ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ, 3 ಸಾವು
ಚಿಕ್ಕಮಗಳೂರು, ಏಪ್ರಿಲ್ 19 : ಚಿಕ್ಕಮಗಳೂರಿನ ಹಿರೇಗೌಜ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಮೂವರು ಸಾವನ್ನಪ್ಪಿದ್ದಾರೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಮೂವರು ಸ್ಥಳಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತಪಟ್ಟವರನ್ನು ರೂಪಾ (35), ಕಿಶನ್ (10) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರುನಿಂದ ಕಡೂರು ಕಡೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಸಖರಾಯಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ, ಇಬ್ಬರು ಸಾವು : ಬೈಕ್ಗೆ ಲಾರಿ ಡಿಕ್ಕಿ ಹೊಡೆದು ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ಮಂಗಸೂಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟವರನ್ನು ರೂಪಸಿಂಗ್ (45), ಅನುಬಾಯಿ ರಾಠೋಡ್ (40) ಎಂದು ಗುರುತಿಸಲಾಗಿದೆ.
ಕೋಲಾರ, ಅಕ್ಕ-ತಂಗಿ ನೀರು ಪಾಲು : ಕೆರೆಯಲ್ಲಿ ಆಟವಾಡಲು ತೆರಳಿದ್ದ ಅಕ್ಕ-ತಂಗಿ ನೀರುಪಾಲಾಗಿರುವ ಘಟನೆ ಕೋಲಾರದ ಹೂಳಲಿ ಗ್ರಾಮದಲ್ಲಿ ನಡೆದಿದೆ. ಭವ್ಯ (10), ಶಿಲ್ಪ (7) ಮೃತಪಟ್ಟವರು.