ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್‍ಕುಮಾರ್ ಕಟೀಲ್

|
Google Oneindia Kannada News

ಬೆಂಗಳೂರು, ನವೆಂಬರ್ 29: ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ತಿಳಿಸಿದ್ದಾರೆ.

ರೌಡಿ ಶೀಟರ್ ಸೈಲೆಂಟ್ ಸುನೀಲ್ ಜತೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು: ಕಾಂಗ್ರೆಸ್ ಕಿಡಿರೌಡಿ ಶೀಟರ್ ಸೈಲೆಂಟ್ ಸುನೀಲ್ ಜತೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು: ಕಾಂಗ್ರೆಸ್ ಕಿಡಿ

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.

rowdy sunil can not join bjp say nalin kumar kateel

ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಏನಿದು ವಿವಾದ.?

ಚಾಮರಾಜಪೇಟೆಯ ಬಿ.ಎಸ್‌. ವೆಂಕಟರಾಮ್‌ ಕಲಾಭವನದಲ್ಲಿಸೈಲೆಂಟ್‌ ಸುನೀಲ್‌ ಭಾನುವಾರ ಬೃಹತ್‌ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್‌, ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌. ರಮೇಶ್‌ ಹಾಗೂ ಇತರರು ಸೈಲೆಂಟ್‌ ಸುನೀಲ್‌ ಜತೆಗೆ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ವ್ಯಾಪಕ ಆಕ್ಷೇಪ ಕೇಳಿಬಂದಿದೆ.

ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ಮುಖಂಡರು ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸೈಲೆಂಟ್‌ ಸುನೀಲ್‌ನೊಂದಿಗೆ ವೇದಿಕೆ ಹಂಚಿಕೊಂಡ ಬಗ್ಗೆ ಕಾಂಗ್ರೆಸ್‌ ಕಿಡಿಕಾರಿದೆ. ''ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿಅಪರಾಧ ಪ್ರಕರಣ ಸಂಖ್ಯೆ ಏರದೇ ಇರುತ್ತದೆಯೇ? ಗೃಹ ಸಚಿವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

rowdy sunil can not join bjp say nalin kumar kateel

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್‌ ಸುನೀಲ್‌ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್‌ . ಗೃಹ ಸಚಿವರೇ ಸೈಲೆಂಟ್‌ ಸುನೀಲನಿಗಾಗಿ ಪೊಲೀಸರು ಹುಡುಕುತ್ತಿರಲಿಲ್ಲವೇ. ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ. ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಪ್ರಶ್ನಿಸಿದೆ.

ರೌಡಿಶೀಟರ್‌ ಸೈಲೆಂಟ್‌ ಸುನೀಲ್‌ ರಾಜಕೀಯ ಕ್ಷೇತ್ರ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾನೆ. ಚಾಮರಾಜಪೇಟೆ ಕ್ಷೇತ್ರದ ವಾರ್ಡ್‌ವೊಂದರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗುತ್ತಿದ್ದಾನೆ ಎಂಬ ಮಾತುಗಳ ಬೆನ್ನಲ್ಲೇ ಬಿಜೆಪಿ ನಾಯಕರು ಸುನೀಲ್‌ ಜತೆಗೆ ವೇದಿಕೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇತ್ತ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ತಿರುಗೇಟು ನೀಡಿದ್ದಾರೆ.

English summary
rowdy sunil can not join bjp say nalin kumar kateel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X