Karnataka Budget 2023 : ಗಡಿಭಾಗದ ಕನ್ನಡಿಗರಿಗೆ ಸರ್ಕಾರದ ಬಂಪರ್ ಗಿಫ್ಟ್, ಕ್ರಿಯಾಯೋಜನೆ ರೂಪಿಸಲು ಸೂಚನೆ

ಈ ಭಾರಿಯ ಬಜೆಟ್‌ನಲ್ಲಿ ಗಡಿ ಭಾಗದ ಅಭಿವೃದ್ಧಿಗಗಿ ರಾಜ್ಯ ಸರ್ಕಾರ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಎಷ್ಟು ಅನುದಾನ ಒದಗಿಸಲಿದೆ, ಗಡಿಭಾಗದ ಕನ್ನಡಿಗರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಮುಂದೆ ಓದಿ.

ಬೆಂಗಳೂರು, ಫೆಬ್ರುವರಿ 03: ಗಡಿಭಾಗದ ಅಭಿವೃದ್ಧಿ ಮಾಡುವ ಕುರಿತು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 100 ಕೋಟಿ ರೂಪಾಯಿ ಅನುದಾನಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ಗಡಿಭಾಗದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗಕ್ಕೆ ಕೈಗಾರಿಕೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಕುರಿತು ಕೆಲಸ ಮಾಡಬೇಕಿದೆ. ಈ ಸಂಬಂಧ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಇದೇ ವರ್ಷದ ಮಾರ್ಚ್ 31 ರೊಳಗೆ ಸರ್ಕಾರ 100 ಕೋಟಿ ರೂ. ಒದಗಿಸಲಿದೆ. ಈ ಅನುದಾನಕ್ಕಾಗಿ ಕ್ರಿಯಾಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಅವರು ನಿರ್ದೇಶಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಮ್ಮಿಕೊಂಡಿದ್ದ 'ಗಡಿನಾಡ ಚೇತನ' ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ನೀಡಲಾಗಿದೆ. 2023-24 ಸಾಲಿನ ಆಯವ್ಯಯದಲ್ಲಿ 100 ಕೋಟಿ ರೂಪಾಯಿ ಅನುದಾನ ಒದಗಿಸುವ ಭರವಸೆ ನೀಡಿದರು. ಗಡಿಯಾಚೆ ಇರುವ ಕನ್ನಡಿಗರೂ ನಮ್ಮವರೆ ಆಗಿದ್ದು, ಆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಮಾರ್ಗದಲ್ಲಿ ಸರ್ಕಾರ ನಡೆಯಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ಗಡಿ ಅಭಿವೃದ್ಧಿ ನನ್ನ ಕರ್ತವ್ಯ:ಸಿಎಂ

ಗಡಿ ಅಭಿವೃದ್ಧಿ ನನ್ನ ಕರ್ತವ್ಯ:ಸಿಎಂ

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಗಿ ಭಾಷೆ ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತಗೊಳಿಸುವುದು ನನ್ನ ಕರ್ತವ್ಯ. ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು. ಗಡಿಭಾಗದಲ್ಲಿರುವ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಗಡಿಭಾಗದ ಕನ್ನಡಿಗರಿಗೆ ಎಲ್ಲ ಸೌಕರ್ಯಗಳನ್ನು, ಅವಕಾಶಗಳನ್ನು ನೀಡಿ, ಭವಿಷ್ಯವನ್ನು ಬರೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗಡಿ ಪ್ರಾಧಿಕಾರಕ್ಕೆ ಮೊದಲು 8-10 ಕೋಟಿ ನೀಡುತ್ತಿದ್ದರು ಎಂದರು.

ಪ್ರಾದೇಶಿಕ ರಾಜ್ಯಗಳ ಮಧ್ಯೆ ಸಾಮರಸ್ಯ ಇರಬೇಕು

ಪ್ರಾದೇಶಿಕ ರಾಜ್ಯಗಳ ಮಧ್ಯೆ ಸಾಮರಸ್ಯ ಇರಬೇಕು

ಭಾಷಾವಾರು ಪ್ರಾದೇಶಿಕ ರಾಜ್ಯಗಳ ಮಧ್ಯೆ ವ್ಯತ್ಯಾಸಗಳು ಕಂಡು ಬರುವುದ ಸಹಜ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ. ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗೆ ಇದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ. ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯ ಹಾಗೂ ದೇಶದ ಭವಿಷ್ಯಕ್ಕೆ ಒಳಿತಿನ ನಡೆಯಲ್ಲ ಎಂದು ತಿಳಿಸಿದರು.

ಕನ್ನಡಕ್ಕೆ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಲಭಿಸಿವೆ

ಕನ್ನಡಕ್ಕೆ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಲಭಿಸಿವೆ

ಕನ್ನಡ ಭಾಷೆಯು ಶಬ್ದ, ಭಾವಾರ್ಥದಲ್ಲಿ ಶ್ರೀಮಂತವಾಗಿದೆ. ಈ ಭಾಷೆಯಲ್ಲಿ ಸ್ಪಷ್ಟತೆ ಇದ್ದು, ಕನ್ನಡಕ್ಕೆ ಭವ್ಯವಾದ ಭವಿಷ್ಯ ಇದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕನ್ನಡಕ್ಕೆ ಅಂತರ್ಗತ ಶಕ್ತಿಯಿದ್ದು, ಯಾವುದೇ ಸರ್ಕಾರದ ರಕ್ಷಣೆಯ ಅವಶ್ಯಕತೆ ಇಲ್ಲ. ಕನ್ನಡ ಭಾಷೆಗೆ ಯಾವುದೇ ಆತಂಕವಿಲ್ಲ. ಕನ್ನಡಕ್ಕೆ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ. ಎಲ್ಲ ಭಾಷೆಗಳ ಪೈಪೋಟಿ, ಪ್ರಭಾವವನ್ನು ಎದುರಿಸಿ, ಕನ್ನಡ ಸಾಹಿತ್ಯ ಜ್ಞಾನಪೀಠ ಪ್ರಶಸ್ತಿ ಪಡೆಯುತ್ತಿದೆ ಎಂದು ಬಣ್ಣಸಿದರು.

ಜ್ಞಾನವನ್ನು ಸರಳವಾಗಿ ತಿಳಿಸದ ಸಾಹಿತ್ಯವು ನಿಘಂಟು

ಜ್ಞಾನವನ್ನು ಸರಳವಾಗಿ ತಿಳಿಸದ ಸಾಹಿತ್ಯವು ನಿಘಂಟು

ಅದ್ಭುತ ಸಾಹಿತ್ಯವಿರುವ ಕನ್ನಡಕ್ಕೆ ಅದರ ಅರ್ಹತೆಯ ಆಧಾರದದಲ್ಲಿ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಧಕ್ಕಿವೆ. ಬದುಕಿಗೆ ಹತ್ತಿರವಿದ್ದು ಜನಪ್ರಿಯವಾಗಿ ಕನ್ನಡ ಸಾಹಿತ್ಯ ಸಾರ್ವಜನಿಕವಾಗುತ್ತದೆ. ಸಾರ್ವಜನಿಕ ಸಾಹಿತ್ಯವೇ ಶ್ರೇಷ್ಠ ಸಾಹಿತ್ಯ. ಅರ್ಥ, ಒಳರ್ಥಗಳನ್ನು ಸಾಮಾನ್ಯಜನರಿಗೆ ಅತ್ಯಂತ ಸರಳವಾಗಿ ತಿಳಿಸುವುದೇ ಸಾಹಿತ್ಯದ ಕೆಲಸ. ಜ್ಞಾನವನ್ನು ಸರಳವಾಗಿ ಅಭಿವ್ಯಕ್ತಪಡಿಸಲು ಸಾಧ್ಯವಾಗದೇ ಇದ್ದರೆ ಆ ಸಾಹಿತ್ಯವು ನಿಘಂಟಾಗುತ್ತದೆ. ಅಂತಹ ನಿಘಂಟಿನ ಸಾಹಿತ್ಯ ಅನಗತ್ಯ ಎಂದು ಕನ್ನಡ ಸಾಹಿತ್ಯದ ಮಹತ್ವ ತಿಳಿಸಿದರು.

ಆಧ್ಯಾತ್ಮ, ವಿಸ್ಮಯದ ವಿಚಾರಗಳಲ್ಲಿ ಉತ್ತುಮ ಸಾಹಿತ್ಯ ಬರುತ್ತಿದೆ. ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ 'ಅವ್ವ' ಎಂಬ ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಅವರು ಹೇಳಿದರು. ನಮ್ಮ ಚೌಕಟ್ಟು ಮೀರಿ ಕನ್ನಡ ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ತರಬೇಕು ಎಂದು ಹೇಳಿದರು. ಇದೇ ವೇಳೆ ಹಿರಿಯ ಚೇತನರಿಗೆ 'ಗಡಿನಾಡ ಚೇತನ' ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಎಂ.ಎಸ್.ಸಿಂಧೂರ, ಮಾಜಿ ಸಚಿವೆ ಲೀಲಾ ದೇವಿ ಆರ್.ಪ್ರಸಾದ್, ಅಶೋಕ್ ಚಂದರಗಿ ಇನ್ನಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+