಜುನಾಥ ಗೌಡರು 35,817 ಮತ ಪಡೆದಿದ್ದರು. ಬಿಜೆಪಿಯ ಆರಗ ಜ್ಞಾನೇಂದ್ರ ಅವರು 34,446 ಮತಗಳನ್ನು ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+