ರಸ್ತೆ ಅಪಘಾತ: ವಿಮೆ ಕಂಪನಿಗೆ ಹಿನ್ನೆಡೆ, ಇಂಜಿನಿಯರ್‌ಗೆ ನಾಲ್ಕು ಪಟ್ಟು ಪರಿಹಾರ ಹೆಚ್ಚಿಸಿದ ಹೈಕೋರ್ಟ್

ಬೆಂಗಳೂರು ನ.15: ರಸ್ತೆ ಅಪಘಾತದಲ್ಲಿ ಶೇ.65ರಷ್ಟು ಅಂಗವೈಕಲ್ಯಕ್ಕೆ ಗುರಿಯಾದ ಇಂಜಿನಿಯರ್ ಪದವೀಧರನಿಗೆ ಹೈಕೋರ್ಟ್ ನಾಲ್ಕು ಪಟ್ಟು ಪರಿಹಾರ ಹೆಚ್ಚಿಸಿ ಮಹತ್ವದ ತೀರ್ಪು ನೀಡಿದೆ.

11 ಲಕ್ಷ ರು. ಪರಿಹಾರ ಪಾವತಿಸಲು ಮೋಟಾರು ವಾಹನ ನ್ಯಾಯಾಧೀಕರಣ ಹೊರಡಿಸಿದ ಆದೇಶ ಪ್ರಶ್ನಿಸಿ, ವಿಮಾ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ವಿಮಾ ಕಂಪನಿಗೆ 44 ಲಕ್ಷ ರು. ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

ವಿಮಾ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಆಟೋ ಚಾಲಕ ಕ್ಲೇಮುದಾರನ ನೆರೆಹೊರೆ ನಿವಾಸಿ ಎಂಬುದು ನಿಜ. ಆದರೆ, ಆತ ನ್ಯಾಯಾಧೀಕರಣದ ಮುಂದೆ ಹಾಜರಾಗಿ, ತಾನು ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಲೋಬೋ ಸಂಚರಿಸುತ್ತಿದ್ದ ಬೈಕಿಗೆ ಹೊಡೆಯಿತು ಎಂದು ಒಪ್ಪಿಕೊಂಡಿದ್ದಾನೆ ಎಂದು ಅಭಿಪ್ರಾಯಪಟ್ಟಿತು.

ಹೈಕೋರ್ಟ್ ಆದೇಶವೇನು?: ಘಟನೆಯಿಂದ ಲೋಬೊ ಶೇ.65ರಷ್ಟು ಶಾಶ್ವತ ಅಂಗವೈಕಲ್ಯಕ್ಕೆ ಗುರಿಯಾಗಿದ್ದಾನೆ. ಚಿಕಿತ್ಸೆಗೆ ಐದು ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿದ್ದಾರೆ.

ಅಪಘಾತಕ್ಕೂ ಮುನ್ನ ಇಂಜಿನಿಯರಿಂಗ್ ಪದವೀಧರನಾದ ಲೋಬೋ ಅಬುದಾಭಿಯಲ್ಲಿ ಉದ್ಯೋಗ ಮಾಡುತ್ತಾ ಮಾಸಿಕ 50 ಸಾವಿರ ರು.ಗಿಂತ ಅಧಿಕ ವೇತನ ಪಡೆಯುತ್ತಿದ್ದ. ಅಪಘಾತ ನಡೆದಾಗ 29 ವರ್ಷವಾಗಿತ್ತು. ಹಾಗಾಗಿ, ಪರಿಹಾರ ಮೊತ್ತ ಹೆಚ್ಚಿಸುವುದು ಸೂಕ್ತ ಎಂದು ಆದೇಶಿಸಿದೆ.

Road accident: Know Why HC increased compensation for victim engineer

ಪರಿಹಾರ ಮೊತ್ತವನ್ನು 44, 92,140 ರು.ಗೆ ಹೆಚ್ಚಿಸಿದ ಹೈಕೋರ್ಟ್, ಆ ಮೊತ್ತಕ್ಕೆ ಅಪಘಾತ ನಡೆದ ದಿನದಿಂದ ಅನ್ವಯವಾಗುವಂತೆ ವಾರ್ಷಿಕ ಶೇ.6ರಷ್ಟು ಬಡ್ಡಿ ನೀಡುವಂತೆ ವಿಮಾ ಕಂಪನಿಗೆ ಆದೇಶಿಸಿದೆ.

ವಿಮಾ ಕಂಪನಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಬೈಕು ಹಾಗೂ ಆಟೋ ನಡುವೆ ಡಿಕ್ಕಿಯೇ ಸಂಭವಿಸಿಲ್ಲ. ಆಯಾ ತಪ್ಪಿ ಸವಾರರು ಬೈಕಿನಿಂದ ಬಿದ್ದಿದ್ದಾರೆ. ಆದರೆ ಆಟೋ ರಿಕ್ಷಾ-ಬೈಕು ನಡುವೆ ಅಪಘಾತ ನಡೆದಿರುವುದಾಗಿ ತಿರುಚಲಾಗಿದೆ.

ಆಟೋ ರಿಕ್ಷಾ ಚಾಲಕ, ಕ್ಲೇಮುದಾರ ಲೋಬೋ ನೆರೆಮನೆಯ ನಿವಾಸಿಯಾಗಿದ್ದು, ಪೊಲೀಸರೊಂದಿಗೆ ಸೇರಿ ದಾಖಲೆ ತಿರುಚಿದ್ದಾರೆ. ಆದ್ದರಿಂದ ನ್ಯಾಯಾಧೀಕರಣದ ಆದೇಶ ರದ್ದುಪಡಿಸುವಂತೆ ಕೋರಿದ್ದರು.

ಪ್ರಕರಣದ ವಿವರ: ಮಂಗಳೂರಿನ ಮೂಡುಬಿದರೆ ಹೋಬಳಿಯ ಮಾಸ್ತಿಕಟ್ಟೆ ನಿವಾಸಿ ಅಲ್ವಿನ್ ಲೋಬೋ, ತಮ್ಮ ಸೋದರನೊಂದಿಗೆ 2009ರ ಮೇ 23ರಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಆಟೋ ರಿಕ್ಷಾ ಬೈಕಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಹಿಂಬದಿ ಕುಳಿತಿದ್ದ ಲೋಬೋ ತಲೆ ಮತ್ತು ಎಡಗಾಲಿಗೆ ಗಂಭೀರ ಪೆಟ್ಟು ಬಿದ್ದಿತ್ತು. ನಂತರ ಎ.ಜೆ ಆಸ್ಪತ್ರೆಯಲ್ಲಿ ಲೋಬೋ ಅವರು 2009ರ ಮೇ 23ರಿಂದ ಜು.17ರವರೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ನಂತರದ ವರ್ಷಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಚಿಕಿತ್ಸೆಗಾಗಿ ಒಟ್ಟು 5,24,139.27 ರು. ಖರ್ಚು ಮಾಡಿದ್ದರು. ಪರಿಹಾರ ಕ್ಲೇಮಿನ ವಿಚಾರಣೆ ನಡೆಸಿದ್ದ ಮೋಟಾರು ವಾಹನ ನ್ಯಾಯಾಧೀಕರಣ, ಲೋಬೋ ಅವರಿಗೆ ವಾರ್ಷಿಕ ಶೇ.8ರಷ್ಟು ಬಡ್ಡಿದರದಲ್ಲಿ ಒಟ್ಟು 11,39,340 ರು. ಪರಿಹಾರ ಪಾವತಿಸುವಂತೆ ವಿಮಾ ಕಂಪನಿಗೆ 2015ರ ಜೂ.20ರಂದು ಆದೇಶಿಸಿತ್ತು. ಅದರ ರದ್ದತಿಗೆ ಕೋರಿ ವಿಮಾ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ, ವಿಮೆ ಕಂಪನಿ ಮೇಲ್ಮನವಿ ತಿರಸ್ಕೃತಗೊಂಡಿದ್ದು, ಸಂತ್ರಸ್ತನ ಪರ ಆದೇಶ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+