• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರಿಟೀಷ್‌ ಕೌನ್ಸಿಲ್ ಜತೆ ದುಂಡುಮೇಜಿನ ಸಭೆ ನಡೆಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ

|
Google Oneindia Kannada News

ಬೆಂಗಳೂರು, ಜು. 15: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಎರಡನೇ ದುಂಡುಮೇಜಿನ ನೀತಿ ಸಂವಾದ ನಡೆಯಿತು. ವರ್ಚುಯಲ್ ಸಂವಾದ ಉದ್ಘಾಟಿಸಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಮಾತನಾಡಿದರು.

"ಕೋವಿಡ್ ಬಿಕ್ಕಿಟ್ಟಿನ ನಂತರ ಶೈಕ್ಷಣಿಕ ಕ್ಷೇತ್ರವು ಬಹುದೊಡ್ಡ ಬದಲಾವಣೆ ಹಂತದಲ್ಲಿದೆ. ಇದಕ್ಕೆ ಪೂರಕವಾಗಿ ರಾಷ್ಡ್ರೀಯ ಶಿಕ್ಷಣ ನೀತಿಯೂ ಜಾರಿ ಆಗುತ್ತಿರುವುದರಿಂದ ಶಿಕ್ಷಣ ಸುಧಾರಣೆಗಳು ವೇಗವಾಗಿ ಕಾರ್ಯರೂಪಕ್ಕೆ ಬರಲಿವೆ" ಎಂದು ಇದೇ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು. "ಈ ನೀತಿಯೂ ಬಹು ಶಿಸ್ತಿನ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲಿಯುವಿಕೆ ಹಾಗೂ ಬೋಧನೆಯ ಸ್ವರೂಪವೇ ವಿಭಿನ್ನವಾಗಿರುತ್ತದೆ. ವಿದ್ಯಾರ್ಥಿಗಳ ಜ್ಞಾನಾರ್ಜನೆ ವೃದ್ಧಿಸುವುದರ ಜತೆಗೆ, ಅವರ ಕುಶಲತೆಯನ್ನು ಹೆಚ್ಚಿಸಿ ಕೈಗಾರಿಕೆಗಳಿಗೆ ಗುಣಮಟ್ಟದ ಮಾನವ ಸಂಪನ್ಮೂಲ ಸೃಷ್ಟಿಗೆ ಹೆಚ್ಚು ಉಪಯುಕ್ತವಾಗುತ್ತದೆ" ಎಂದು ಡಿಸಿಎಂ ಹೇಳಿದರು.

ಸಂವಾದದಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕಾಮಿಕ್ಸ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಾನುಮೂರ್ತಿ, ಲಂಡನ್‌ನ ಜೈವಿಕ ತಂತ್ರಜ್ಞಾನ ಎಂಜಿನಿಯರಿಂಗ್ ಸಂಸ್ಥೆಯ ಪ್ರೊ. ಪ್ರಶಾಂತ್ ಝಾ, ನ್ಯೂ ಕ್ಯಾಸ್ಟಲ್ ವಿವಿಯ ಸಂಯೋಜಿತ ಕೇಂದ್ರದ ನಿರ್ದೇಶಕರಾದ ಸಾರಾ ಗ್ರಹಾಂ, ಬ್ರಿಟೀಷ್‌ ಕೌನ್ಸಿಲ್‌ನ ದಕ್ಷಿಣ ಭಾರತೀಯ ನಿರ್ದೇಶಕರಾದ ಜನಕಾ ಪುಷ್ಪನಾಥನ್‌ ಹಾಗೂ ಕರ್ನಾಟಕ ಉನ್ನತ ಶಿಕ್ಷಣ ಮಂಡಳಿ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಷಿ ಮುಂತಾದವರು ಭಾಗಿಯಾಗಿದ್ದರು.

English summary
Solving real-life problems demands not only competence in a discipline but also multi-disciplinary and inter-disciplinary understanding, DyCM, Dr.C.N. Ashwatha Narayana, who is also the minister of higher education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X