ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆ ಅಪಘಾತ : ಒಂದು ಗಂಟೆ ರಸ್ತೆಯಲ್ಲಿ ನರಳಾಡಿದ ಬೈಕ್ ಸವಾರ

|
Google Oneindia Kannada News

ಹಾವೇರಿ, ಅಕ್ಟೋಬರ್ 23 : ಜನರು ಮಾನವೀಯತೆಯನ್ನು ಮರೆತಿದ್ದಾರೆಯೇ?. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬ 1 ಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ

ಹೊನ್ನಪ್ಪ ಚಿಗರಿ (48) ಎಂಬ ಬೈಕ್ ಸವಾರನಿಗೆ ರಾಣೆಬೆನ್ನೂರು ತಾಲೂಕಿನ ಮಾಗೋಡ ಗ್ರಾಮದ ಬಳಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೊನ್ನಪ್ಪ ರಸ್ತೆಯಲ್ಲಿ ಬಿದ್ದಿದ್ದಾರೆ. ಆದರೆ, ಯಾರೂ ಆತನ ಸಹಾಯಕ್ಕೆ ಬರಲಿಲ್ಲ. ಸುಮಾರು ಒಂದು ಗಂಟೆಗಳ ಕಾಲ ಅವರು ನರಳಾಡಿದ್ದಾರೆ.

Road accident : No one helps for bike rider

ಅರಣ್ಯ ರಕ್ಷಕ ಹೊನ್ನಪ್ಪ ಚಿಗರಿ ಕೆಲಸದ ನಿಮಿತ್ತ ರಾಣೆಬೆನ್ನೂರಿನಿಂದ ಚಿಗರಿ ಕರೂರು ಗ್ರಾಮಕ್ಕೆ ಹೊರಟ್ಟಿದ್ದರು. ಮಾರ್ಗದಲ್ಲಿ ವೇಗವಾಗಿ ಬಂದ ಕಾರು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಯಲ್ಲಿ ಬಿದ್ದಿದ್ದಾರೆ.

ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರುದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು

ಹೆಲ್ಮೆಟ್ ಹಾಕದ ಕಾರಣೆ ತಲೆಗೆ ಮತ್ತು ಬಾಯಿಗೆ ಬಲವಾಗಿ ಪೆಟ್ಟು ಬಿದ್ದಿದೆ. ರಸ್ತೆಯ ಮಧ್ಯದಲ್ಲಿಯೇ 1 ಘಂಟೆಗಳ ಕಾಲ ಅವರು ನರಳಾಡಿದ್ದಾರೆ. ರಸ್ತೆಯಲ್ಲಿಯೇ ಬಿದ್ದು ಹೊರಳಾಡುತ್ತಿದ್ದ ಅವರ ಸಹಾಯಕ್ಕೆ ಯಾರೂ ಬಂದಿಲ್ಲ. ಜನರು ಆಸ್ಪತ್ರೆಗೆ ಸೇರಿಸಲು ಮುಂದಾಗಲಿಲ್ಲ.

Road accident : No one helps for bike rider

ಕೆಲವು ಹೊತ್ತಿನ ನಂತರ ಜನರು ಪೋನ್ ಮಾಡಿ ಅಂಬ್ಯುಲೆನ್ಸ್ ಗೆ ಮಾಹಿತಿ ನೀಡಿದ್ದಾರೆ. 1 ಗಂಟೆ ನಂತರ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಹೊನ್ನಪ್ಪನನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಹೊನ್ನಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ. ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Honnappa Chegari injured in road accident at Ranebennur, Haveri. He spent one hour in pool of blood crying for help. Later he admitted to private hospital Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X