ರಾಜ್ಯಸಭೆ ಚುನಾವಣೆಗೆ ರೋಷನ್ ಬೇಗ್ ಕಾಂಗ್ರೆಸ್ ಅಭ್ಯರ್ಥಿ?

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 09 : ರಾಜ್ಯಸಭೆಯ 4 ಸ್ಥಾನಗಳನ್ನು ಭರ್ತಿ ಮಾಡಲು ಮಾರ್ಚ್ 23ರಂದು ಚುನಾವಣೆ ನಡೆಯುತ್ತಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದ ರೋಷನ್ ಬೇಗ್ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೊಂದಿರುವ ಬಲಾಬಲದ ಆಧಾರದ ಮೇಲೆ ಮೂವರು ಸದಸ್ಯರನ್ನು ಆಯ್ಕೆ ಮಾಡಿ ರಾಜ್ಯಸಭೆಗೆ ಕಳಿಸಬಹುದಾಗಿದೆ. ಮೂವರು ಅಭ್ಯರ್ಥಿಗಳ ಪೈಕಿ ರೋಷನ್ ಬೇಗ್ ಅವರು ಸಹ ಒಬ್ಬರು ಎಂಬ ಸುದ್ದಿ ಹಬ್ಬಿದೆ.

ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಲು ಪೈಪೋಟಿ!

ರೋಷನ್ ಬೇಗ್ ಹಾಲಿ ಶಿವಾಜಿನಗರ ಕ್ಷೇತ್ರದ ಶಾಸಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಅವರು, ನಗರಾಭಿವೃದ್ಧಿ, ಮಾಹಿತಿ ಮತ್ತು ಹಜ್ ಸಚಿವರು. ಈ ಬಾರಿಯ ವಿಧಾನಸಭೆ ಚುನಾವಣೆಗೆ ಅವರು ಸ್ಪರ್ಧಿಸುವುದಿಲ್ಲ ಎಂಬ ಸುದ್ದಿಗಳು ಹಬ್ಬಿದ್ದವು.

Roshan Baig may contest for Rajya Sabha election

2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೆ.ರೆಹಮಾನ್ ಖಾನ್ (ಕಾಂಗ್ರೆಸ್), ಎಂ.ರಾಜೀವ್ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ್ ಸೇಡಂ (ಬಿಜೆಪಿ), ಆರ್.ರಾಮಕೃಷ್ಣ (ಬಿಜೆಪಿ) ಅವರ ಅವಧಿ ಏಪ್ರಿಲ್ 2ಕ್ಕೆ ಅಂತ್ಯಗೊಳ್ಳಲಿದೆ.

ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿ

ಈ ಸ್ಥಾನಗಳನ್ನು ಭರ್ತಿ ಮಾಡಲು ಮಾರ್ಚ್ 23ರಂದು ಚುನಾವಣೆ ನಡೆಯಲಿದೆ. ಕೆ.ರೆಹಮಾನ್ ಖಾನ್ ಅವರ ಸ್ಥಾನಕ್ಕೆ ರೋಷನ್ ಬೇಗ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಸದ್ಯದ ಸುದ್ದಿ.

Roshan Baig may contest for Rajya Sabha election

2018ರ ವಿಧಾನಸಭೆ ಚುನಾವಣೆಗೆ ಶಿವಾಜಿನಗರ ಕ್ಷೇತ್ರದಿಂದ ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.

ಶಿವಾಜಿನಗರದಿಂದ ಕಟ್ಟಾ ಸುಬ್ರಮಣ್ಯ ನಾಯ್ಡು ಸ್ಪರ್ಧೆ?

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Minister for Urban Development R.Roshan Baig may contest for Rajya Sabha election. Roshan Baig sitting MLA of Shivajinagar assembly constituency, Bengaluru. Rajya Sabha election will be held on March 23, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ