Breaking: ಸರ್ಕಾರಿ ಶಾಲಾ ಮಕ್ಕಳಿಂದ 100 ರೂ. ದೇಣಿಗೆ ಸಂಗ್ರಹ ಆದೇಶ ವಾಪಸ್

ಬೆಂಗಳೂರು, ಅ.22: ಸರ್ಕಾರಿ ಶಾಲಾ ಮಕ್ಕಳಿಂದ ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವ್ಯಕ್ತವಾದ ಬೆನ್ನಲ್ಲೇ ಆದೇಶವನ್ನು ಸರ್ಕಾರ ಹಿಂಪಡೆದಿದೆ.

ಶಾಲಾ ನಿರ್ವಹಣೆ ಹೆಸರಿನಲ್ಲಿ ಪ್ರತಿ ತಿಂಗಳು ಪ್ರತಿ ವಿದ್ಯಾರ್ಥಿಯ ಪೋಷಕರಿಂದ 100 ರೂ. ಸಂಗ್ರಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದಕ್ಕೆ ಶಿಕ್ಷಣ ತಜ್ಞರು ಮತ್ತು ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ಇದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಕೂಡಲೇ ಆದೇಶ ವಾಪಸ್ ಪಡೆದಿದೆ.

ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ಈ ಆದೇಶ ವಾಪಸ್ ಪಡೆಯಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಸುತ್ತೋಲೆ ಹಿಂಪಡೆದಿರುವ ಬಗ್ಗೆ ಮತ್ತೊಂದು ಆದೇಶ ಹೊರಬಿದ್ದಿದೆ.

Rs 100 Donation collection from government school children- order returned

"ಸರ್ಕಾರಿ ಪ್ರಾಥಮಿಕ/ ಪ್ರೌಢ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಶಾಲಾ ಅಭಿವೃದ್ಧಿಗಾಗಿ ದಾನ/ ದೇಣಿಗೆ ಸ್ವೀಕರಿಸುವ ಬಗ್ಗೆ ಹೊರಿಡಿಸಿದ್ದ ಸುತ್ತೋಲೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ," ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+