• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಒಲಿಂಪಿಕ್ಸ್‌ಗೆ ಆಯ್ಕೆಯಾಗುವ ರಾಜ್ಯದ ಕ್ರೀಡಾಪಟುಗಳಿಗೆ 10 ಲಕ್ಷ ರೂ ಪ್ರೋತ್ಸಾಹ ಧನ

|
Google Oneindia Kannada News

ಬೆಂಗಳೂರು, ಜೂನ್ 26: ಮುಂದಿನ ತಿಂಗಳು ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ಆಯ್ಕೆಯಾಗುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ತಿಳಿಸಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟವು ಜಪಾನ್‌ನ ಟೋಕಿಯೋದಲ್ಲಿ ಜುಲೈ 23ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿದೆ. ಇದಕ್ಕೆ ರಾಜ್ಯದಿಂದ ಒಬ್ಬರ ಆಯ್ಕೆ ಖಚಿತವಾಗಿದೆ. ಉಳಿದ ನಾಲ್ಕು ಮಂದಿ ಕ್ರೀಡಾಪಟುಗಳ ಹೆಸರು ಸಂಭವನೀಯ ಪಟ್ಟಿಯಲ್ಲಿದೆ.

ಎಲ್ಲ ಖಾಸಗಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಎನ್‍ಎಸ್‍ಎಸ್ ಘಟಕ ಕಡ್ಡಾಯಎಲ್ಲ ಖಾಸಗಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಎನ್‍ಎಸ್‍ಎಸ್ ಘಟಕ ಕಡ್ಡಾಯ

ಒಲಿಂಪಿಕ್ಸ್ ಸಂಬಂಧ ಸಚಿವ ನಾರಾಯಣ ಗೌಡ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. "ಒಲಿಂಪಿಕ್ಸ್‌ಗೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ. ಅವರಿಗೆ ಮೂಲ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡಬೇಕಿದೆ" ಎಂದು ಹೇಳಿದರು.

"ಭಾರತ ಸರ್ಕಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿ ಸಿದ್ಧಪಡಿಸಿದೆ. ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿದ್ದಾರೆ. ಆಯ್ಕೆಯಾದವರಿಗೆ 10 ಲಕ್ಷ ರೂ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ" ಎಂದು ತಿಳಿಸಿದರು.

ಪೌವಾದ್ ಮಿರ್ಜಾ, ಈಕ್ವೆಸ್ಟ್ರಿಯನ್ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ಎಸ್‌.ವಿ. ಸುನೀಲ್- ಹಾಕಿ, ರೋಹನ್ ಬೋಪಣ್ಣ- ಟೆನ್ನಿಸ್, ಶ್ರೀ ಹರಿ ನಟರಾಜ್- ಈಜು, ಕುಮಾರಿ ಅದಿತಿ ಅಶೋಕ್- ಗಾಲ್ಫ್ ಇವರೆಲ್ಲರೂ ಸಂಭವನೀಯ ಪಟ್ಟಿಯಲ್ಲಿದ್ದಾರೆ.

English summary
Rs 10 lakh incentives will be given to Karnataka Athletes selected for Tokyo Olympics says Minister Narayana Gowda,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X