ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್ 24 ರಿಂದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ

ಬೆಂಗಳೂರು, ಮಾರ್ಚ್ 05: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನೌಕರರು ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.

ಸರ್ಕಾರವು ತಮ್ಮ ವೇತನ ಹೆಚ್ಚಳದ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿದೆ. ಇದರಿಂದಾಗಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Road Transport Union Calls For Strike From March 24

"ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. 2016ರಿಂದ ನಮ್ಮ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ, 2021ರಲ್ಲಿ ನಡೆದ ಮುಷ್ಕರದ ವೇಳೆ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ವೇತನ ಪರಿಷ್ಕರಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿ ನಮ್ಮ ಇತರೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದರು. ಆದರೆ, ಎಲ್ಲಾ ಭರವಸೆಗಳು ಕಾಗದದಲ್ಲಿಯೇ ಉಳಿದಿವೆ ಮತ್ತು ನಮ್ಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.

ಪ್ರಯಾಣಿಕರನ್ನು ತೊಂದರೆಗೆ ಸಿಲುಕಿಸಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಒಕ್ಕೂಟದ ಸದಸ್ಯರು ಹೇಳಿದ್ದಾರೆ. "ಮಾರ್ಚ್ 1 ರಂದು ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆಗೆ ಕರೆದಿದ್ದು, ಮುಷ್ಕರಕ್ಕೆ ಕರೆ ನೀಡುತ್ತೇವೆ ಎಂದು ಹೇಳಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಾವು ಸೋಮವಾರ ಕಾರ್ಮಿಕ ಆಯುಕ್ತರಿಗೆ 14 ದಿನಗಳ ಪ್ರತಿಭಟನೆಯ ನೋಟಿಸ್ ನೀಡುತ್ತೇವೆ" ಎಂದು ತಿಳಿಸಿದ್ದಾರೆ.

Road Transport Union Calls For Strike From March 24

"ಮಾರ್ಚ್ 24 ರಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ನಮ್ಮ ವೇತನ ಹೆಚ್ಚಳ ಮತ್ತು 2021 ರ ಪ್ರತಿಭಟನೆಯಲ್ಲಿ ಭಾಗವಹಿಸಿ ವಜಾಗೊಂಡ ನೌಕರರನ್ನು ಹಿಂಪಡೆಯುವುದು, ನೌಕರರು ಮತ್ತು ಇತರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಕದಲುವುದಿಲ್ಲ" ಎಂದು ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+