ಲೋಕಸಭೆ ಚುನಾವಣೆಗೆ ರೋಷನ್ ಬೇಗ್ ಸ್ಪರ್ಧೆ?

Recommended Video

      Lok Sabha Elections 2019 : ಮಾಜಿ ಸಚಿವ, ಕಾಂಗ್ರೆಸ್ ನ ಶಾಸಕ ಸ್ಪರ್ಧೆ ಸಾಧ್ಯತೆ | Oneindia Kannada

      ಬೆಂಗಳೂರು, ಆಗಸ್ಟ್ 01 : ಮಾಜಿ ಸಚಿವ ರೋಷನ್ ಬೇಗ್ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರು ಈಗ ಸಂಸದರಾಗಲು ಬಯಸಿದ್ದಾರೆ.

      2018ರ ಚುನಾವಣೆಯಲ್ಲಿ ರೋಷನ್ ಬೇಗ್ ಶಿವಾಜಿನಗರ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವ ಸ್ಥಾನ ಸಿಕ್ಕಿಲ್ಲ.

      ಈಗ ಲೋಕಸಭೆ ಚುನಾವಣೆಯತ್ತ ಗಮನ ಹರಿಸಿರುವ ಅವರು ಬೆಂಗಳೂರಿನ ಮೂರು ಕ್ಷೇತ್ರಗಳ ಪೈಕಿ ಯಾವುದಾದದರೂ ಒಂದು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಒಂದು ವೇಳೆ ಅವರು ಸಂಸದರಾಗಿ ಆಯ್ಕೆಯಾದರೆ ಪುತ್ರ ಶಿವಾಜಿನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

      Roshan Baig may contest for Lok Sabha Elections 2019

      ಬೆಂಗಳೂರು ನಗರದಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಎಂಬ ಮೂರು ಕ್ಷೇತ್ರಗಳಿವೆ. ಪ್ರಸ್ತುತ ಮೂರು ಕ್ಷೇತ್ರಗಳು ಬಿಜೆಪಿಯ ವಶದಲ್ಲಿವೆ. ಮೂರು ಕ್ಷೇತ್ರಗಳ ಪೈಕಿ ಎಲ್ಲಿಂದ ರೋಷನ್ ಬೇಗ್ ಸ್ಪರ್ಧೆ ಮಾಡಲಿದ್ದಾರೆ? ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

      ರೋಷನ್ ಬೇಗ್ 2018ರ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ 59,742 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು. ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ, ಮಾಹಿತಿ ಮತ್ತು ಹಜ್ ಸಚಿವರಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+