ಬಾಗಲಕೋಟೆ : ಭೀಕರ ಅಪಘಾತ, 6 ಸಾವು

ಬಾಗಲಕೋಟೆ, ಸೆಪ್ಟೆಂಬರ್ 08 : ಬಾಗಲಕೋಟೆಯ ಕೊರ್ತಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಶುಕ್ರವಾರ ಬೆಳಗ್ಗೆ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್‌ನಲ್ಲಿ ಕ್ರೂಸರ್ ಮತ್ತು ಕೆಎಸ್ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಬೀಳಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Road accident in Bagalkot, 6 dead, 2 injured

ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಮಹಾರಾಷ್ಟ್ರಕ್ಕೆ ಸೇರಿದ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಕ್ರೂಸರ್‌ನಲ್ಲಿದ್ದ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಗೆ ಕ್ರೂಸರ್ ನಜ್ಜುಗುಜ್ಜಾಗಿದೆ. ಬೀಳಗಿ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+