ಮೈಸೂರು ಬಳಿ ಭೀಕರ ಅಪಘಾತ, 9 ಸಾವು
ಮೈಸೂರು, ಮೇ.14 : ಮೈಸೂರು ಜಿಲ್ಲೆಯ ಕಂಪ್ಲಾಪುರದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದು, ಐದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ, ತಮಿಳುನಾಡು ಪ್ರವಾಸ ಮುಗಿಸಿಕೊಂಡು ವಾಪಸ್ ಟೆಂಪೋ ಟ್ರಾವೆಲರ್ ಗೆ ಗ್ಯಾಸ್ ಟ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಅಪಘಾತದಿಂದಾಗಿ ಟೆಂಪೋ ಟ್ರಾವೆಲರ್ ನಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ಸಾವನ್ನಪ್ಪಿದ್ದು, 5 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ ಮತ್ತು ಕೆ.ಆರ್.ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ನೀಡಲಾಗುತ್ತಿದೆ. [ಮಂಗಳೂರು : ಅಪಘಾತಕ್ಕೆ ಮೂವರು ಬಲಿ]
ಬುಧವಾರ ಮುಂಜಾನೆ 5.30ರ ಸುಮಾರಿಗೆ ನಡೆದ ಈ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಮಂಗಳೂರಿನ ದೇರಳಕಟ್ಟೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಪಿರಿಯಾಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ದೇಹಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದ್ದು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬಂದ ನಂತರ ಶವಗಳನ್ನು ಗುರುತಿಸುವ ಕಾರ್ಯ ನಡೆಯಲಿದೆ ಎಂದು ಮೈಸೂರು ಡಿಸಿಪಿ ಧನಂಜಯ್ ಹೇಳಿದ್ದಾರೆ.











Click it and Unblock the Notifications