Breaking; ವಿಧಾನಸೌಧದಲ್ಲಿ ಬ್ಯಾಗ್‌ನಲ್ಲಿ 10 ಲಕ್ಷ ರೂ. ಪತ್ತೆ

ಬೆಂಗಳೂರು, ಜನವರಿ 05; ವಿಧಾನಸೌಧಕ್ಕೆ ಆಗಮಿಸಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬ್ಯಾಗ್‌ನಲ್ಲಿ 10 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ ಜಗದೀಶ್ ಎಂಬುವವರ ಬ್ಯಾಗ್‌ನಲ್ಲಿ 10 ಲಕ್ಷ ರೂ. ಹಣ ಪತ್ತೆಯಾಗಿದೆ. ವಿಧಾನಸೌಧದ ಭದ್ರತಾ ಸಿಬ್ಬಂದಿ ಹಣವನ್ನು ಜಪ್ತಿ ಮಾಡಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದಾಗ ಬ್ಯಾಗ್ ಪರಿಶೀಲನೆ ಮಾಡಲಾಗಿದೆ. ಆಗ ಹಣ ಇರುವುದು ಗೊತ್ತಾಗಿದೆ. ಆಗ ಭದ್ರತಾ ಸಿಬ್ಬಂದಿ ದಾಖಲೆ ಕೇಳಿದ್ದಾರೆ. ಆದರೆ ದಾಖಲೆಗಳು ಇಲ್ಲದ ಕಾರಣ ಹಣ ಜಪ್ತಿ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

Rs 10 Lakh Recovered From Bag At Vidhana Soudha

ಹಣವನ್ನು ವಶಕ್ಕೆ ಪಡೆದಿರುವ ವಿಧಾನಸೌಧ ಠಾಣೆ ಪೊಲೀಸರು ಅಕ್ರಮ ಹಣ ಹೊಂದಿದ್ದ ಆರೋಪದಡಿ ಜಗದೀಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ ಜಗದೀಶ್ ಮಂಡ್ಯಕ್ಕೆ ಹೋಗುತ್ತಿದ್ದೆ. ಕೆಲಸ ಇದ್ದಿದ್ದರಿಂದ ವಿಧಾನಸೌಧಕ್ಕೆ ಆಗಮಿಸಿದ್ದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಆದರೆ ಹಣವನ್ನು ಎಲ್ಲಿಂದ ತಂದಿದ್ದರು, ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು? ಎಂಬುದಕ್ಕೆ ಯಾವುದೇ ದಾಖಲೆ ನೀಡಿಲ್ಲ. ಆದ್ದರಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಟ್ವೀಟ್; ವಿಧಾನಸೌಧದಲ್ಲಿ 10 ಲಕ್ಷ ರೂ. ಹಣ ಸಿಕ್ಕ ಪ್ರಕರಣದ ಕುರಿತು ಕರ್ನಾಟಕ ಕಾಂಗೆಸ್ ಟ್ವೀಟ್ ಮಾಡಿದೆ, "ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು. ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ" ಎಂದು ದೂರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+