Breaking; ರೋಹಿಣಿ ಸಿಂಧೂರಿ ಪ್ರಕರಣ, ಡಿ. ರೂಪಾಗೆ ನೋಟಿಸ್

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಡಿ. ರೂಪಾಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು, ಫೆಬ್ರವರಿ 23; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದರು. ಅರ್ಜಿಯ ವಿಚಾರಣೆ ನೆಡೆಸಿದ ಕೋರ್ಟ್‌ ಡಿ. ರೂಪಾಗೆ ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆಯನ್ನೂ ನೀಡಿ, ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.

ರೋಹಿಣಿ ಸಿಂಧೂರಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ಗುರುವಾರ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ನಡೆಯಿತು. ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಅವಕಾಶ ನೀಡಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ಆದೇಶ ಹೊರಡಿಸಿತು.

Rohini Sindhuri Petition Against D Roopa Court Issued Notice

ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಬುಧವಾರ ಕೋರ್ಟ್‌ ಮೆಟ್ಟಿಲೇರಿತ್ತು. ರೋಹಿಣಿ ಸಿಂಧೂರಿ ರೂಪಾ ಅವರು ತಮ್ಮ ಬಗ್ಗೆ ವಿಚಾರ ಪ್ರಸ್ತಾಪ ಮಾಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ರೂಪಾ ಬಿಡುಗಡೆ ಮಾಡಿದ ಫೋಟೋಗಳನ್ನು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆಯೂ ಮನವಿ ಮಾಡಿದ್ದರು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಪರ ವಕೀಲರು ರೂಪಾ ಮೌದ್ಗಿಲ್ ಸಾಮಾಜಿಕ ಜಾಲತಾಣದ ಮೂಲಕ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಮೊಬೈಲ್ ನಂಬರ್ ಸಾರ್ವಜನಿಕಗೊಳಿಸಿದ್ದಾರೆ ಎಂದು ಉಲ್ಲೇಖ ಮಾಡಿದ್ದರು. ರೋಹಿಣಿ ಸಿಂಧೂರಿ ಪರ ವಕೀಲರ ವಾದ ಆಲಿಸಿದ್ದ ಕೋರ್ಟ್‌ ಅರ್ಜಿಯ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ ಮಾಡಿತ್ತು.

ಗುರುವಾರ ಮತ್ತೆ ಅರ್ಜಿಯ ವಿಚಾರಣೆ ನಡೆಯಿತು. ರೂಪಾಗೆ ನೋಟಿಸ್ ನೀಡುವ ಸಂದರ್ಭದಲ್ಲಿ ಕೋರ್ಟ್‌ ರೋಹಿಣಿ ಸಿಂಧೂರಿ ಮಾನಹಾನಿ ಮಾಡುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸೂಚನೆ ನೀಡಿದೆ. ಮಧ್ಯಂತರ ಆದೇಶದ ಬಗ್ಗೆಯೂ ಮಾರ್ಚ್ 7ರಂದು ಮತ್ತೆ ವಿಚಾರಣೆ ನಡೆಯಲಿದೆ. ಅಂದು ರೂಪಾ ಪರ ವಕೀಲರು ಸಹ ಆಕ್ಷೇಪಣೆ ಸಲ್ಲಿಕೆ ಮಾಡಲಿದ್ದಾರೆ.

ರೋಹಿಣಿ ಸಿಂಧೂರಿ, ಡಿ. ರೂಪಾ ಜಟಾಪಟಿ ಬಳಿಕ ಮಂಗಳವಾರ ಕರ್ನಾಟಕ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಆದರೆ ಅವರಿಗೆ ಯಾವುದೇ ಸ್ಥಳವನ್ನು ನಿಯೋಜನೆ ಮಾಡಿಲ್ಲ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಸಹ ಇಬ್ಬರು ಅಧಿಕಾರಿಗಳು ದೂರು ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+