ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇದೇ ಮಾರ್ಚ್ 31ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ: ಬಸವರಾಜ ಬೊಮ್ಮಾಯಿ

ಗಡಿ ಅಭಿವೃದ್ಧಿ ಪ್ರಾಧಿಕಾರಕ್ಜೆ ಈಗಾಗಲೇ 25 ಕೋಟಿ ನೀಡಲಾಗಿದೆ. ಮುಂದಿನ ಆಯವ್ಯಯದಲ್ಲಿಯೂ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದರು.

|
Google Oneindia Kannada News

ಬೆಂಗಳೂರು, ಫೆಬ್ರವರಿ 2 : ಗಡಿಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಜೆ ಇದೇ ವರ್ಷದ ಮಾರ್ಚ್ 31 ರೊಳಗೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಈ ಅನುದಾನಕ್ಕೆ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗುರುವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿರುವ " ಗಡಿನಾಡ ಚೇತನ" ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಗಡಿ ಅಭಿವೃದ್ಧಿ ಪ್ರಾಧಿಕಾರಕ್ಜೆ ಈಗಾಗಲೇ 25 ಕೋಟಿ ನೀಡಲಾಗಿದೆ. ಮುಂದಿನ ಆಯವ್ಯಯದಲ್ಲಿಯೂ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸುವ ಭರವಸೆಯನ್ನು ನೀಡಿದರು. ಗಡಿಭಾಗದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಗಡಿ ಆಚೆ ಇರುವ ಕನ್ನಡಿಗರೂ ನಮ್ಮವರು. ಅವರ ಬೇಡಿಕೆಗೂ ಸ್ಪಂದಿಸುವ ಕೆಲಸ ನಾವು ಮಾಡುತ್ತೇವೆ ಎಂದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಗಿ ಭಾಷೆ ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತಗೊಳಿಸುವುದು ನನ್ನ ಕರ್ತವ್ಯ. ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು. ಗಡಿಭಾಗದಲ್ಲಿರುವ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಗಡಿಭಾಗದ ಕನ್ನಡಿಗರಿಗೆ ಎಲ್ಲ ಸೌಕರ್ಯಗಳನ್ನು, ಅವಕಾಶಗಳನ್ನು ನೀಡಿ, ಭವಿಷ್ಯವನ್ನು ಬರೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ..ಗಡಿ ಪ್ರಾಧಿಕಾರಕ್ಕೆ ಮೊದಲು 8-10 ಕೋಟಿ ನೀಡುತ್ತಿದ್ದರು ಎಂದರು.

Rs 100 Crore Will Be Given To The Border Development Authority By March 31 Says Basavaraj Bommai

ಪ್ರಾದೇಶಿಕ ರಾಜ್ಯಗಳಿ ಭಾಷೆವಾರು ಆದಾಗ, ಸಹಜವಾಗಿ ವ್ಯತ್ಯಾಸಗಳು ಬಂದೇಬರುತ್ತವೆ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ. ಆದ ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ. ನಾನು ಬೆಳಗಾವಿ ಅಧಿವೇಶನ ಕ್ಜೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕನ್ನಡದ ಶಬ್ದ, ಭಾವಾರ್ಥದಲ್ಲಿ ಶ್ರೀಮಂತವಾಗಿದೆ.ಈ ಭಾಷೆಯಲ್ಲಿ ಸ್ಪಷ್ಟತೆಯಿದ್ದು, ಕನ್ನಡಕ್ಕೆ ಭವ್ಯವಾದ ಭವಿಷ್ಯ ಇದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕನ್ನಡಕ್ಕೆ ಅಂತರ್ಗತ ಶಕ್ತಿಯಿದ್ದು, ಯಾವುದೇ ಸರ್ಕಾರದ ರಕ್ಷಣೆಯ ಅವಶ್ಯಕತೆಯಿಲ್ಲ.ಕನ್ನಡ ಭಾಷೆಗೆ ಯಾವುದೇ ಆತಂಕವಿಲ್ಲ. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ. ಎಲ್ಲ ಭಾಷೆಗಳ ಪೈಪೋಟಿ, ಪ್ರಭಾವವನ್ನು ಎದುರಿಸಿ, ಕನ್ನಡ ಸಾಹಿತ್ಯ ಜ್ಞಾನಪೀಠ ಪ್ರಶಸ್ತಿ ಪಡೆಯುತ್ತಿದೆ ಎಂದರು.

Rs 100 Crore Will Be Given To The Border Development Authority By March 31 Says Basavaraj Bommai

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್, ಎಂ.ಎಸ್.ಸಿಂಧೂರ, ಮಾಜಿ ಸಚಿವೆ ಲೀಲಾ ದೇವಿ ಆರ್.ಪ್ರಸಾದ್, ಅಶೋಕ್ ಚಂದರಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Border Area Development Authority; Basavaraj Bommai said that Rs 100 crore will be given to the Border Development Authority by March 31,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X